nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅಣೆಕಟ್ಟುಗಳ ಸುರಕ್ಷತಾ ಮಾನದಂಡಗಳು ರಾಜಕೀಯ ಗಡಿಗಳಿಗೆ ಸೀಮಿತವಾಗಿರಬಾರದು: ಸಿಎಂ ಸಿದ್ದರಾಮಯ್ಯ

    February 13, 2026

    ಶಾಸಕ ಅನಿಲ್ ಚಿಕ್ಕಮಾದುರವರ 38ನೇ ಹುಟ್ಟುಹಬ್ಬ: ಆಸ್ಪತ್ರೆ ರೋಗಿಗಳಿಗೆ ಹಣ್ಣುಹಂಪಲು

    February 13, 2026

    ಲಿಂಗಮ್ಮನಹಳ್ಳಿಯಲ್ಲಿ 150ನೇ ನೂತನ ಹಾಲು ಉತ್ಪಾದಕರ ಸಹಕಾರ ಸಂಘದ ಉದ್ಘಾಟನೆ

    February 13, 2026
    Facebook Twitter Instagram
    ಟ್ರೆಂಡಿಂಗ್
    • ಅಣೆಕಟ್ಟುಗಳ ಸುರಕ್ಷತಾ ಮಾನದಂಡಗಳು ರಾಜಕೀಯ ಗಡಿಗಳಿಗೆ ಸೀಮಿತವಾಗಿರಬಾರದು: ಸಿಎಂ ಸಿದ್ದರಾಮಯ್ಯ
    • ಶಾಸಕ ಅನಿಲ್ ಚಿಕ್ಕಮಾದುರವರ 38ನೇ ಹುಟ್ಟುಹಬ್ಬ: ಆಸ್ಪತ್ರೆ ರೋಗಿಗಳಿಗೆ ಹಣ್ಣುಹಂಪಲು
    • ಲಿಂಗಮ್ಮನಹಳ್ಳಿಯಲ್ಲಿ 150ನೇ ನೂತನ ಹಾಲು ಉತ್ಪಾದಕರ ಸಹಕಾರ ಸಂಘದ ಉದ್ಘಾಟನೆ
    • ಜ್ಯೋತಿಷಿ ಮಾತು ನಂಬಿ ತಾಯಿಯನ್ನೇ ಕೊಂದ ಮಗಳು: ಸಿನಿಮೀಯ ರೀತಿ ಕಥೆ ಬಯಲಾಗಿದ್ದು ಹೇಗೆ?
    • ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪಗೆ ಪಕ್ಷದಲ್ಲೇ ಪ್ರತಿಸ್ಪರ್ಧಿ | ವಿಧಾನ ಸಭಾ ಚುನಾವಣೆಗೆ ನಾನು ಸ್ಪರ್ಧಾಕಾಂಕ್ಷಿ ಎಂದ ದೊಡ್ಡಘಟ್ಟ ಚಂದ್ರೇಶ್
    • ಕ್ವಿಂಟಾಲ್‌ ಗೆ 4,886 ರೂ.: ಬೆಂಬಲ ಬೆಲೆಯಲ್ಲಿ ರಾಗಿ ಖರೀದಿ | ಶಾಸಕ ಕೆ.ಷಡಕ್ಷರಿ
    • ಬೆಂಗಳೂರು ರೇಸ್‌ ಕೋರ್ಸ್ ತುಮಕೂರಿನ ಕುಣಿಗಲ್‌ ಗೆ ಸ್ಥಳಾಂತರ: ಸಂಪುಟ ನಿರ್ಣಯ
    • ವಿದ್ಯುತ್ ಖಾಸಗೀಕರಣ, ಬೀಜ ಮಸೂದೆ ವಿರುದ್ಧ ಕಾರ್ಮಿಕ ಸಂಘಟನೆಗಳ ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವೈವಿದ್ಯತೆಯ ಭಾರತವನ್ನು ಒಗ್ಗೂಡಿಸಿದ ಗಾಂಧೀಜಿಯವರ ಆದರ್ಶ ಪಾಲಿಸೋಣ: ಗೃಹ ಸಚಿವ ಪರಮೇಶ್ವರ
    ತುಮಕೂರು October 2, 2024

    ವೈವಿದ್ಯತೆಯ ಭಾರತವನ್ನು ಒಗ್ಗೂಡಿಸಿದ ಗಾಂಧೀಜಿಯವರ ಆದರ್ಶ ಪಾಲಿಸೋಣ: ಗೃಹ ಸಚಿವ ಪರಮೇಶ್ವರ

    By adminOctober 2, 2024No Comments2 Mins Read
    DCparameshwer

    ತುಮಕೂರು: ವಿವಿಧ ಭಾಷೆ, ಸಂಸ್ಕೃತಿಯ ಜನರನ್ನೊಳಗೊಂಡ ಭಾರತವನ್ನು ಒಗ್ಗೂಡಿಸಿದ ಮಹಾತ್ಮ ಗಾಂಧೀಜಿಯವರ ಆದರ್ಶ, ತತ್ವಗಳನ್ನು ಪಾಲಿಸೋಣ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಜಿ.ಪರಮೇಶ್ವರ ಅವರು ಹೇಳಿದರು.
    ತುಮಕೂರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ವತಿಯಿಂದ ನಗರದ ಜೂನಿಯರ್ ಕಾಲೇಜು ಆವರಣದಲ್ಲಿ ನಡೆದ ‘ಮಹಾತ್ಮ ಗಾಂಧೀಜಿ, ಲಾಲ್ ಬಹದ್ದೂರ್ ಶಾಸ್ತ್ರೀಜಿ ಜಯಂತಿ ಹಾಗೂ ಪೌರಕಾರ್ಮಿಕ ದಿನಾಚರಣೆ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

    ಯುವ ಪೀಳಿಗೆಗೆ ಸ್ವಾತಂತ್ರ್ಯ ಹೋರಾಟ ದಿನಗಳು ಹಾಗೂ ಗಾಂಧೀಜಿಯವರ ಆದರ್ಶಗಳನ್ನು ಪರಿಚಯಿಸಬೇಕು. ಜವಾಹರ್ ಲಾಲ್ ನೆಹರೂ ಅವರ ನಂತರ ಜನಾಭಿಪ್ರಾಯವನ್ನು ಗಳಿಸುವಲ್ಲಿ ಯಶಸ್ವಿಯಾದ ಲಾಲ್ ಬಹದ್ದೂರ್ ಶಾಸ್ತ್ರೀ ಅವರ ಕೊಡುಗೆಯನ್ನು ಸ್ಮರಿಸೋಣ. ಶಾಸ್ತ್ರಿ ಅವರು ಹದಿನೇಳನೇ ವಯಸ್ಸಿನಲ್ಲಿ ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡು, ಗಾಂಧೀಜಿಯವರ ಅನುಯಾಯಿಯಾಗಿದ್ದರು. ಈ ಇಬ್ಬರು ಮಹಾನ್ ನಾಯಕರ ಜನ್ಮ ದಿನಾಚರಣೆ ಒಂದೇ ದಿನ ಇರುವುದು ಆಶ್ಚರ್ಯಕರ ಎಂದರು.


    Provided by
    Provided by

    ಗಾಂಧೀಜಿ ಅವರು ದಕ್ಷಿಣಾ ಆಫ್ರಿಕಾಕ್ಕೆ ಭೇಟಿ ನೀಡಿದಾಗ ಆಳ್ವಿಕೆ ನಡೆಸುತ್ತಿದ್ದ ಬ್ರಿಟೀಷರು, ವರ್ಣಬೇದ ತಾರತಮ್ಯದಿಂದ ಗಾಂಧೀಜಿಯವರನ್ನು ರೈಲಿನಿಂದ ಕೆಳಗೆ ಇಳಿಸಿದ್ದರು. ಅವರು ಅನುಭವಿಸಿದ ಕಷ್ಟವೇ ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ಅಡಿಪಾಯವಾಯಿತು. ಭಾರತಕ್ಕೆ ಆಗಮಿಸಿ ಸ್ವಾತಂತ್ರ್ಯ ಹೋರಾಟದ ನೇತೃತ್ವ ವಹಿಸಿಕೊಂಡು ಅಹಿಂಸಾ, ಶಾಂತಿ ಮೂಲಕ ಸ್ವಾತಂತ್ರ್ಯ ತಂದುಕೊಟ್ಟರು. ಮುಂದಿನ ಪೀಳಿಗೆಗು ಗಾಂಧೀಜಿಯವರ ತತ್ವ, ಅಸದರ್ಶಗಳನ್ನು ತಿಳಿಸುವ ಕೆಲಸವಾಗಬೇಕು ಎಂದು ಹೇಳಿದರು.

