ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಬಾಳೂರು ಸಮೀಪದ ಕಾಫಿ ತೋಟವೊಂದರಲ್ಲಿ ಉರುಳಿಗೆ ಸಿಲುಕಿ ಚಿರತೆ ಸಾವನ್ನಪ್ಪಿರುವ ಘಟನೆ ನಡೆದಿದ್ದು, ಬೇಟೆಗಾರರು ಕಾಡು ಹಂದಿ ಹಿಡಿಯಲು ಇಟ್ಟಿದ್ದ ಉರುಳಿಗೆ ಚಿರತೆ ಬಿದ್ದಿದೆ.
ಶುಕ್ರವಾರ ಬೆಳಿಗ್ಗೆ ಈ ಘಟನೆ ಬೆಳಕಿಗೆ ಬಂದಿದ್ದು, ಉರುಳಿಗೆ ಬಿದ್ದಿರುವ ಚಿರತೆಯನ್ನು ಗಮನಿಸಿದ ಸ್ಥಳೀಯರು, ಅರಣ್ಯ ಇಲಾಖೆಗೆ ಮಾಹಿತಿ ನೀಡಿದರು.
ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಬಂದು ಶಿವಮೊಗ್ಗದಿಂದ ಅರಿವಳಿಕೆ ತಜ್ಞರನ್ನು ಕರೆಸಿ ರಕ್ಷಣೆ ಮಾಡಲು ಮುಂದಾದರು. ಅಷ್ಟರಲ್ಲಿ ಚಿರತೆ ಸಾವನ್ನಪ್ಪಿತ್ತು.
ಉರುಳು ಬಿಡಿಸಿಕೊಳ್ಳುವ ಪ್ರಯತ್ನದಲ್ಲಿ ಸೊಂಟಕ್ಕೆ ಇಳಿದಿದ್ದ ಉರುಳು ಮತ್ತಷ್ಟು ಬಿಗಿಯಾಗಿ ಚಿರತೆ ಮೃತಪಟ್ಟಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸದ್ಯ ಕಾಫಿ ತೋಟದ ಮಾಲೀಕರ ವಿರುದ್ಧ ಎಫ್‌ಐಆರ್ ದಾಖಲಿಸಲಾಗುವುದು ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4