ಕಲಬುರಗಿ: 3 ತಿಂಗಳಿಂದ ಸಂಬಳ ಸಿಗದಿದ್ದಕ್ಕೆ ಬೇಸರಗೊಂಡ ಗ್ರಂಥಾಲಯ ಮೇಲ್ವಿಚಾರಕಿಯೋರ್ವರು ಆತ್ಮಹತ್ಯೆಗೆ ಶರಣಾದ ಘಟನೆ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಮಳಖೇಡ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಭಾಗ್ಯಶ್ರಿ (45) ಎಂದು ಗುರುತಿಸಲಾಗಿದ್ದು, ಅವರು ಮಳಖೇಡ ಸರ್ಕಾರಿ ಗ್ರಂಥಾಲಯದಲ್ಲಿ ಮೇಲ್ವಿಚಾರಕಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಗ್ರಾಮ ಪಂಚಾಯಿತಿ ಸದಸ್ಯ ಪಾಂಡುಸಿಂಗ್ ಚವ್ಹಾಣ್ ಅವರ ಹೇಳಿಕೆಯ ಪ್ರಕಾರ, ‘ಮೂರು ತಿಂಗಳಿಂದ ವೇತನ ಪಾವತಿ ಆಗಿರಲಿಲ್ಲ. ಅಧಿಕಾರಿಗಳು ಸತಾಯಿಸುತ್ತಿದ್ದರು. ಇದೇ ಕಾರಣಕ್ಕೆ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ಪತ್ರ ಬರೆದಿಟ್ಟಿದ್ದಾರೆ. ಡೆತ್ ನೋಟ್ನಲ್ಲಿ ಪಿಡಿಓ ಗ್ರಾಮ ಪಂಚಾಯತಿ ಅಧ್ಯಕ್ಷರ ಹೆಸರು ಉಲ್ಲೇಖಿಸಿ ಮಳಖೇಡ ಗ್ರಾಮ ಪಂಚಾಯತಿಯ ಆವರಣದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿಸಿದ್ದಾರೆ.
ಘಟನೆಯ ನಂತರ ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಸ್ಥಳೀಯರು “ಸೇಡಂ ಶಾಸಕ ಡಾ. ಶರಣಪ್ರಕಾಶ ಪಾಟೀಲ್ ಸ್ಥಳಕ್ಕೆ ಬರುವವರೆಗೂ ಮೃತದೇಹವನ್ನು ಹೊರತೆಗೆಯುವುದಿಲ್ಲ ಎಂದು ಪಟ್ಟು ಹಿಡಿದು ಗ್ರಂಥಾಲಯದ ಎದುರು ಪ್ರತಿಭಟನೆ ನಡೆಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC