nammatumakuru

    Subscribe to Updates

    Get the latest creative news from FooBar about art, design and business.

    What's Hot

    ನಾಯಿಯನ್ನು ಹೊತ್ತೊಯ್ದು ಆತಂಕ ಸೃಷ್ಟಿಸಿದ್ದ ಚಿರತೆ; ಅರಣ್ಯ ಇಲಾಖೆ ಬೋನಿಗೆ ಸೆರೆ

    July 2, 2026

    ತುಮಕೂರಿನ ಹಿರಿಯ ಪತ್ರಕರ್ತ ಎಂ.ಈಶ್ವರ್ ಅನಾರೋಗ್ಯದಿಂದ ನಿಧನ

    July 2, 2026

    ರೈತರು ಬೆಳೆ ವಿಮೆಗೆ ನೋಂದಾಯಿಸಿಕೊಳ್ಳುವಂತೆ ಕೃಷಿ ಇಲಾಖೆ ಮನವಿ

    July 2, 2026
    Facebook Twitter Instagram
    ಟ್ರೆಂಡಿಂಗ್
    • ನಾಯಿಯನ್ನು ಹೊತ್ತೊಯ್ದು ಆತಂಕ ಸೃಷ್ಟಿಸಿದ್ದ ಚಿರತೆ; ಅರಣ್ಯ ಇಲಾಖೆ ಬೋನಿಗೆ ಸೆರೆ
    • ತುಮಕೂರಿನ ಹಿರಿಯ ಪತ್ರಕರ್ತ ಎಂ.ಈಶ್ವರ್ ಅನಾರೋಗ್ಯದಿಂದ ನಿಧನ
    • ರೈತರು ಬೆಳೆ ವಿಮೆಗೆ ನೋಂದಾಯಿಸಿಕೊಳ್ಳುವಂತೆ ಕೃಷಿ ಇಲಾಖೆ ಮನವಿ
    • ನನೆಗುದಿಗೆ ಬಿದ್ದಿದ್ದ ರೈಲ್ವೆ ಕಾಮಗಾರಿ ಪ್ರಾರಂಭ: ಆಂಧ್ರಪ್ರದೇಶದ ರಾಯದುರ್ಗದಿಂದ ಕರ್ನಾಟಕದ ಪಾವಗಡವರೆಗೆ ಕಾಮಗಾರಿ ಪೂರ್ಣ
    • ತುಮಕೂರು: ಕಳ್ಳತನ, ಮಾದಕ ವಸ್ತುಗಳ ಮಾರಾಟ, ಕಚ್ಚಾ ಬಾಂಬ್ ಪ್ರಕರಣ: 9 ಮಂದಿ ಆರೋಪಿಗಳ ಬಂಧನ
    • ತಿಪಟೂರಿನಲ್ಲಿ 2078ನೇ ಮದ್ಯವರ್ಜನ ಶಿಬಿರಕ್ಕೆ ಚಾಲನೆ: ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಪೂಜ್ಯ ಹೆಗ್ಗಡೆಯವರ ಕೊಡುಗೆ ಅನನ್ಯ: ಡಾ. ಶ್ರೀಧರ್
    • ಖಾಸಗಿ ಆಂಬುಲೆನ್ಸ್ ಸೇವೆ ಶುಲ್ಕ ನಿಯಂತ್ರಣಕ್ಕೆ ಜಿಲ್ಲಾಧಿಕಾರಿಗೆ ಕರವೇ ಮನವಿ
    • ಕೊರಟಗೆರೆ: ಮಾದಕ ವ್ಯಸನ ತಡೆಗೆ ‘ಸ್ವಾಸ್ಥ್ಯ ಸಂಕಲ್ಪ’ ಜಾಗೃತಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನಾಯಿಯನ್ನು ಹೊತ್ತೊಯ್ದು ಆತಂಕ ಸೃಷ್ಟಿಸಿದ್ದ ಚಿರತೆ; ಅರಣ್ಯ ಇಲಾಖೆ ಬೋನಿಗೆ ಸೆರೆ
    ಕೊರಟಗೆರೆ July 2, 2026

