‘ಗುಣಮಟ್ಟದ ಆರೋಗ್ಯ ವ್ಯವಸ್ಥೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬಜೆಟ್ ನಲ್ಲಿ ಶೇ8 ರಿಂದ 10ರಷ್ಟು ಅನುದಾನವನ್ನು ನೀಡಬೇಕು’ ಎಂದುಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ನಿರ್ದೇಶಕ ಡಾ. ಸಿ. ಎನ್. ಮಂಜುನಾಥ್ ತಿಳಿಸಿದರು.
7ನೇ ಅಖಿಲ ಭಾರತ ವೈದ್ಯಕೀಯ ಸಮ್ಮೇಳನದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ದೇಶದಲ್ಲಿ ಬಡ ಹಾಗೂ ಮಧ್ಯಮ ವರ್ಗದ ಜನರೇ ಹೆಚ್ಚಿದ್ದಾರೆ. ಶೇ. 30 ರಷ್ಟಿರುವ ಸರ್ಕಾರಿ ಆಸ್ಪತ್ರೆಗಳಲ್ಲೂ ಮೂಲ ಸೌಲಭ್ಯ, ಅವಶ್ಯಕವಿರುವಷ್ಟು ವೈದ್ಯರು ಸಿಬ್ಬಂದಿಯಿಲ್ಲ ಎಂದರು.
ಮೂಲಸೌಕರ್ಯಗಳ ಹೆಸರಿನಲ್ಲಿ ಭೂತದ ಬಂಗಲೆಗಳನ್ನು ನಿರ್ಮಿಸುವ ಬದಲು ಅಗತ್ಯ ವೈದ್ಯರು, ಶುಶೂಷಕರು ಹಾಗೂ ಇನ್ನಿತರ ವೈದ್ಯಕೀಯ ಸಿಬ್ಬಂದಿಯನ್ನು ನೇಮಕ ಮಾಡಬೇಕು’ ಎಂದು ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ನಿರ್ದೇಶಕ ಡಾ. ಸಿ. ಎನ್. ಮಂಜುನಾಥ್ ತಿಳಿಸಿದರು.
ಮೆಡಿಕಲ್ ಸರ್ವಿಸ್ ಸೆಂಟರ್ ನಗರದಲ್ಲಿ ಹಮ್ಮಿಕೊಂಡಿದ್ದ 7ನೇ ಅಖಿಲ ಭಾರತ ವೈದ್ಯಕೀಯ ಸಮ್ಮೇಳನದಲ್ಲಿ ಭಾಗವಹಿಸಿ ಅವರು ಮಾತನಾಡಿದರು.


