nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅಣೆಕಟ್ಟುಗಳ ಸುರಕ್ಷತಾ ಮಾನದಂಡಗಳು ರಾಜಕೀಯ ಗಡಿಗಳಿಗೆ ಸೀಮಿತವಾಗಿರಬಾರದು: ಸಿಎಂ ಸಿದ್ದರಾಮಯ್ಯ

    February 13, 2026

    ಶಾಸಕ ಅನಿಲ್ ಚಿಕ್ಕಮಾದುರವರ 38ನೇ ಹುಟ್ಟುಹಬ್ಬ: ಆಸ್ಪತ್ರೆ ರೋಗಿಗಳಿಗೆ ಹಣ್ಣುಹಂಪಲು

    February 13, 2026

    ಲಿಂಗಮ್ಮನಹಳ್ಳಿಯಲ್ಲಿ 150ನೇ ನೂತನ ಹಾಲು ಉತ್ಪಾದಕರ ಸಹಕಾರ ಸಂಘದ ಉದ್ಘಾಟನೆ

    February 13, 2026
    Facebook Twitter Instagram
    ಟ್ರೆಂಡಿಂಗ್
    • ಅಣೆಕಟ್ಟುಗಳ ಸುರಕ್ಷತಾ ಮಾನದಂಡಗಳು ರಾಜಕೀಯ ಗಡಿಗಳಿಗೆ ಸೀಮಿತವಾಗಿರಬಾರದು: ಸಿಎಂ ಸಿದ್ದರಾಮಯ್ಯ
    • ಶಾಸಕ ಅನಿಲ್ ಚಿಕ್ಕಮಾದುರವರ 38ನೇ ಹುಟ್ಟುಹಬ್ಬ: ಆಸ್ಪತ್ರೆ ರೋಗಿಗಳಿಗೆ ಹಣ್ಣುಹಂಪಲು
    • ಲಿಂಗಮ್ಮನಹಳ್ಳಿಯಲ್ಲಿ 150ನೇ ನೂತನ ಹಾಲು ಉತ್ಪಾದಕರ ಸಹಕಾರ ಸಂಘದ ಉದ್ಘಾಟನೆ
    • ಜ್ಯೋತಿಷಿ ಮಾತು ನಂಬಿ ತಾಯಿಯನ್ನೇ ಕೊಂದ ಮಗಳು: ಸಿನಿಮೀಯ ರೀತಿ ಕಥೆ ಬಯಲಾಗಿದ್ದು ಹೇಗೆ?
    • ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪಗೆ ಪಕ್ಷದಲ್ಲೇ ಪ್ರತಿಸ್ಪರ್ಧಿ | ವಿಧಾನ ಸಭಾ ಚುನಾವಣೆಗೆ ನಾನು ಸ್ಪರ್ಧಾಕಾಂಕ್ಷಿ ಎಂದ ದೊಡ್ಡಘಟ್ಟ ಚಂದ್ರೇಶ್
    • ಕ್ವಿಂಟಾಲ್‌ ಗೆ 4,886 ರೂ.: ಬೆಂಬಲ ಬೆಲೆಯಲ್ಲಿ ರಾಗಿ ಖರೀದಿ | ಶಾಸಕ ಕೆ.ಷಡಕ್ಷರಿ
    • ಬೆಂಗಳೂರು ರೇಸ್‌ ಕೋರ್ಸ್ ತುಮಕೂರಿನ ಕುಣಿಗಲ್‌ ಗೆ ಸ್ಥಳಾಂತರ: ಸಂಪುಟ ನಿರ್ಣಯ
    • ವಿದ್ಯುತ್ ಖಾಸಗೀಕರಣ, ಬೀಜ ಮಸೂದೆ ವಿರುದ್ಧ ಕಾರ್ಮಿಕ ಸಂಘಟನೆಗಳ ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ದಸರಾ ವೈಭವವನ್ನು ಜಿಲ್ಲೆಯ ಜನತೆ ಕಣ್ತುಂಬಿಕೊಳ್ಳಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕರೆ
    ತುಮಕೂರು October 8, 2024

    ದಸರಾ ವೈಭವವನ್ನು ಜಿಲ್ಲೆಯ ಜನತೆ ಕಣ್ತುಂಬಿಕೊಳ್ಳಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕರೆ

    By adminOctober 8, 2024No Comments2 Mins Read
    shubha kalyan

    ತುಮಕೂರು: ಜಿಲ್ಲೆಯಲ್ಲಿ ಮೊದಲ ಬಾರಿಗೆ ಸರ್ಕಾರದ ವತಿಯಿಂದ ಅಕ್ಟೋಬರ್ 11ಮತ್ತು 12ರಂದು ತುಮಕೂರು ದಸರಾ ಉತ್ಸವವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗುತ್ತಿದ್ದು, ಜಿಲ್ಲೆಯ ಜನತೆ ಸ್ವಯಂ ಪ್ರೇರಣೆಯಿಂದ ಪಾಲ್ಗೊಂಡು ತುಮಕೂರು ದಸರಾ ವೈಭವವನ್ನು ಕಣ್ತುಂಬಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕರೆ ನೀಡಿದರು.

    ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಚಾಮುಂಡೇಶ್ವರಿ ದೇವಿ ನಿತ್ಯಪೂಜಾ ಕೈಂಕರ್ಯಗಳಲ್ಲಿ ಪಾಲ್ಗೊಂಡ ನಂತರ ಮಾತನಾಡಿದ ಅವರು, ವಿಶ್ವವಿಖ್ಯಾತ ಮೈಸೂರು ದಸರಾ ಮಾದರಿಯಲ್ಲಿಯೇ ತುಮಕೂರಿನಲ್ಲಿಯೂ ದಸರಾ ಉತ್ಸವವನ್ನು ಅದ್ದೂರಿಯಾಗಿ ಆಚರಿಸಲಾಗುತ್ತಿದೆ. ಪ್ರಥಮ ಬಾರಿಗೆ ಆಚರಿಸಲಾಗುತ್ತಿರುವ ತುಮಕೂರು ದಸರಾ ಉತ್ಸವಕ್ಕೆ ಜಿಲ್ಲೆಯ ಕಲಾಸಕ್ತರು, ಸಾಹಿತಿಗಳು, ಕ್ರೀಡಾಪಟುಗಳು, ಲೇಖಕರು, ವಿದ್ಯಾರ್ಥಿಗಳು, ಸಾರ್ವಜನಿಕರು ಸಾಕ್ಷಿಯಾಗಬೇಕೆಂದರು.


    Provided by
    Provided by

    ದಸರಾ ಉತ್ಸವದ 9ನೇ ದಿನವಾದ ಅಕ್ಟೋಬರ್ 11ರಂದು ಜಿಲ್ಲೆಯ ಜನರ ಮನಸ್ಸನ್ನು ರಂಜಿಸಲು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಆಗಮಿಸಲಿದ್ದು, ಖ್ಯಾತ ಗಾಯಕ ಗುರು ಕಿರಣ್ ಮತ್ತು ಕಂಬದ ರಂಗಯ್ಯ ಅವರ ತಂಡಗಳಿಂದ ಸಂಗೀತ ರಸಸಂಜೆ, ಮಿನಿ ಮ್ಯಾರಥಾನ್, ಕುಸ್ತಿ, ಆಕರ್ಷಕ ಲೇಸರ್ ಶೋ ಕಾರ್ಯಕ್ರಮವಲ್ಲದೆ, ಅ.12ರಂದು ಮಧ್ಯಾಹ್ನ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ವೃತ್ತದಿಂದ ಜಂಬೂಸವಾರಿ ಮೆರವಣಿಗೆ ಆರಂಭವಾಗಲಿದೆ. ಮೆರವಣಿಗೆಯಲ್ಲಿ ಅಂಬಾರಿಯಲ್ಲಿ ಶ್ರೀ ಚಾಮುಂಡೇಶ್ವರಿ ದೇವಿಯನ್ನು ಹೊತ್ತ ಆನೆ ಎಲ್ಲರ ಗಮನ ಸೆಳೆಯಲಿದೆ. ಜಂಬೂಸವಾರಿ ಮೆರವಣಿಗೆಯಲ್ಲಿ ಪೊಲೀಸ್ ಇಲಾಖೆಯ ಅಶ್ವದಳ, ಜಾನಪದ ಕಲಾ ತಂಡಗಳು, ವಿಂಟೇಜ್ ಕಾರ್ ಗಳು, ಪೊಲೀಸ್ ಹಾಗೂ ಎನ್.ಸಿ.ಸಿ ಬ್ಯಾಂಡ್, ಹಳ್ಳಿಕಾರ್ ಎತ್ತುಗಳು ಸೇರಿದಂತೆ ಅಲಂಕೃತಗೊಂಡ ಟ್ರ್ಯಾಕ್ಟರ್ ನಲ್ಲಿ ಜಿಲ್ಲೆಯ 70 ದೇವರುಗಳು ಇರಲಿವೆ ಎಂದು ತಿಳಿಸಿದರು.

    ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ದಸರಾ ಉತ್ಸವ ಆಚರಣೆಗಾಗಿ ವಿವಿಧ ವೇದಿಕೆಗಳನ್ನು ಈಗಾಗಲೇ ಸಿದ್ಧಪಡಿಸಲಾಗುತ್ತಿದ್ದು, ಅಕ್ಟೋಬರ್ 9ರಂದು ಮೈದಾನದನಲ್ಲಿ ನಿರ್ಮಿಸಿರುವ ಶಿಕ್ಷಣ ಭೀಷ್ಮ ಎಚ್.ಎಂ. ಗಂಗಾಧರಯ್ಯ ಮಹಾದ್ವಾರವನ್ನು ಉದ್ಘಾಟನೆ ಮಾಡಲಾಗುವುದು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ತಿಳಿಸಿದರು.

