ತುಮಕೂರು: ನಗರದ ದೇವರಾಯಪಟ್ಟಣ ಭಾಗದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಸ್ಥಳೀಯ ನಿವಾಸಿಗಳಲ್ಲಿ ತೀವ್ರ ಆತಂಕ ಮೂಡಿಸಿದೆ. ದೇವರಾಯಪಟ್ಟಣದಿಂದ ಬಂಡೇಪಾಳ್ಯ ಸಂಪರ್ಕಿಸುವ ರಸ್ತೆಯಲ್ಲಿ ಚಿರತೆಯ ಸಂಚಾರ ಕಂಡುಬಂದಿದ್ದು, ಸುತ್ತಮುತ್ತಲ ಪ್ರದೇಶದ ಜನರು ಭೀತಿಯ ವಾತಾವರಣದಲ್ಲಿ ದಿನ ದೂಡುವಂತಾಗಿದೆ.
ಈ ನಡುವೆ ಇಸ್ರೋ ಆವರಣದ (ಹಿಂದಿನ ಎಚ್ ಎಂಟಿ ಕಾಂಪೌಂಡ್) ಒಳಗೆ ನುಗ್ಗಿದ ಚಿರತೆಯು ಅಲ್ಲಿದ್ದ ಕುರಿಯೊಂದರ ಮೇಲೆ ದಾಳಿ ನಡೆಸಿ ಸಾಯಿಸಿದೆ. ಘಟನೆಯಿಂದ ಆತಂಕಗೊಂಡ ಗ್ರಾಮಸ್ಥರು ಹಾಗೂ ನಿವಾಸಿಗಳು ತಕ್ಷಣವೇ ಅರಣ್ಯ ಇಲಾಖೆಗೆ ಮಾಹಿತಿ ರವಾನಿಸಿದ್ದಾರೆ.
ಸಾರ್ವಜನಿಕರ ದೂರಿನ ಮೇರೆಗೆ ಸ್ಥಳಕ್ಕೆ ಭೇಟಿ ನೀಡಿದ ಅರಣ್ಯ ಇಲಾಖೆ ಅಧಿಕಾರಿಗಳು, ದೇವರಾಯಪಟ್ಟಣದ ಆಂಜನೇಯ ದೇವಸ್ಥಾನದ ಸಮೀಪ ಚಿರತೆಯನ್ನು ಸೆರೆ ಹಿಡಿಯಲು ಬೋನು ಇರಿಸಿದ್ದಾರೆ. ಚಿರತೆ ಪ್ರತ್ಯಕ್ಷವಾಗಿರುವ ಹಿನ್ನೆಲೆಯಲ್ಲಿ ಸ್ಥಳೀಯ ಸಾರ್ವಜನಿಕರು ಮತ್ತು ಮಕ್ಕಳು ವಿಶೇಷವಾಗಿ ರಾತ್ರಿ ವೇಳೆಯಲ್ಲಿ ಜಾಗರೂಕರಾಗಿ ಓಡಾಡಬೇಕೆಂದು ಇಲಾಖೆ ಹಾಗೂ ಸ್ಥಳೀಯ ಮುಖಂಡರು ಮನವಿ ಮಾಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