    ಗಾಂಧೀಜಿ ಅವರು ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ 1927ರಲ್ಲಿ ತುಮಕೂರಿಗೆ ಬಂದಾಗ ಜನಸಮುದಾಯಕ್ಕೆ ಪ್ರೇರೇಪಣೆ ಮಾಡಿ ಹೋಗಿದ್ದರು. ಜಿಲ್ಲೆಗೆ ಅವರು ಪ್ರೇರೇಪಣೆ ಮಾಡಿರುದನ್ನು ನೆನಪಿಸಬೇಕಿದೆ ಎಂದರು
    ತುಮಕೂರಿನ ಇತಿಹಾಸದಲ್ಲಿ ಮೊದಲ ಬಾರಿಗೆ ತುಮಕೂರು ದಸರಾ ಕಾರ್ಯಕ್ರಮ ಆಯೋಜಿಸಲಾಗಿದೆ. ಒಂಬತ್ತು ದಿವಸ ವಿವಿಧ ಕಾರ್ಯಕ್ರಮಗಳು ನಡೆಯಲಿದ್ದು, ನವದುರ್ಗೆಯರನ್ನು ಆರಾಧಿಸಗುವುದು. 70 ದೇವರುಗಳ ಮೆರವಣಿಗೆ ಹೊರಡಲಿದೆ ಎಂದು ತಿಳಿಸಿದರು.

    ಕನ್ನಡ ಚಲನಚಿತ್ರರಂಗದ ಖ್ಯಾತ ನಟ ಶಿವರಾಜ ಕುಮಾರ್, ಸಂಗೀತಾ ನಿರ್ದೇಶಕ ಗುರು ಕಿರಣ್, ಗಾಯಕ ವಿಜಯ ಪ್ರಕಾಶ್ ಅವರು ಆಗಮಿಸಲಿದ್ದಾರೆ. ವಿಂಟೇಜ್ ಕಾರ್ ಪ್ರದರ್ಶನ, ಡ್ರೋಣ್ ಶೋ, ಲೇಸರ್ ಬೀಮ್ ಶೋ ಹಲವು ನಡೆಸಲಾಗುತ್ತಿದೆ. ಹೆಚ್‌ಎಎಲ್ನ ಹೆಲಿಕ್ಯಾಪ್ಟರ್ ಅನ್ನು ಪ್ರದರ್ಶನಕ್ಕೆ ಇಡಲಾಗುವುದು. ನಗರದ ಎಲ್ಲ ಬೀದಿಗಳನ್ನು ದೀಪಗಳಿಂದ ಅಲಂಕಾರಗೊಳಿಸಲಾಗುತ್ತಿದೆ. ಜಿಲ್ಲೆಯ ಎಲ್ಲ ನಾಗರಿಕರು ಭಾಗವಹಿಸಿ ತುಮಕೂರು ದಸರಾ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಹೇಳಿದರು.

    ದೇಶದ ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ 1927ರಲ್ಲಿ ಮಹಾತ್ಮ ಗಾಂಧೀಜಿ ಅವರು ತುಮಕೂರು ಜಿಲ್ಲೆಗೆ ಆಗಮಿಸಿದ್ದ ವೇಳೆ ನಗರದಲ್ಲಿ ಗಾಂಧೀಜಿ ವಾಸ್ತವ್ಯ ಮಾಡಿದ್ದ ‘ಮಹಾತ್ಮ ಗಾಂಧಿ ಸ್ಮಾರಕ ಭವನಕ್ಕೆ ಭೇಟಿ ನೀಡಿದರು. ಕೇಂದ್ರ ಸಚಿವ ವಿ.ಸೋಮಣ್ಣ ಅವರೊಂದಿಗೆ ಗಾಂಧೀಜಿಯವರ ಪುತ್ಥಳಿಗೆ ಪುಷ್ಪಾರ್ಚನೆ ಸಲ್ಲಿಸಿ ಭಾವಚಿತ್ರಗಳನ್ನು ವೀಕ್ಷಿಸಿದರು.
    ತುಮಕೂರು ಮಹಾನಗರ ಪಾಲಿಕೆಯ 81 ಪೌರಕಾರ್ಮಿಕರಿಗೆ ಖಾಯಂ ನೇಮಕಾತಿ ಆದೇಶ ಪತ್ರವನ್ನು ವಿತರಿಸಲಾಯಿತು. ವಿವಿಧ ಶೈಕ್ಷಣಿಕ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ನೀಡಿದರು.

