nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ಮಕ್ಕಳ ಜನನ ಪ್ರಮಾಣಪತ್ರ ಲೋಪದೋಷ ನಿವಾರಣೆಗೆ ಸರ್ಕಾರಿ ಆದೇಶ

    July 13, 2026

    ತುಮಕೂರು: ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿಗೆ ಅರ್ಜಿ ಆಹ್ವಾನ

    July 13, 2026

    ವಿದ್ಯುತ್ ಶಾಕ್‌ ನಿಂದ ವಿದ್ಯಾರ್ಥಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

    July 13, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ಮಕ್ಕಳ ಜನನ ಪ್ರಮಾಣಪತ್ರ ಲೋಪದೋಷ ನಿವಾರಣೆಗೆ ಸರ್ಕಾರಿ ಆದೇಶ
    • ತುಮಕೂರು: ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿಗೆ ಅರ್ಜಿ ಆಹ್ವಾನ
    • ವಿದ್ಯುತ್ ಶಾಕ್‌ ನಿಂದ ವಿದ್ಯಾರ್ಥಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ
    • ಮಗು ಪಡೆಯಲು ಪ್ಲ್ಯಾನ್ ಮಾಡ್ತಿದ್ದೀರಾ? ಹಾಗಾದ್ರೆ ದಂಪತಿಗಳು ಈ ಒಂದು ಹವ್ಯಾಸ ರೂಢಿಸಿಕೊಳ್ಳಿ!
    • 723 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಕೆಇಎ
    • ಬೆಳಗಾವಿ: ರಿಪೇರಿ ವೇಳೆ ಕುಸಿದು ಬಿದ್ದ ಮನೆ — ಇಬ್ಬರು ಕಾರ್ಮಿಕರು ದುರ್ಮರಣ
    • ತೆಲುಗು ಬ್ರಾಹ್ಮಣ ಸಂಪ್ರದಾಯದಂತೆ ನೆರವೇರಿದ ಗಾಯಕಿ ಎಸ್.ಜಾನಕಿ ಅಂತ್ಯಕ್ರಿಯೆ; ಚಿತೆಗೆ ಮೊಮ್ಮಗಳಿಂದ ಅಗ್ನಿಸ್ಪರ್ಶ
    • ಚೆಂಪುಗಾನಹಳ್ಳಿಯಲ್ಲಿ ಅದ್ದೂರಿಯಾಗಿ ಜರುಗಿದ ಮಾರಮ್ಮನ ಜಾತ್ರೆ: ಮನೆ ಮನೆ ಬಳಿ ಪೆಂಡಾಲ್, ಭರ್ಜರಿ ಬಾಡೂಟ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು
    ರಾಷ್ಟ್ರೀಯ ಸುದ್ದಿ May 25, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    By adminMay 25, 2026No Comments2 Mins Read
    leopard

    ಮೈಸೂರು: ಮಲೆ ಮಹದೇಶ್ವರ ಬೆಟ್ಟದ (ಎಂಎಂ ಹಿಲ್ಸ್) ಸಮೀಪದ ನಾಗಮಲೆ ಪ್ರದೇಶದಲ್ಲಿ 10 ವರ್ಷದ ಬಾಲಕನ ಮೇಲೆ ದಾಳಿ ನಡೆಸಿ, ಆತನ ಸಾವಿಗೆ ಕಾರಣವಾಗಿದ್ದ ನರಭಕ್ಷಕ ಚಿರತೆಯನ್ನು ಅರಣ್ಯ ಇಲಾಖೆ ಕೊನೆಗೂ ಯಶಸ್ವಿಯಾಗಿ ಸೆರೆಹಿಡಿದಿದೆ. ಕಳೆದ 14 ದಿನಗಳಿಂದ ಅರಣ್ಯ ಇಲಾಖೆ ಸಿಬ್ಬಂದಿ ನಡೆಸುತ್ತಿದ್ದ ನಿರಂತರ ಹಾಗೂ ತೀವ್ರ ಕಾರ್ಯಾಚರಣೆಯ ಬಳಿಕ ಚಿರತೆ ಬೋನಿಗೆ ಬಿದ್ದಿದೆ ಎಂದು ಅಧಿಕಾರಿಗಳು ಖಚಿತಪಡಿಸಿದ್ದಾರೆ.

    ಮೃತ ಬಾಲಕನನ್ನು ಬೆಂಗಳೂರಿನ ಲಗ್ಗೆರೆ ನಿವಾಸಿ ಹರ್ಷಿತ್ (10 ವರ್ಷ) ಎಂದು ಗುರುತಿಸಲಾಗಿದೆ. ಮೇ 9ರಂದು ಈತ ತನ್ನ ಕುಟುಂಬದವರೊಂದಿಗೆ ಮಲೆ ಮಹದೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ್ದನು. ದೇವರ ದರ್ಶನದ ಬಳಿಕ ಕುಟುಂಬಸ್ಥರು ಅಲ್ಲಿಯೇ ರಾತ್ರಿ ವಾಸ್ತವ್ಯ ಹೂಡಿದ್ದರು. ಮೇ 10ರಂದು ಬೆಳಿಗ್ಗೆ ನಾಗಮಲೆ ದರ್ಶನಕ್ಕೆ ಇಡೀ ಕುಟುಂಬ ನಡೆದುಕೊಂಡು ಹೋಗುತ್ತಿದ್ದಾಗ, ಪೊದೆಯಲ್ಲಿದ್ದ ಚಿರತೆ ಏಕಾಏಕಿ ಹರ್ಷಿತ್‌ ಮೇಲೆ ದಾಳಿ ನಡೆಸಿ, ಆತನನ್ನು ಕಾಡಿನೊಳಗೆ ಎಳೆದೊಯ್ದಿತ್ತು. ತಕ್ಷಣವೇ ಹುಡುಕಾಟ ನಡೆಸಿದಾಗ, ಸುಮಾರು ಅರ್ಧ ಗಂಟೆಯ ನಂತರ ಕಾಡಿನ ಬಂಡೆಗಳ ಮಧ್ಯೆ ಬಾಲಕನ ರಕ್ತಸಿಕ್ತ ಶವ ಪತ್ತೆಯಾಗಿತ್ತು.

    ಈ ಭೀಕರ ಘಟನೆ ರಾಜ್ಯಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು. ಸ್ಥಳೀಯರು ಹಾಗೂ ಭಕ್ತರು ಚಿರತೆಯನ್ನು ತಕ್ಷಣವೇ ಸೆರೆಹಿಡಿಯುವಂತೆ ಒತ್ತಾಯಿಸಿ ಪ್ರತಿಭಟಿಸಿದ್ದರು. ಘಟನೆಯ ಗಾಂಭೀರ್ಯವನ್ನು ಪರಿಗಣಿಸಿ, ಮುಂಜಾಗ್ರತಾ ಕ್ರಮವಾಗಿ ನಾಗಮಲೆ ಕಡೆಗೆ ತೆರಳುವ ಟ್ರೆಕ್ಕಿಂಗ್ (ಚಾರಣ) ಮತ್ತು ಪಾದಯಾತ್ರೆ ಮಾರ್ಗಗಳಿಗೆ ಅರಣ್ಯ ಇಲಾಖೆ ತಾತ್ಕಾಲಿಕ ನಿರ್ಬಂಧ ಹೇರಿತ್ತು.

    ಚಿರತೆಯನ್ನು ಹಿಡಿಯಲು ಅರಣ್ಯ ಇಲಾಖೆಯು ನಾಗಮಲೆ ಸುತ್ತಮುತ್ತಲಿನ ಹಲವೆಡೆ ಸುಸಜ್ಜಿತ ಬೋನುಗಳನ್ನು ಅಳವಡಿಸಿತ್ತು. ಹೆಚ್ಚುವರಿ ಸಿಬ್ಬಂದಿಯನ್ನು ನಿಯೋಜಿಸಿ ಹಗಲಿರುಳು ಕಾವಲು ಕಾಯಲಾಗಿತ್ತು. ಇದೇ ಚಿರತೆಯು ಇತ್ತೀಚಿನ ದಿನಗಳಲ್ಲಿ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಜಾನುವಾರುಗಳ ಮೇಲೂ ದಾಳಿ ನಡೆಸಿ ಕೊಂದಿರುವ ಶಂಕೆ ವ್ಯಕ್ತವಾಗಿತ್ತು.

    ಕೊನೆಗೂ 14 ದಿನಗಳ ಸತತ ಶ್ರಮದ ನಂತರ ಚಿರತೆ ಬೋನಿಗೆ ಬಿದ್ದಿದ್ದು, ಸುತ್ತಮುತ್ತಲಿನ ಗ್ರಾಮಸ್ಥರು ಹಾಗೂ ಮಹದೇಶ್ವರ ಬೆಟ್ಟಕ್ಕೆ ಬರುವ ಭಕ್ತರು ನಿಟ್ಟುಸಿರು ಬಿಟ್ಟಿದ್ದಾರೆ. ಚಿರತೆಯನ್ನು ಸುರಕ್ಷಿತ ಸ್ಥಳಕ್ಕೆ ರವಾನಿಸಲು ಅರಣ್ಯ ಇಲಾಖೆ ಕ್ರಮ ಕೈಗೊಂಡಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


    Provided by
    Provided by
    admin
    • Website

    Related Posts

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ಮಕ್ಕಳ ಜನನ ಪ್ರಮಾಣಪತ್ರ ಲೋಪದೋಷ ನಿವಾರಣೆಗೆ ಸರ್ಕಾರಿ ಆದೇಶ

    July 13, 2026

    ತುಮಕೂರು: ಜನನ ಪ್ರಮಾಣ ಪತ್ರಗಳಲ್ಲಿ ಮಗುವಿನ ಹೆಸರು, ತಂದೆ ತಾಯಿ ಹೆಸರು, ಇನಿಷಿಯಲ್ ಹಾಗೂ ಇತರೆ ವಿವರಗಳಲ್ಲಿ ಉಂಟಾಗುವ ಸಣ್ಣಪುಟ್ಟ…

    ತುಮಕೂರು: ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿಗೆ ಅರ್ಜಿ ಆಹ್ವಾನ

    July 13, 2026

    ವಿದ್ಯುತ್ ಶಾಕ್‌ ನಿಂದ ವಿದ್ಯಾರ್ಥಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

    July 13, 2026

    ಮಗು ಪಡೆಯಲು ಪ್ಲ್ಯಾನ್ ಮಾಡ್ತಿದ್ದೀರಾ? ಹಾಗಾದ್ರೆ ದಂಪತಿಗಳು ಈ ಒಂದು ಹವ್ಯಾಸ ರೂಢಿಸಿಕೊಳ್ಳಿ!

    July 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.