ತುಮಕೂರು ತಾಲೂಕಿನ ಗೌರಗೊಂಡನಹಳ್ಳಿ ಗೇಟ್ ಬಳಿ, ಉರುಳಿಗೆ ಸಿಲುಕಿ ಸಾವನ್ನಪ್ಪಿದ್ದ ಚಿರತೆಯನ್ನು ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡದೆ ಗ್ರಾಮಸ್ಥರೇ ಸುಟ್ಟು ಹಾಕಿದ ಘಟನೆ ನಡೆದಿದೆ.
ಚಿರತೆಯನ್ನು ಸುಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಈ ಸಂಬಂಧ ಅರಣ್ಯ ಅಧಿಕಾರಿಗಳು ಮೂವರನ್ನು ಬಂಧಿಸಿದ್ದಾರೆ.
ಗೌರಗೊಂಡನಹಳ್ಳಿಯ ಜಿ.ಡಿ.ಶಿವಕುಮಾರ್, ನಾರಾಯಣಪ್ಪ ಹಾಗೂ ಚಂದ್ರಶೇಖರ್ ಎಂಬುವವರನ್ನು ಬಂಧಿಸಲಾಗಿದೆ.
ಗ್ರಾಮದ ನಾರಾಯಣಪ್ಪ ಎಂಬಾತ ಕಾಡು ಪ್ರಾಣಿಗಳ ಹಾವಳಿಯನ್ನು ತಪ್ಪಿಸಲು ತನ್ನ ಹೊಲದಲ್ಲಿ ಉರುಳು ಹಾಕಿದ್ದ. ಈ ಉರುಳಿಗೆ ಚಿರತೆಯೊಂದು ಸಿಲುಕಿ ಸಾವನ್ನಪ್ಪಿತ್ತು. ಘಟನೆಯನ್ನು ಅರಣ್ಯ ಇಲಾಖೆಗೆ ತಿಳಿಸುವ ಬದಲು, ಗ್ರಾಮಸ್ಥರು ಚಿರತೆಯನ್ನು ಸುಟ್ಟು ಹಾಕಿದ್ದಾರೆ. ಗ್ರಾಮದ ಕೆಲವು ಯುವಕರು ಸತ್ತ ಚಿರತೆಯನ್ನು ಸುಡುವುದನ್ನು ಮೊಬೈಲ್ನಲ್ಲಿ ವಿಡಿಯೋ ಮಾಡಿ, ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು.
ವೈರಲ್ ಆದ ವಿಡಿಯೋವನ್ನು ಆಧರಿಸಿ, ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಈ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