    ಈ ಸಂದರ್ಭದಲ್ಲಿ ಕೇಂದ್ರ ಸಚಿವ ವಿ.ಸೋಮಣ್ಣ, ಶಾಸಕರಾದ ಜ್ಯೋತಿಗಣೇಶ್, ಬಿ.ಸುರೇಶ್ ಗೌಡ, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಮಹಾನಗರ ಪಾಲಿಕೆ ಆಯುಕ್ತೆ ಬಿ.ವಿ.ಅಶ್ವಿಜಾ, ಜಿಲ್ಲಾ ಪಂಚಾಯತ್ ಸಿಇಒ ಪ್ರಭು, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಅಶೋಕ್ ಅವರು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಜ್ಯೋತಿಷಿ ಮಾತು ನಂಬಿ ತಾಯಿಯನ್ನೇ ಕೊಂದ ಮಗಳು: ಸಿನಿಮೀಯ ರೀತಿ ಕಥೆ ಬಯಲಾಗಿದ್ದು ಹೇಗೆ?

    February 13, 2026

    ಬೆಂಗಳೂರು ರೇಸ್‌ ಕೋರ್ಸ್ ತುಮಕೂರಿನ ಕುಣಿಗಲ್‌ ಗೆ ಸ್ಥಳಾಂತರ: ಸಂಪುಟ ನಿರ್ಣಯ

    February 13, 2026

    ವಿದ್ಯುತ್ ಖಾಸಗೀಕರಣ, ಬೀಜ ಮಸೂದೆ ವಿರುದ್ಧ ಕಾರ್ಮಿಕ ಸಂಘಟನೆಗಳ ಪ್ರತಿಭಟನೆ

    February 13, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಅಣೆಕಟ್ಟುಗಳ ಸುರಕ್ಷತಾ ಮಾನದಂಡಗಳು ರಾಜಕೀಯ ಗಡಿಗಳಿಗೆ ಸೀಮಿತವಾಗಿರಬಾರದು: ಸಿಎಂ ಸಿದ್ದರಾಮಯ್ಯ

    February 13, 2026

    ಬೆಂಗಳೂರು: ಅಣೆಕಟ್ಟುಗಳ ಸುರಕ್ಷತೆ ಮತ್ತು ನಿರ್ವಹಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಹೇಳಿಕೆ ನೀಡಿದ್ದಾರೆ. “ನೀರು ಯಾವುದೇ ರಾಜಕೀಯ…

    ಶಾಸಕ ಅನಿಲ್ ಚಿಕ್ಕಮಾದುರವರ 38ನೇ ಹುಟ್ಟುಹಬ್ಬ: ಆಸ್ಪತ್ರೆ ರೋಗಿಗಳಿಗೆ ಹಣ್ಣುಹಂಪಲು

    February 13, 2026

    ಲಿಂಗಮ್ಮನಹಳ್ಳಿಯಲ್ಲಿ 150ನೇ ನೂತನ ಹಾಲು ಉತ್ಪಾದಕರ ಸಹಕಾರ ಸಂಘದ ಉದ್ಘಾಟನೆ

    February 13, 2026

    ಜ್ಯೋತಿಷಿ ಮಾತು ನಂಬಿ ತಾಯಿಯನ್ನೇ ಕೊಂದ ಮಗಳು: ಸಿನಿಮೀಯ ರೀತಿ ಕಥೆ ಬಯಲಾಗಿದ್ದು ಹೇಗೆ?

    February 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.