ಸರಗೂರು: ವಿಕಲಚೇತನರ ಹಿತರಕ್ಷಣೆಗಾಗಿ ಇರುವ ಕಾನೂನಿನ ಸೌಲಭ್ಯಗಳ ಬಗ್ಗೆ ಜಾಗೃತಿ ಮೂಡಿಸುವುದು ಅಗತ್ಯ’ ಎಂದು ಪ್ಯಾನೆಲ್ ವಕೀಲ ಹಾಗೂ ವಕೀಲರ ಸಂಘದ ಸಹ ಕಾರ್ಯದರ್ಶಿ ಮಣಿರಾಜು ಹೇಳಿದರು.
ಪಟ್ಟಣದ ತಾಲ್ಲೂಕು ಪಂಚಾಯಿತಿ ಪಟ್ಟಣ ಪಂಚಾಯಿತಿ, ತಾಲ್ಲೂಕು ಕಾನೂನು ಸೇವಾ ಸಮಿತಿ ತಾಲ್ಲೂಕು ವಕೀಲರ ಸಂಘ ಹಾಗೂ ಸರ್ಕಾರಿ ಅಭಿಯೋಜನಾ ಇಲಾಖೆ.ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಮತ್ತು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು ಇವರ ಸಂಯುಕ್ತಾಶ್ರಯದಲ್ಲಿ ಬುಧವಾರ ದಂದು ಹಮ್ಮಿಕೊಳ್ಳಲಾಗಿದ್ದ ಅಂತಾರಾಷ್ಟ್ರೀಯ ವಿಶೇಷ ವಿಕಲಚೇತನರ ಕಾನೂನು ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ವಿಕಲಚೇತನರು ಸರ್ಕಾರದ ಉದ್ಯೋಗ ಹಾಗೂ ವಿವಿಧ ಸೌಲಭ್ಯಗಳು, ಸ್ಥಳೀಯ ನ್ಯಾಯಾಲಯದ ಉಚಿತ ಕಾನೂನು ನೆರವು ಪಡೆದುಕೊಳ್ಳಬೇಕು’ ಎಂದು ಅವರು ಸಲಹೆ ನೀಡಿದರು.
ವಿಕಲಚೇತನರಿಗೆ ಸರಕಾರದಿಂದ ಸಿಗುವ ಅನುದಾನ ಗಳನ್ನು ಸಮರ್ಪಕವಾಗಿ ತಲುಪಿಸಲು ಎಲ್ಲರೂ ಶ್ರಮಿಸಬೇಕು ಎಂದರು.
ಇಓ ಪ್ರೇಮ್ ಕುಮಾರ್ ಮಾತನಾಡಿ, ವಿಕಲಚೇತನರಿಗೆ ನಾಲ್ಕು ರೀತಿಯ ಕಾರ್ಯಕ್ರಮಗಳನ್ನು ಜಾರಿಗೊಳಿಸಬೇಕಾಗಿದೆ. ಮುಖ್ಯವಾಗಿ 0–6 ವರ್ಷದ ಮಕ್ಕಳಿಗೆ ಶೀಘ್ರ ಪತ್ತೆ ಹಚ್ಚುವಿಕೆ ಕಾರ್ಯಕ್ರಮ, 6–14 ವರ್ಷದ ಮಕ್ಕಳಿಗೆ ಶಿಕ್ಷಣ ದೊರಕಿಸಿಕೊಡುವ ಕಾರ್ಯ ಕ್ರಮ, ಯುವಜನರಿಗೆ ಉದ್ಯೋಗಾದಾರಿತ ಕಾರ್ಯಕ್ರಮ ಹಾಗೂ ಇತರರಿಗೆ ಅರಿವು ಮೂಡಿಸುವಂತಹ ಕಾರ್ಯ ಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸ ಬೇಕಿದೆ ಎಂದು ಸಲಹೆ ನೀಡಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ವಿಕಲಚೇತನರ ಸಂಯೋಜಕ ಜವರಾಜು, ಕಳೆದ ಸುಮಾರು ವರ್ಷಗಳಿಂದ ವಿಕಲಚೇತನ ಮಕ್ಕಳಿಗಾಗಿ ಬೇಸಿಗೆಯಲ್ಲಿ ಶಿಬಿರಗಳನ್ನು ಆಯೋಜಿಸುತ್ತಿದೆ. ಪ್ರತಿ ಬಾರಿಯು ಒಂದೊಂದು ವಿಷಯದ ಮೇಲೆ ಶಿಬಿರವನ್ನು ಆಯೋಜಿಸಿದ್ದೇವೆ ಎಂದರು.
ವಿಕಲಚೇತನರು ಸರ್ಕಾರಿ ಸೌಲಭ್ಯಗಳನ್ನು ಪಡೆಯಲು ಯುಡಿಆರ್ ಕಾರ್ಡ್ ಮಾಡಿಸಿಕೊಳ್ಳಬೇಕು.ಸರ್ಕಾರಿ ಆಸ್ಪತ್ರೆಯಲ್ಲಿ ಕಾರ್ಡ್ ಗಳನ್ನು ಮಾಡಲಾಗುತ್ತದೆ. ನಮ್ಮ ವಿಕಲಚೇತನರು ಕಾರ್ಡ್ ಮಾಡಿಸಿಕೊಂಡು ಸೌಲಭ್ಯಗಳನ್ನು ಪಡೆಯಲು ಅವಕಾಶ ಕಲ್ಪಿಸುತ್ತದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಪ್ಯಾನೆಲ್ ವಕೀಲ ಮಹೇಶ್ ಕುಮಾರ್, ವಕೀಲ ಶ್ರೀಕಂಠ ಮೂರ್ತಿ, ಮಾತನಾಡಿದರು. ಕಾರ್ಯಕ್ರಮದಲ್ಲಿ ಪಪಂ ಅಧ್ಯಕ್ಷೆ ಚೈತ್ರ ಸ್ವಾಮಿ, ಉಪಾಧ್ಯಕ್ಷ ಶಿವಕುಮಾರ್ (ವೀರೇಶ್), ಪಪಂ ಮುಖ್ಯಾಧಿಕಾರಿ ಸಂತೋಷ ಕುಮಾರ್, ಎಚ್.ಡಿ.ಕೋಟೆ ವೀಲಕಚೇತನರ ಸಂಯೋಜಕ ಎಸ್.ಎಸ್.ಮಹಾದೇವಯ್ಯ, ತಾಲೂಕು ಕಾನೂನು ಸೇವೆ ಸಮಿತಿ ಸಿಬ್ಬಂದಿಗಳು ಕವಿತಾ, ಶೃತಿ, ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಾದ ಸ್ವಾಮೇಶ್, ಬಸವರಾಜು, ಮಾದೇವ ಮೂರ್ತಿ, ಕೆಂಡಗಣ, ಸಂತೋಷ , ಚಿನ್ನಪ್ಪ ನಾಗರಾಜು, ಕುಮಾರಸ್ವಾಮಿ ಇನ್ನೂ ಮುಖಂಡರು ಸೇರಿದಂತೆ ವಿಕಲಚೇತನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
ವರದಿ: ಹಾದನೂರು ಚಂದ್ರ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


