ತುಮಕೂರು: ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿ ಬೆಸ್ಕಾಂ ಸಿ.ಎಸ್.ಡಿ.-1 ಪಶ್ಚಿಮ ಶಾಖೆಯಲ್ಲಿ ಲೈನ್ ಮೆನ್(ಜ್ಯೂನಿಯರ್ ಪವರ್ ಮ್ಯಾನ್) ಆಗಿ ಕೆಲಸ ನಿರ್ವಹಿಸುತ್ತಿದ್ದ ಸುಮಾರು 30 ವರ್ಷದ ಕನ್ನಯ್ಯ ಗಸ್ತಿ ಎಂಬ ವ್ಯಕ್ತಿಯು ನವೆಂಬರ್ 4 ರಿಂದ ಕಾಣೆಯಾಗಿದ್ದಾರೆ ಎಂದು ಈತನ ಅಣ್ಣ ಪರುಶರಾಮ್ ತಾನಾಜಿ ಗಸ್ತಿ ಠಾಣೆಗೆ ದೂರು ನೀಡಿದ್ದಾರೆ.
ಕಾಣೆಯಾದ ವ್ಯಕ್ತಿಯು 5.2 ಅಡಿ ಎತ್ತರ, ಸಾಧಾರಣ ಮೈಕಟ್ಟು, ಎಣ್ಣೆಗೆಂಪು ಮೈಬಣ್ಣ ಹೊಂದಿದ್ದು, ಮೂಗಿನ ಮೇಲೆ ಮಚ್ಚೆ ಇರುತ್ತದೆ. ಕಾಣೆಯಾದ ಸಂದರ್ಭದಲ್ಲಿ ಬಿಳಿ ಬಣ್ಣದ ಚೌಕುಳಿ ಅಂಗಿ, ನೀಲಿ ಬಣ್ಣದ ನೈಟ್ ಪ್ಯಾಂಟ್ ಧರಿಸಿದ್ದನು. ಈತನ ಬಗ್ಗೆ ಸುಳಿವು ಸಿಕ್ಕವರು ಕೂಡಲೇ ಹತ್ತಿರದ ಪೊಲೀಸ್ ಠಾಣೆಯನ್ನು ಸಂಪರ್ಕಿಸಬೇಕೆಂದು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಮನವಿ ಮಾಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q