ನಟ ಪ್ರಕಾಶ್ ರಾಜ್(58) ಹಾಗೂ ಅವರ ಕುಟುಂಬದವರಿಗೆ ಜೀವ ಬೆದರಿಕೆಯೊಡ್ಡಿರುವ ವೀಡಿಯೊಗಳನ್ನು ಹರಿಬಿಟ್ಟಿರುವ ಯೂಟ್ಯೂಬ್ ನ ‘ವಿಕ್ರಮ್ ಟಿ. ವಿ’ ಚಾನೆಲ್ ವಿರುದ್ಧ ಅಶೋಕನಗರ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.
ನಟ ಪ್ರಕಾಶ್ ರಾಜ್ ಅವರು ದೂರು ನೀಡಿದ್ದಾರೆ. ಅದನ್ನು ಆಧರಿಸಿ ವಿಕ್ರಮ್ ಟಿ. ವಿ ಯೂಟ್ಯೂಬ್ ಚಾನೆಲ್ ಮುಖ್ಯಸ್ಥರು ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಎಲ್ಲರಿಗೂ ನೋಟಿಸ್ ನೀಡಿ ವಿಚಾರಣೆ ನಡೆಸಲಾಗುವುದು’ ಎಂದು ಪೊಲೀಸ್ ಮೂಲಗಳು ಹೇಳಿವೆ.


