ನವದೆಹಲಿ: ನೂತನವಾಗಿ ನಿರ್ಮಾಣವಾಗಿರುವ ಸಂಸತ್ ಭವನ ಕೂಡ ಸೋರಲು ಆರಂಭಿಸಿದೆ. ಈ ಹಿನ್ನೆಲೆಯಲ್ಲಿ ವಿಪಕ್ಷ ನಾಯಕರು ಕೇಂದ್ರ ಸರ್ಕಾರವನ್ನು ತೀವ್ರವಾಗಿ ಟೀಕಿಸಿದ್ದಾರೆ.
ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಭಾರೀ ಮಳೆಯಾಗುತ್ತಿದ್ದು, ಇದರ ಪರಿಣಾಮ ಸಂಸತ್ ಭವನದ ಸುತ್ತ ಮುತ್ತಲು ಸಂಪೂರ್ಣವಾಗಿ ಜಲಾವೃತಗೊಂಡಿದೆ. ಇನ್ನೊಂದೆಡೆ ಸಂಸತ್ ಭವನ ಸೋರುತ್ತಿದೆ.
ಲೋಕಸಭೆಯ ಲಾಬಿಯಲ್ಲಿ ನೀರು ಸೋರಿಕೆ ಆಗುತ್ತಿರುವ ಬಗ್ಗೆ ಕಾಂಗ್ರೆಸ್ ಸಂಸದ ಮಾಣಿಕ್ಕಂ ಟ್ಯಾಗೋರ್ ಅವರು ಈ ವಿಷಯದ ಕುರಿತು ಮುಂದೂಡಿಕೆ ನಿರ್ಣಯವನ್ನು ಮಂಡಿಸಿದರೆ, ಅಖಿಲೇಶ್ ಯಾದವ್ ಹೊಸ ಸಂಸತ್ತನ್ನು ನಿರ್ಮಿಸಲು ಕೋಟ್ಯಂತರ ಖರ್ಚು ಮಾಡಿದೆ ಎಂದು ಬಿಜೆಪಿಯನ್ನು ಲೇವಡಿ ಮಾಡಿದ್ದಾರೆ. ಅಲ್ಲದೆ, ಕಲಾಪವನ್ನು ಹಳೆಯ ಕಟ್ಟಡಕ್ಕೆ ಸ್ಥಳಾಂತರಿಸುವಂತೆ ಒತ್ತಾಯಿಸಿದ್ದಾರೆ.
ಸಂಸತ್ ಭವನ ಪೂರ್ಣಗೊಂಡ ಒಂದೇ ವರ್ಷದಲ್ಲಿ ಈ ರೀತಿಯ ಸಮಸ್ಯೆ ಆಗಿದೆ. ಹೀಗಾಗಿ ಮುಂಗಾರು ಅಧಿವೇಶನದ ಉಳಿದ ಭಾಗವನ್ನು ಹಳೆಯ ಸಂಸತ್ತಿನ ಕಟ್ಟಡಕ್ಕೆ ಸ್ಥಳಾಂತರಿಸಬೇಕೆಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296