ತುಮಕೂರು: ಚಿರತೆ ದಾಳಿಗೆ 9 ಕುರಿಗಳು ಬಲಿಯಾಗಿರುವ ಘಟನೆ ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಸುರುಗೆನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಕೃಷ್ಣಪ್ಪ ಎಂಬವರಿಗೆ ಸೇರಿದ 9 ಕುರಿಗಳನ್ನ ಕುರಿ ರೊಪ್ಪದಲ್ಲಿ ಕಟ್ಟಿ ಹಾಕಲಾಗಿತ್ತು. ಮುಂಜಾನೆ ಕುರಿಗಳ ಮೇಲೆ ಚಿರತೆ ದಾಳಿ ನಡೆಸಿದೆ.
ಘಟನೆಯಿಂದಾಘಿ 80 ಸಾವಿರದಿಂದ ಒಂದು ಲಕ್ಷ ಮೌಲ್ಯದ ಕುರಿಗಳನ್ನು ರೈತ ಕಳೆದುಕೊಂಡಿದ್ದಾರೆ. ಘಟನೆ ಬೆನ್ನಲ್ಲೇ ನಷ್ಟಕ್ಕೊಳಗಾಗಿರುವ ರೈತನಿಗೆ ಅಧಿಕಾರಿಗಳು ಪರಿಹಾರವನ್ನು ನೀಡಬೇಕು ಎಂದು ಮನವಿ ಮಾಡಿದ್ದಾರೆ.
ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಪಶುಸಂಗೋಪನ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx