ತುಮಕೂರು: ಚಿನ್ನಾಭರಣ ದೋಚುವ ಸಲುವಾಗಿ ಮಹಿಳೆಯನ್ನು ಕೊಲೆ ಮಾಡಿದ್ದ ಇಬ್ಬರು ಅಪರಾಧಿಗಳಿಗೆ ಮಧುಗಿರಿಯ 4ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪುನೀಡಿದೆ.
ಅಪರಾಧಿಗಳೆಂದು ಶಿವಕುಮಾರ, ಮಂಜುನಾಥ ಅವರುಗಳನ್ನು ನ್ಯಾಯಾಧೀಶ ಯಾದವ ಕರಕೇರ ತೀರ್ಪು ನೀಡಿದ್ದಾರೆ.
ಬಡವನಹಳ್ಳಿ ಪೊಲೀಸ್ ಠಾಣೆ ವ್ಯಾಫ್ತಿಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಫಿಗಳಿಬ್ಬರು 06—06–19 ರಂದು ಕೊಲೆಯಾಗಿರುವ ಗಿರಿಜಮ್ಮ ರವರನ್ನು ಮಧ್ಯಾಹ್ನ 12:30 ಗಂಟೆಯಲ್ಲಿ ತುಂಬಾಡಿಯಿಂದ ಕೆ.ಎ-06-ಡಿ-3279 ಟಾಟಾ ಇಂಡಿಕಾ ವಿಸ್ತಾ ಕಾರಿನಲ್ಲಿ ಗರಣಿ ಹೊಸಕೋಟೆಗೆ ಮಟನ್ ಊಟಕ್ಕೆ ಹೋಗಿಬರೋಣ ಎಂತಾ ಹೇಳಿ ಕರೆದುಕೊಂಡು ಹೋಗಿದ್ದರು. ಅದೇ ದಿವಸ ಸಂಜೆ 06:30 ಗಂಟೆಗೆ ಮಾಯಗೊಂಡನಹಳ್ಳಿ ಕ್ರಾಸ್ ಹತ್ತಿರದ ರಸ್ತೆ ಬದಿಯ ಕೆಂಪಚೆನ್ನೇನಹಳ್ಳಿ ಬಳಿ ಪಾಳು ಜಮೀನಿಗೆ ಕರೆದುಕೊಂಡು ಹೋಗಿದ್ದರು. ಹೊಂಗೆಗಿಡದ ಮರೆಯಲ್ಲಿ ಕಾರುನಿಲ್ಲಿಸಿ ಕಾರಿನಲ್ಲಿಯೇ ಆರೋಪಿಗಳು ಹಗ್ಗವನ್ನು ಗಿರಿಜಮ್ಮಳ ಕುತ್ತಿಗೆಗೆ ಬಿಗಿದು ಕೊಲೆ ಮಾಡಿದ್ದರು. ಗಿರಿಜಮ್ಮಳ ಎದೆಗೆ ಕಾಲಿನಿಂದ ಒದ್ದು ಕೈಯಿಂದ ಗುದ್ದಿ ಇಬ್ಬರೂ ಸೇರಿ ಕೊಲೆ ಮಾಡಿದ್ದರು.
ನಂತರ ಆಕೆಯ ಬಳಿಯಿದ್ದ ಸುಮಾರು 1,83,500/- ರೂ ಬೆಲೆ ಬಾಳುವ ಬಂಗಾರದ ಒಡವೆಗಳನ್ನು ತೆಗೆದುಕೊಂಡು ಅದೇ ಕಾರಿನಲ್ಲಿ ಗಿರಿಜಮ್ಮಳ ಮೃತದೇಹದೊಂದಿಗೆ ರಂಟವಾಳಕ್ಕೆ ಬಂದಿದ್ದರು.
ಡಿಸೇಲ್ ತೆಗೆದುಕೊಂಡು ಸಂಜೆ 07 ಗಂಟೆ ಸಮಯದಲ್ಲಿ ಆಂಧ್ರ ಗಡಿಭಾಗದ ರಸ್ತೆ ಬದಿಯಲ್ಲಿದ್ದ ಪುಲಮಘಟ್ಟದ ನಾರಾಯಣಪ್ಪ ರವರ ಜಮೀನಿನಲ್ಲಿ ಕೊಲೆ ಕೃತ್ಯದ ಸಾಕ್ಷ್ಯನಾಶ ಮಾಡುವ ಸಲುವಾಗಿ ಗಿರಿಜಮ್ಮಳ ಮೃತ ದೇಹಕ್ಕೆ ಡೀಸೆಲ್ ಹಾಕಿ ಸುಟ್ಟು ಹಾಕಿದ್ದರು. ಮೃತಳ ಮೊಬೈಲ್ ಮತ್ತು ಸಿಮ್ ಅನ್ನು ಸಿಗದಂತೆ ಎಲ್ಲೋ ಎಸೆದು ಸಾಕ್ಷಿ ನಾಶ ಪಡಿಸಿದ್ದರು.
ಮೃತಳ ಮೈಮೇಲಿನ ಒಡವೆಗಳನ್ನು ಕೊರಟಗೆರೆಯ ಮುತ್ತೂಟ್ ಪೈನಾನ್ಸ್ ನಲ್ಲಿ ನೆಕ್ಲೆಸ್ ಮತ್ತು ಉಂಗುರ ಅಡವಿಟ್ಟು ಸಾಲ ಪಡೆದು ಇನ್ನುಳಿದ ಒಡವೆಗಳನ್ನು ತೋವಿನಕೆರೆಯ ಭಾಗ್ಯಲಕ್ಷಿ ಜ್ಯೂವೆಲ್ಲರ್ಸ್ ಗೆ ಹೊಸದಾಗಿ ಸರ ತಾಳಿ ಓಲೆ ಮಾಡಿಕೊಡುವಂತೆ ಕೊಟ್ಟುಬಂದಿದ್ದರು.
ಪೊಲೀಸರ ತನಿಖೆಯಿಂದ ಪ್ರಕರಣ ಬೆಳಕಿಗೆ ಬಂದಿದೆ. ಅಪರಾಧಿಗಳಿಗೆ ಭಾರತೀಯ ದಂಡ ಸಂಹಿತೆಯ ಕಲಂ: 302, 201, 404 ಅಡಿಯಲ್ಲಿ ಜೀವಾವಧಿ ಶಿಕ್ಷೆ ಮತ್ತು ತಲಾ ರೂ. 60,000/- ದಂಡ ವಿಧಿಸಿ ಮಧುಗಿರಿಯ 4ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಯಾದವ ಕರಕೇರ ತೀರ್ಪು ನೀಡಿದ್ದಾರೆ. ಪ್ರಕರಣದಲ್ಲಿಸರ್ಕಾರಿ ಅಭಿಯೋಜಕರಾಗಿ ಬಿ.ಎಂ. ನಿರಂಜನಮೂರ್ತಿ ವಾದ ಮಂಡಿಸಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4