ಚಿಕ್ಕನಾಯಕನಹಳ್ಳಿ: ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆ ಮೇಲನಹಳ್ಳಿ ಚಿಕ್ಕನಾಯಕನಹಳ್ಳಿ ಇಲ್ಲಿಗೆ ಚಿರತೆ ಮರಿಗಳೊಂದಿಗೆ ಕಳೆದ ಒಂದು ತಿಂಗಳಿಂದ ಶಾಲೆ ಹತ್ತಿರ ಬಂದು ಹೋಗುತ್ತಿತ್ತು. ಇದೀಗ ಅಂತಿಮವಾಗಿ ಅರಣ್ಯ ಇಲಾಖೆಯ ಬೋನಿಗೆ ಚಿರತೆ ಬಿದ್ದಿದೆ.
ನಿರಂತರ ಚಿರತೆ ಸಂಚಾರದಿಂದ ಆತಂಕಕ್ಕೀಡಾಗಿದ್ದ ಶಾಲೆಯ ಮಕ್ಕಳು ಹಾಗೂ ಸಾರ್ವಜನಿಕರು ಚಿರತೆಯನ್ನು ಹಿಡಿದು ಸ್ಥಳಾಂತರಿಸುವಂತೆ ಒತ್ತಾಯಿಸಿದ್ದರು.
ಅಂತೆಯೇ ಅರಣ್ಯ ಇಲಾಖೆ ಅಧಿಕಾರಿಗಳು ಇತ್ತೀಚೆಗೆ ಬೋನ್ ಇರಿಸಿ ಚಿರತೆಯನ್ನು ಸೆರೆ ಹಿಡಿದಿದ್ದಾರೆ. ರಾತ್ರಿ ವೇಳೆ ಅರಣ್ಯ ಇಲಾಖೆಯ ಬೋನಿಗೆ ಚಿರತೆ ಬಿದ್ದಿದೆ.
ಚಿರತೆ ಸೆರೆಯಿಂದಾಗಿ ವಿದ್ಯಾರ್ಥಿಗಳು ಶಿಕ್ಷಕರು, ಪೋಷಕರು ಹಾಗೂ ಗ್ರಾಮಸ್ಥರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದು, ಅರಣ್ಯ ಇಲಾಖೆಯವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296