ಅಯೋಧ್ಯೆಯಲ್ಲಿ ಬಾಬ್ರಿ ಮಸೀದಿ ನಿರ್ನಾಮ ಆದಂತೆ ಭಟ್ಕಳದ ಚಿನ್ನದ ಪಳ್ಳಿಯೂ ಆಗಲಿದೆ. ಇದನ್ನು ಬೇಕಾದರೆ ಬೆದರಿಕೆ ಎಂದು ಬೇಕಾದರೂ ತಿಳಿಯಿರಿ. ಬಾಬ್ರಿ ಮಸೀದಿ ನಿರ್ನಾಮ ಮಾಡಿದಂತೆ ಭಟ್ಕಳದಲ್ಲಿ ಮಾಡುವುದು ಖಂಡಿತ. ಇದು ಹಿಂದೂ ಸಮಾಜದ ತೀರ್ಮಾನವೇ ವಿನಃ ಅನಂತಕುಮಾರ್ ಹೆಗಡೆ ತೀರ್ಮಾನ ಅಲ್ಲ ಎಂದು ಸಂಸದ ಅನಂತಕುಮಾರ್ ಹೆಗಡೆ ಹೇಳಿದ್ದಾರೆ.
ಶಿರ್ಸಿಯ ಸಿಪಿ ಬಜಾರ್ ನಲ್ಲಿಯೂ ಮಸೀದಿ ಇದೆ. ಅದು ಈ ಹಿಂದೆ ವಿಜಯ ವಿಠ್ಠಲ ದೇವಸ್ಥಾನ ಆಗಿತ್ತು. ಶ್ರೀರಂಗಪಟ್ಟಣದಲ್ಲಿರುವ ದೊಡ್ಡ ಮಸೀದಿ ಮಾರುತಿ ದೇವಸ್ಥಾನವಾಗಿತ್ತು. ಇವತ್ತೂ ಅಲ್ಲಿಗೆ ಹೋದರೆ ಮಾರುತಿ ದೇವಸ್ಥಾನ ಕಾಣುತ್ತದೆ ಎಂದು ಕಿಡಿಕಾರಿದರು.
ದೇಶದ ಹಳ್ಳಿಯ ಮೂಲೆ ಮೂಲೆಗಳಲ್ಲಿ ಅಪಮಾನಗೊಂಡಿರುವ ಅನೇಕ ಸಂಕೇತಗಳಿವೆ. ಅದನ್ನು ಕಿತ್ತುಹಾಕೋ ತನಕ ಈ ಹಿಂದೂ ಸಮಾಜ ಸುಮ್ಮನಿರಲ್ಲ. ಈಗ ರಣಭೈರವ ಎದ್ದಾಗಿದೆ, ಮತ್ತೆ ಕೂರುವ ಪ್ರಶ್ನೆಯೇ ಇಲ್ಲ. ಸಾವಿರ ವರ್ಷಗಳ ಸೇಡನ್ನು ತೀರಿಸಿಕೊಳ್ಳದೇ ಇದ್ರೆ ಇದು ಹಿಂದೂ ರಕ್ತವೇ ಅಲ್ಲ. ಹಿಂದೂ ಧರ್ಮ ಋಣ ಇಟ್ಟಿಕೊಳ್ಳುವ ಧರ್ಮ ಅಲ್ಲವೇ ಅಲ್ಲ ಎಂದು ಸಂಸದ ಅನಂತ್ ಕುಮಾರ್ ಹೆಗಡೆ ಹೇಳಿದರು.
ಕಾಂಗ್ರೆಸ್ ನಮ್ಮ ವಿರೋಧಿ ಅಲ್ಲವೇ ಅಲ್ಲ. ಹಿಂದೂ ವಿರೋಧಿಗಳು, ಸನಾತನ ಧರ್ಮ ವಿರೋಧಿಗಳು ನಮ್ಮ ವಿರೋಧಿಗಳು. ಅಲ್ಪಸಂಖ್ಯಾತರ ಓಟಿಗೆ ಹರಾಜಾಗಿ ಹೋದವರು ನಮ್ಮ ವಿರೋಧಿಗಳು. ಅಹಿಂದೂ ಮಾನಸಿಕತೆ ನಮ್ಮ ವಿರೋಧ. ಗತಿಗೆಟ್ಟ ಅಹಿಂದೂ ಮಾನಸಿಕತೆ ನಮ್ಮ ವಿರೋಧ ಎಂದು ಅನಂತ್ ಕುಮಾರ್ ಹೆಗಡೆ ಆಕ್ರೋಶ ವ್ಯಕ್ತಪಡಿಸಿದರು.


