ಬೀದರ್: ಶನಿವಾರ ಸಂಜೆ ಬೀದರ್ ಜಿಲ್ಲೆಯಲ್ಲಿ ಲಘುಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 2.6ರಷ್ಟು ತೀವ್ರತೆ ದಾಖಲಾಗಿದೆ.
ಹುಮನಾಬಾದ್ ತಾಲ್ಲೂಕಿನ ಸೀತಾಳಗೇರಾ, ತಾಳಮಡಗಿ ಹಾಗೂ ಬೀದರ್ ತಾಲ್ಲೂಕಿನ ಸಿರಕಟನಳ್ಳಿ, ರಂಜೋಳಖೇಣಿ ಗ್ರಾಮದಲ್ಲಿ ಶನಿವಾರ ಸಂಜೆ ಭೂಕಂಪನವಾಗಿದೆ.
ಇದು ಲಘು ಭೂಕಂಪನವಾಗಿದ್ದು, ಯಾವುದೇ ಹಾನಿ ಉಂಟಾಗಿಲ್ಲ. ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296