ಬೆಂಗಳೂರು: ಸ್ಮೋಕಿಂಗ್ ಝೋನ್ ಇಲ್ಲದ ಹೊಟೇಲ್ ಬಾರ್ ಗಳ ಪರವಾನಗಿ ರದ್ದು ಮಾಡಲಾಗುವುದು ಎಂದು ಬಿಬಿಎಂಪಿ ಎಚ್ಚರಿಕೆ ನೀಡಿದೆ.
ಬಿಬಿಎಂಪಿ ಆರೋಗ್ಯ ಇಲಾಖೆ, ಬಾರ್ ಗಳು, ಹೋಟೆಲ್ ಗಳು ಮತ್ತು ರೆಸ್ಟೋರೆಂಟ್ ಗಳಂತಹ 412 ಮಾಲೀಕರಿಗೆ ನೋಟಿಸ್ ಕಳುಹಿಸಿದ್ದು, ಸ್ಮೋಕಿಂಗ್ ಝೋನ್ ನಿರ್ಮಿಸುವಂತೆ ಸೂಚಿಸಿದೆ.
ನೋಟಿಸ್ ನೀಡಿದ ದಿನಾಂಕದಿಂದ ಒಂದು ವಾರದ ಕಾಲಾವಕಾಶವನ್ನೂ ನೀಡಿದ್ದು, ತಪ್ಪಿದಲ್ಲಿ ಟ್ರೇಡ್ ಲೈಸೆನ್ಸ್ ಅಮಾನತುಗೊಳಿಸಲಾಗುವುದು ಎಂದು ಸೂಚಿಸಲಾಗಿದೆ.
ಜೂನ್ 22, 2022 ರ ಸುಪ್ರೀಂ ಕೋರ್ಟ್ ನಿರ್ದೇಶನ ಮತ್ತು ಸಿಗರೇಟ್ ಮತ್ತಿತರ ತಂಬಾಕು ಉತ್ಪನ್ನಗಳ ಕಾಯ್ದೆ 2003 (COTPA) ಸೆಕ್ಷನ್ 4 ರ ಪ್ರಕಾರ ಕ್ರಮ ಕೈಗೊಳ್ಳಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC