ಕೊಪ್ಪಳ: ಜಿಲ್ಲೆಯ ಗಂಗಾವತಿ ತಾಲೂಕಿನ ಮರಕುಂಬಿ ಗ್ರಾಮದಲ್ಲಿ ಆಗಸ್ಟ್ 28, 2014ರಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಮನೆಗಳನ್ನ ಧ್ವಂಸಗೊಳಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 98 ಮಂದಿಗೆ ಕೋರ್ಟ್ ಜೀವಾವಧಿ ಶಿಕ್ಷೆ ನೀಡಿದೆ.
ಮರಕುಂಬಿ ಗ್ರಾಮದಲ್ಲಿ ದಲಿತರ ಮೇಲೆ ಹಲ್ಲೆ ಪ್ರಕರಣದಲ್ಲಿ ಮಹತ್ವದ ತೀರ್ಪು ಪ್ರಕಟಗೊಂಡಿದೆ. ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಮರಕುಂಬಿಯ 101 ಅಪರಾಧಿಗಳ ಪೈಕಿ 98 ಮಂದಿಗೆ 9 ವರ್ಷಗಳ ಬಳಿಕ ಜೀವಾವಧಿ ಶಿಕ್ಷೆ ವಿಧಿಸಿ ನ್ಯಾಯಾಧೀಶರಾದ ಚಂದ್ರಶೇಖರ್ ಮಹತ್ವದ ತೀರ್ಪು ಪ್ರಕಟಿಸಿದ್ದಾರೆ. ಉಳಿದ ಮೂವರಿಗೆ ಕಠಿಣ ಶಿಕ್ಷೆ, ತಲಾ 2 ಸಾವಿರ ದಂಡ ವಿಧಿಸಿದೆ.
117 ಮಂದಿಯ ಪೈಕಿ 16 ಆರೋಪಿಗಳು ಮೃತಪಟ್ಟಿದ್ದಾರೆ. 101 ಆರೋಪಿಗಳ ವಿರುದ್ಧ ಇರುವ ದಾಖಲೆ ಪರಿಶೀಲನೆ ಮಾಡಲಾಗಿದ್ದು, ಅಕ್ಟೋಬರ್ 21ರಂದು ಆರೋಪಿಗಳ ವಿರುದ್ಧದ ಆರೋಪ ಸಾಬೀತಾಗಿದೆ. ನ್ಯಾಯಧೀಶರಾದ ಚಂದ್ರಶೇಖರ್ ರಿಂದ ಮಹತ್ವದ ತೀರ್ಪು ನೀಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


