ಕಲಬುರಗಿ: ಎನ್ ಕೌಂಟರ್ ನಲ್ಲಿ ಕೊಲ್ಲುವುದಾಗಿ ಸಚಿವ `ಪ್ರಿಯಾಂಕ್ ಖರ್ಗೆ’ ಗೆ ಜೀವ ಬೆದರಿಕೆ ಪತ್ರ ಬಂದಿದ್ದು, ವಿಧಾನಸೌಧದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿರುವ ಸಚಿವ ಪ್ರಿಯಾಂಕ್ ಖರ್ಗೆ ಅವರು, ಬಿಜೆಪಿಯ ಮನುವಾದಿಗಳು ನನ್ನನ್ನು ಎನ್ ಕೌಂಟರ್ ಮಾಡುವುದಾಗಿ ಜೀವ ಬೆದರಿಕೆಯ ಪತ್ರ ಬರೆದು ನನ್ನ ಕಚೇರಿಗೆ ಕಳುಹಿಸಿದ್ದಾರೆ.
ಜಾತಿ ಹೆಸರನ್ನು ಸಹ ಉಲ್ಲೇಖಿಸಿ ಅವಾಚ್ಯ ಶಬ್ದಗಳಿಂದ ನನ್ನ ಕುಟುಂಬವನ್ನು ನಿಂದಿಸಿದ್ದಾರೆ ಎಂದು ತಿಳಿಸಿದ್ದಾರೆ. ಕಲಬುರಗಿಯಿಂದ ಬೆಂಗಳೂರಿನ ವಿಕಾಸಸೌಧದ ನನ್ನ ಕಚೇರಿಗೆ ಪತ್ರ ಬಂದಿದ್ದು, ವಿಧಾನಸೌಧದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಹೇಳಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


