ಒಳ ಮೀಸಲಾತಿ, ಕಾಂತರಾಜು ಆಯೋಗದ ವರದಿ ಅನುಷ್ಠಾನಕ್ಕೆ ತರುವ ಮೂಲಕ ತಮ್ಮ ಬದ್ಧತೆ ತೋರಿಸಿ. ಮತ್ತೊಬ್ಬರ ಬಗ್ಗೆ ಮಾತನಾಡುವುದು ಸೂಕ್ತವಲ್ಲ ಎಂದು ಕೇಂದ್ರ ಸಚಿವ ಎ. ನಾರಾಯಣಸ್ವಾಮಿ ಅವರು ಸವಾಲೆಸೆದರು.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಗೆ ಬದ್ಧತೆ ಇದೆ. ನಾವು ಒಳ ಮೀಸಲಾತಿ ಶಿಫಾರಸು ಮಾಡಿ ಕಳುಹಿಸಿದ್ದೇವೆ. ಶೆಡ್ಯೂಲ್ 9ಕ್ಕೆ ಸೇರುವ ಮೊದಲೇ ತಮಿಳುನಾಡಿನಲ್ಲಿ ಒಳಮೀಸಲಾತಿ ಜಾರಿಗೊಳಿಸಿದ್ದರು. ಆಂಧ್ರ ಪ್ರದೇಶದಲ್ಲಿ ಒಳ ಮೀಸಲಾತಿ ಜಾರಿಗೆ ಬಂದ 24 ಗಂಟೆಯಲ್ಲೇ ಆ ರಾಜ್ಯದಲ್ಲಿ ಒಳ ಮೀಸಲಾತಿಯನ್ನು ಕೊಟ್ಟಿದ್ದರು. ಒಳ ಮೀಸಲಾತಿ ಪರಿಣಾಮವಾಗಿ ವಂಚಿತ ಶೋಷಿತ ಅನೇಕ ವರ್ಗಕ್ಕೆ ಉದ್ಯೋಗ, ಶಿಕ್ಷಣಾವಕಾಶ ಲಭಿಸಿತ್ತು ಎಂದರು. ಇದಕ್ಕೆ ದಾಖಲೆಗಳಿವೆ ಎಂದು ತಿಳಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಬದ್ಧತೆ ಇದ್ದರೆ ಆಂಧ್ರ ಪ್ರದೇಶ ಮತ್ತು ತಮಿಳುನಾಡಿನಲ್ಲಿ ಶೋಷಿತರಿಗೆ ನ್ಯಾಯ ನೀಡಿದ ಮಾದರಿಯಲ್ಲಿ ಕೊಡುವ ಎದೆಗಾರಿಕೆ ತೋರಿಸಬೇಕು. ಅದಕ್ಕಾಗಿ ವಿಶೇಷ ಅಧಿವೇಶನ ಕರೆದು ಜಾರಿ ಮಾಡಿ ಎಂದು ಒತ್ತಾಯಿಸಿದರು. ನಾನು ಸ್ವಯಂಘೋಷಿತ ಹಿಂದುಳಿದ ವರ್ಗಗಳ ನಾಯಕ ಎಂಬ ಸಿಎಂ ಹೇಳಿಕೆಯನ್ನು ಪ್ರಸ್ತಾಪಿಸಿದ ಅವರು, ಕಾಂತರಾಜು ಆಯೋಗದ ವರದಿ ಜಾರಿ ಮಾಡುವುದಾಗಿ ಹೇಳಿದ್ದನ್ನು ತಿಳಿಸಿದರು.
ಆರ್ಟಿಕಲ್ 341 ತಿದ್ದುಪಡಿ ಆಗಬೇಕು. ರಾಜ್ಯಗಳಿಂದ ಇದಕ್ಕೆ ಉತ್ತರ ಬೇಕಿತ್ತು. ಶೂನ್ಯ ಎಸ್‌ಸಿ ಜನಸಂಖ್ಯೆ ಇರುವ ರಾಜ್ಯಗಳು ಋಣಾತ್ಮಕ ಉತ್ತರ ನೀಡಿವೆ. 7 ರಾಜ್ಯಗಳು ಪರವಾಗಿವೆ. ದೆಹಲಿ ಮತ್ತು ಪಂಜಾಬ್ ರಾಜ್ಯಗಳ ಎಎಪಿಯ ಮಹಾ ಘಟಬಂಧನ್ ಸದಸ್ಯರು ತಿದ್ದುಪಡಿ ವಿರೋಧಿಸಿದ್ದಾರೆ. ಹಿಮಾಚಲ ಪ್ರದೇಶದಲ್ಲಿ ನಿಮ್ಮದೇ ಸರಕಾರವಿದ್ದು ವಿರೋಧಿಸಿದ್ದಾರೆ. ಘಟಬಂಧನ್ ಸದಸ್ಯರಾದ ಪಶ್ಚಿಮ ಬಂಗಾಲ ಸರಕಾರ ವಿರೋಧಿಸಿದೆ. ಸಿದ್ದರಾಮಯ್ಯನವರು ಒಳ ಮೀಸಲಾತಿಗೆ ಒಪ್ಪಿಗೆ ಕೊಡಿಸಲು ಆ ರಾಜ್ಯಗಳ ಸಿಎಂಗಳ ಜೊತೆ ಚರ್ಚಿಸಬೇಕು. ವಿಶೇಷ ಅಧಿವೇಶನ ಕರೆದು ಒಳ ಮೀಸಲಾತಿಗೆ ತಮ್ಮ ಬದ್ಧತೆಯನ್ನು ಪ್ರದರ್ಶಿಸಬೇಕು ಎಂದು ಆಗ್ರಹಿಸಿದರು. ಈಗಿನ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಚುನಾವಣಾ ಅವಧಿಯಲ್ಲಿ ಒಳ ಮೀಸಲಾತಿ ವಿಚಾರದಲ್ಲಿ ನಿಜವಾದ ಬಯಲಾಟ ಮಾಡಿದ್ದರು ಎಂದು ಆರೋಪಿಸಿದರು. ಚುನಾವಣೆ ನಡೆಯುತ್ತಿರುವಾಗ ಮೊದಲನೇ ಸದನದಲ್ಲಿ ಒಳ ಮೀಸಲಾತಿ ಜಾರಿ ಮಾಡುವುದಾಗಿ ಅವರು ತಿಳಿಸಿದ್ದರು.
ಪ್ರಣಾಳಿಕೆಯಲ್ಲೂ ಅದನ್ನು ತಿಳಿಸಿದ್ದರು ಎಂದು ನುಡಿದರು. ಎಲ್ಲವನ್ನೂ ತಿಳಿದಿರುವ ವಕೀಲರಾದ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಿಜೆಪಿ ಬದ್ಧತೆ ಮಾತನಾಡುತ್ತಾರೆ. ಸಿದ್ದರಾಮಯ್ಯನವರು ಚುನಾವಣಾ ಪೂರ್ವದಲ್ಲಿ ಒಂದು ಸಭೆಯಲ್ಲಿ, ಪ್ರಣಾಳಿಕೆಯಲ್ಲಿ ಒಳ ಮೀಸಲಾತಿಯ ಬದ್ಧತೆ ಬಗ್ಗೆ ತಿಳಿಸಿದ್ದರು. ಒಳ ಮೀಸಲಾತಿಯನ್ನು ಮಾಡಿ ತೀರುತ್ತೇವೆ ಎಂದು 25- 30 ಸಾವಿರ ಜನರಿದ್ದ ಸಭೆಯ ವೇದಿಕೆ ಮೇಲೆ ಹೇಳಿದ್ದರು. ಬಳಿಕ ಕೆಳಗಿಳಿದು ಬಂದು 5 ನಿಮಿಷದಲ್ಲಿ ಇತರ ಸಮಾಜZವರು ಕೇಳಿದಾಗ ‘ನಾನು ಯಾವುದೇ ಕಾರಣಕ್ಕೂ ಒಳ ಮೀಸಲಾತಿ ಮಾಡುವುದಿಲ್ಲ. ಸಿಎಂ ಆಗಿದ್ದಾಗ ನಾನು ಮಾಡಲಿಲ್ಲ. ನೀವು ಹೆದರಬೇಡಿ’ ಎಂದಿದ್ದರು ಎಂದು ಆಕ್ಷೇಪಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