    ನಾಯಿಯನ್ನು ಹೊತ್ತೊಯ್ದು ಆತಂಕ ಸೃಷ್ಟಿಸಿದ್ದ ಚಿರತೆ; ಅರಣ್ಯ ಇಲಾಖೆ ಬೋನಿಗೆ ಸೆರೆ

    By adminJuly 2, 2026No Comments1 Min Read
    leopard

    ಕೊರಟಗೆರೆ: ತಾಲ್ಲೂಕಿನ ಹನುಮಂತಪುರ ಗ್ರಾಮಸ್ಥರನ್ನು 4 ದಿನಗಳಿಂದ ಸಾರ್ವಜನಿಕರನ್ನು ಜಾನುವಾರುಗಳನ್ನು ಹಾಗೂ ಸಾಕು ಪ್ರಾಣಿಗಳನ್ನು ಬೆಚ್ಚಿಬೀಳಿಸಿದ್ದ ಚಿರತೆ ಕೊನೆಗೂ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಬಿದ್ದಿದೆ. ಸಿಸಿ ಕ್ಯಾಮೆರಾದಲ್ಲಿ ನಾಯಿ ಹೊತ್ತೊಯ್ಯುವ ದೃಶ್ಯ ಸೆರೆಯಾಗಿದ್ದರಿಂದ ಆತಂಕಗೊಂಡಿದ್ದ ಗ್ರಾಮಸ್ಥರು ಈಗ ನಿಟ್ಟುಸಿರು ಬಿಟ್ಟಿದ್ದಾರೆ.

    ಹನುಮಂತಪುರ ಗ್ರಾಮದ ಸರ್ವೇ ನಂ. 8/9, 10 ಹಾಗೂ 6ರಲ್ಲಿರುವ ಎಲೆರಾಂಪುರ ನಿವಾಸಿ ರಾಜಣ್ಣ ಅವರ ಬುದ್ಧನ ಮನೆ ವಾಲ್ಮೀಕಿ ವನ ಫಾರ್ಮ್ ಹೌಸ್ ಬಳಿ ಚಿರತೆ ದಾಳಿ ನಡೆಸಿ ನಾಯಿಯನ್ನು ಹೊತ್ತೊಯ್ದಿತ್ತು. ಈ ಭಯಾನಕ ದೃಶ್ಯ ಫಾರ್ಮ್ ಹೌಸ್‌ನ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು.

    ತಕ್ಷಣ ಎಚ್ಚೆತ್ತ ರಾಜಣ್ಣ ಅವರು ಕೊರಟಗೆರೆ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಧಾವಿಸಿದ ಅಧಿಕಾರಿಗಳು ಫಾರ್ಮ್ ಹೌಸ್ ಬಳಿ ಬೋನು ಅಳವಡಿಸಿದ್ದರು.

    ಬೋನಿಗೆ ಬಿದ್ದಿದ್ದು ಯಾವಾಗ.?

    ಜೂನ್ 29ರ ಮುಂಜಾನೆ ಸುಮಾರು 4 ಗಂಟೆಗೆ ಬೋನಿನೊಳಗೆ ಕೋಳಿ ತಿನ್ನಲು ಬಂದ ಚಿರತೆ ಸೆರೆಯಾಗಿದೆ. ಮಾಹಿತಿ ಸಿಗುತ್ತಿದ್ದಂತೆ ಅರಣ್ಯ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ, ಎಲ್ಲ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಚಿರತೆಯನ್ನು ಸುರಕ್ಷಿತವಾಗಿ ಸೆರೆ ಹಿಡಿದಿದ್ದಾರೆ.

    ಕಾರ್ಯಾಚರಣೆ ತಂಡ :

    ಮಧುಗಿರಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಮಲ್ಲಿಕಾರ್ಜುನ್ ಹಾಗೂ ಕೊರಟಗೆರೆ ವಲಯ ಅರಣ್ಯಾಧಿಕಾರಿ ಹನುಮಂತರಾಜು ಅವರ ಮಾರ್ಗದರ್ಶನದಲ್ಲಿ, ಉಪ ವಲಯ ಅರಣ್ಯಾಧಿಕಾರಿ ದಿಲೀಪ್ ನೇತೃತ್ವದಲ್ಲಿ ಸಿಬ್ಬಂದಿಗಳಾದ ಪೃಥ್ವಿ, ಗಂಗಾಧರ್, ವೆಂಕಟೇಶ್, ಕೆಂಪಯ್ಯ ಹಾಗೂ ಚಾಲಕ ಕೃಷ್ಣಮೂರ್ತಿ ಗ್ರಾಮಸ್ಥರ ಸಹಕಾರದೊಂದಿಗೆ ಕಾರ್ಯಾಚರಣೆ ಯಶಸ್ವಿಗೊಳಿಸಿದರು.

    ಸೆರೆ ಸಿಕ್ಕ ಚಿರತೆಯನ್ನು ಆರೋಗ್ಯ ತಪಾಸಣೆ ನಡೆಸಿ, ಬಳಿಕ  ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನಕ್ಕೆ ಸುರಕ್ಷಿತವಾಗಿ ಸ್ಥಳಾಂತರಿಸಲಾಯಿತು.

    ಅರಣ್ಯ ಇಲಾಖೆ ಮನವಿ: ಕಾಡು ಪ್ರಾಣಿಗಳು ಊರೊಳಗೆ ಕಂಡು ಬಂದರೆ ಜನರು ಆತಂಕ ಪಡಬೇಡಿ, ಗುಂಪುಗೂಡಬೇಡಿ. ತಕ್ಷಣ 1926 ಸಹಾಯವಾಣಿ ಅಥವಾ ಸ್ಥಳೀಯ ಅರಣ್ಯ ಕಚೇರಿಗೆ ಮಾಹಿತಿ ನೀಡಿ. ನಾವಿದ್ದೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


    Provided by
    Provided by
    admin
    • Website

    Related Posts

    ರೈತರು ಬೆಳೆ ವಿಮೆಗೆ ನೋಂದಾಯಿಸಿಕೊಳ್ಳುವಂತೆ ಕೃಷಿ ಇಲಾಖೆ ಮನವಿ

    July 2, 2026

    ನನೆಗುದಿಗೆ ಬಿದ್ದಿದ್ದ ರೈಲ್ವೆ ಕಾಮಗಾರಿ ಪ್ರಾರಂಭ: ಆಂಧ್ರಪ್ರದೇಶದ ರಾಯದುರ್ಗದಿಂದ ಕರ್ನಾಟಕದ ಪಾವಗಡವರೆಗೆ ಕಾಮಗಾರಿ ಪೂರ್ಣ

    July 2, 2026

    ಕೊರಟಗೆರೆ: ಮಾದಕ ವ್ಯಸನ ತಡೆಗೆ ‘ಸ್ವಾಸ್ಥ್ಯ ಸಂಕಲ್ಪ’ ಜಾಗೃತಿ

    July 1, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ನಾಯಿಯನ್ನು ಹೊತ್ತೊಯ್ದು ಆತಂಕ ಸೃಷ್ಟಿಸಿದ್ದ ಚಿರತೆ; ಅರಣ್ಯ ಇಲಾಖೆ ಬೋನಿಗೆ ಸೆರೆ

    July 2, 2026

    ಕೊರಟಗೆರೆ: ತಾಲ್ಲೂಕಿನ ಹನುಮಂತಪುರ ಗ್ರಾಮಸ್ಥರನ್ನು 4 ದಿನಗಳಿಂದ ಸಾರ್ವಜನಿಕರನ್ನು ಜಾನುವಾರುಗಳನ್ನು ಹಾಗೂ ಸಾಕು ಪ್ರಾಣಿಗಳನ್ನು ಬೆಚ್ಚಿಬೀಳಿಸಿದ್ದ ಚಿರತೆ ಕೊನೆಗೂ ಅರಣ್ಯ…

    ತುಮಕೂರಿನ ಹಿರಿಯ ಪತ್ರಕರ್ತ ಎಂ.ಈಶ್ವರ್ ಅನಾರೋಗ್ಯದಿಂದ ನಿಧನ

    July 2, 2026

    ರೈತರು ಬೆಳೆ ವಿಮೆಗೆ ನೋಂದಾಯಿಸಿಕೊಳ್ಳುವಂತೆ ಕೃಷಿ ಇಲಾಖೆ ಮನವಿ

    July 2, 2026

    ನನೆಗುದಿಗೆ ಬಿದ್ದಿದ್ದ ರೈಲ್ವೆ ಕಾಮಗಾರಿ ಪ್ರಾರಂಭ: ಆಂಧ್ರಪ್ರದೇಶದ ರಾಯದುರ್ಗದಿಂದ ಕರ್ನಾಟಕದ ಪಾವಗಡವರೆಗೆ ಕಾಮಗಾರಿ ಪೂರ್ಣ

    July 2, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.