    ಗುಬ್ಬಿ ವೀರಣ್ಣ ಕಲಾಕ್ಷೇತ್ರದ ಹಾಸ್ಯ ಚಕ್ರವರ್ತಿ ನರಸಿಂಹರಾಜು ವೇದಿಕೆಯಲ್ಲಿ ಅಕ್ಟೋಬರ್ 10ರವರೆಗೆ ನಡೆಯಲಿರುವ ಯುವ ಸಂಭ್ರಮ ಕಾರ್ಯಕ್ರಮದಲ್ಲಿ ಪ್ರತಿನಿತ್ಯ ಜಿಲ್ಲೆಯ ಯುವ ಪ್ರತಿಭೆಗಳು ಮತ್ತು ವಿವಿಧ ಕಲಾ ತಂಡಗಳಿಂದ ವೈವಿಧ್ಯಮಯ ಕಲಾ ಪ್ರದರ್ಶನಗಳು ಜರುಗುತ್ತಿವೆ. ಅಲ್ಲದೆ ಅ.11ರಂದು ಚಾಲನೆ ನೀಡಲಿರುವ ವಿಂಟೇಜ್ ಕಾರುಗಳ ಪ್ರದರ್ಶನ, ಹೆಲಿಕ್ಯಾಪ್ಟರ್ ಪ್ರದರ್ಶನ, ರಾಜ ರಾಮಣ್ಣ ವಸ್ತು ಪ್ರದರ್ಶನ, ತೋಟಗಾರಿಕೆ ಇಲಾಖೆ ವಸ್ತು ಪ್ರದರ್ಶನವನ್ನು ಏರ್ಪಡಿಸಲು ಸಿದ್ಧತೆಗಳು ಭರದಿಂದ ಸಾಗುತ್ತಿದೆ ಎಂದು ತಿಳಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ಜ್ಯೋತಿಷಿ ಮಾತು ನಂಬಿ ತಾಯಿಯನ್ನೇ ಕೊಂದ ಮಗಳು: ಸಿನಿಮೀಯ ರೀತಿ ಕಥೆ ಬಯಲಾಗಿದ್ದು ಹೇಗೆ?

    February 13, 2026

    ಬೆಂಗಳೂರು ರೇಸ್‌ ಕೋರ್ಸ್ ತುಮಕೂರಿನ ಕುಣಿಗಲ್‌ ಗೆ ಸ್ಥಳಾಂತರ: ಸಂಪುಟ ನಿರ್ಣಯ

    February 13, 2026

    ವಿದ್ಯುತ್ ಖಾಸಗೀಕರಣ, ಬೀಜ ಮಸೂದೆ ವಿರುದ್ಧ ಕಾರ್ಮಿಕ ಸಂಘಟನೆಗಳ ಪ್ರತಿಭಟನೆ

    February 13, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಅಣೆಕಟ್ಟುಗಳ ಸುರಕ್ಷತಾ ಮಾನದಂಡಗಳು ರಾಜಕೀಯ ಗಡಿಗಳಿಗೆ ಸೀಮಿತವಾಗಿರಬಾರದು: ಸಿಎಂ ಸಿದ್ದರಾಮಯ್ಯ

    February 13, 2026

    ಬೆಂಗಳೂರು: ಅಣೆಕಟ್ಟುಗಳ ಸುರಕ್ಷತೆ ಮತ್ತು ನಿರ್ವಹಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಹೇಳಿಕೆ ನೀಡಿದ್ದಾರೆ. “ನೀರು ಯಾವುದೇ ರಾಜಕೀಯ…

    ಶಾಸಕ ಅನಿಲ್ ಚಿಕ್ಕಮಾದುರವರ 38ನೇ ಹುಟ್ಟುಹಬ್ಬ: ಆಸ್ಪತ್ರೆ ರೋಗಿಗಳಿಗೆ ಹಣ್ಣುಹಂಪಲು

    February 13, 2026

    ಲಿಂಗಮ್ಮನಹಳ್ಳಿಯಲ್ಲಿ 150ನೇ ನೂತನ ಹಾಲು ಉತ್ಪಾದಕರ ಸಹಕಾರ ಸಂಘದ ಉದ್ಘಾಟನೆ

    February 13, 2026

    ಜ್ಯೋತಿಷಿ ಮಾತು ನಂಬಿ ತಾಯಿಯನ್ನೇ ಕೊಂದ ಮಗಳು: ಸಿನಿಮೀಯ ರೀತಿ ಕಥೆ ಬಯಲಾಗಿದ್ದು ಹೇಗೆ?

    February 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.