ಬೆಂಗಳೂರು: ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ. ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಜೆಡಿಎಸ್ ಶಾಸಕ ಎ.ಮಂಜು ಆಗ್ರಹಿಸಿದರು.
ಜೆಪಿ ಭವನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ಕೊಟ್ಟಿದ್ದಾರೆ. ಪ್ರಾಸಿಕ್ಯೂಷನ್ ಗೆ ಅನುಮತಿ ಕೊಟ್ಟ ಮೇಲೆ ರಾಜೀನಾಮೆ ಕೊಡಬೇಕು ಅಂತ ಕಾನೂನಿನಲ್ಲಿ ಇಲ್ಲ. ಆದರೆ ನೈತಿಕತೆ ಅಂತ ಇದೆ. ಲಾಯರ್ ಆಗಿದ್ದವರು ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಟ್ಟು ತನಿಖೆಗೆ ಸಹಕಾರ ನೀಡಬೇಕು ಎಂದು ಅವರು ಒತ್ತಾಯಿಸಿದರು.
ಕುಮಾರಸ್ವಾಮಿ ಕೇಸ್ಗೆ ರಾಜ್ಯಪಾಲರು ಅನುಮತಿ ಕೊಡಲಿಲ್ಲ ಎನ್ನುತ್ತಾರೆ. ಅವರು ಅಧಿಕಾರದಲ್ಲಿ ಇದ್ದಾಗ ನೋಡಿಕೊಳ್ಳಬೇಕಿತ್ತು. ನನಗೆ ಇರುವ ಮಾಹಿತಿ ಪ್ರಕಾರ ಸುಪ್ರೀಂ ಕೋರ್ಟ್ನಲ್ಲಿ ಸ್ಟೇ ಇದೆ. ಅದಕ್ಕೆ ರಾಜ್ಯಪಾಲರು ಅನುಮತಿ ಕೊಟ್ಟಿಲ್ಲ ಎನಿಸುತ್ತದೆ ಎಂದು ಹೇಳಿದರು.
ಸಿಎಂ ನೈತಿಕತೆ ಬಗ್ಗೆ ಮಾತನಾಡುತ್ತಾರೆ. ಹೀಗಾಗಿ ಇವರು ತನಿಖೆಗೆ ಅವಕಾಶ ಮಾಡಿಕೊಡಲಿ. ಸಿದ್ದರಾಮಯ್ಯ ನಾನು ಲಾಯರ್ ಅಂತಾರೆ. ಲಾಯರ್ ಆಗಿರುವುದರಿಂದ ನೈತಿಕತೆಯಿಂದ ರಾಜೀನಾಮೆ ಕೊಟ್ಟು ತನಿಖೆ ಎದುರಿಸಲಿ ಎಂದು ಒತ್ತಾಯಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q


