ಔರಾದ್: ಔರಾದ್–ಬಿ ಪೊಲೀಸ್ ಠಾಣಾ ವ್ಯಾಪ್ತಿಯ ಔರಾದ ಪಟ್ಟಣದ ಕುಮಾರ ಪ್ಯಾಲೇಸ್ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಜೂಜಾಟದಲ್ಲಿ ತೊಡಗಿದ್ದ ಆರೋಪಿಯ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಆರೋಪಿಯಿಂದ 860 ರೂಪಾಯಿಗಳನ್ನು ವಶಕ್ಕೆ ಪಡೆದು ಕಾನೂನು ರೀತಿಯ ಕ್ರಮಕೈಗೊಂಡಿದ್ದಾರೆ.
ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಅವರ ನಿರ್ದೇಶನದಂತೆ ಪಿ.ಎಸ್.ಐ. ವಸೀಮ ಪಟೇಲ್ ತಮ್ಮ ಸಿಬ್ಬಂದಿಯೊಂದಿಗೆ ದಾಳಿ ನಡೆಸಿದ್ದು, ಆರೋಪಿಯ ವಿರುದ್ಧ ಕಾನೂನು ಕ್ರಮ ಕೈಗೊಂಡಿದ್ದಾರೆ.
ಮಟ್ಕಾ ಜೂಜಾಟ ದಾಳಿಯಲ್ಲಿ ಶ್ರಮಿಸಿದ ಔರಾದ–ಬಿ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಯವರ ಕಾರ್ಯಕ್ಕೆ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಶ್ಲಾಘಿಸಿದ್ದಾರೆ.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx