ತುಮಕೂರು: ಕೂಸಿನ ಮನೆಗಳು ಮಾದರಿ ಕೇಂದ್ರಗಳಾಗಿ ಕಾರ್ಯನಿರ್ವಹಿಸಬೇಕೆಂದು ತಾಲ್ಲೂಕು ಪಂಚಾಯತಿ ಸಹಾಯಕ ನಿರ್ದೇಶಕ ಎಸ್.ಎಸ್. ಮಂಜುನಾಥ್ ಕರೆ ನೀಡಿದರು.
ತಾಲೂಕು ಪಂಚಾಯಿತಿ ಸಾಮರ್ಥ್ಯ ಸೌಧದಲ್ಲಿ ಮಂಗಳವಾರ ತಾಲ್ಲೂಕು ಪಂಚಾಯತಿ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಹಯೋಗದಲ್ಲಿ ಕೂಸಿನ ಮನೆಯ ಮಕ್ಕಳನ್ನು ಆರೈಕೆ ಮಾಡುವವರಿಗಾಗಿ ಹಮ್ಮಿಕೊಂಡಿದ್ದ 2ನೇ ಹಂತದ ಏಳು ದಿನಗಳ ಕಾಲ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ಕೂಸಿನ ಮನೆ ಯೋಜನೆಯನ್ನು ಸಮರ್ಪಕವಾಗಿ ಜಾರಿಗೊಳಿಸಿ ಮಕ್ಕಳ ಬೌದ್ದಿಕತೆಯನ್ನು ವೃದ್ಧಿಸುವುದರೊಂದಿಗೆ ಆರೋಗ್ಯ ಕಾಪಾಡುವುದು ಆರೈಕೆದಾರರ ಜವಾಬ್ದಾರಿಯಾಗಿರುತ್ತದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಕೂಸಿನ ಮನೆ ತರಬೇತಿದಾರರಾದ ರೇಣುಕಾ ಹಾಗೂ ರೇಖಾ, SIRD ಸಂಸ್ಥೆಯ ಸಿಬ್ಬಂದಿ ಆಯೇಷ, ತಾಲ್ಲೂಕು ಪಂಚಾಯತಿ ಐ.ಇ.ಸಿ. ಸಂಯೋಜಕರು, ಮಹಿಳಾ ಕೇರ್ ಟೇಕರ್ಸ್ ಸೇರಿದಂತೆ ಮತ್ತಿತರರು ಹಾಜರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx