ತುರುವೇಕೆರೆ: ಏ.1ರಂದು ನಡೆಯಲಿರುವ, ಶ್ರೀ ಸಿದ್ದಗಂಗಾ ಕ್ಷೇತ್ರದ ಲಿಂಗೈಕ್ಯ ಶ್ರೀ ಶಿವಕುಮಾರ ಸ್ವಾಮಿಗಳ 115ನೇ ಜಯಂತೋತ್ಸವಕ್ಕೆ, ತುರುವೇಕೆರೆ ತಾಲೂಕಿನ ಬಿಜೆಪಿ ಪಕ್ಷದ ಸುಮಾರು 5,000 ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ ಎಂದು ಶಾಸಕ ಮಸಾಲ ಜಯರಾಮ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಪಟ್ಟಣ ಸಮೀಪದ ತಮ್ಮ ಸ್ವಗೃಹ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಲಿಂಗೈಕ್ಯ ಸಿದ್ದಗಂಗಾ ಶ್ರೀಗಳ 115ನೇ ಜಯಂತೋತ್ಸವ ಕಾರ್ಯಕ್ರಮವು ತುಮಕೂರಿನಲ್ಲಿ ನೆರವೇರಲಿದ್ದು, ಕಾರ್ಯಕ್ರಮಕ್ಕೆ ಕೇಂದ್ರ ಗೃಹ ಸಚಿವರಾದ ಅಮಿತ್ ಷಾ ಆಗಮಿಸಲಿದ್ದಾರೆ. ಇದರ ಹಿನ್ನೆಲೆಯಲ್ಲಿ ಕ್ಷೇತ್ರದಿಂದ 5,000 ಬಿಜೆಪಿ ಪಕ್ಷದ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಕ್ಷೇತ್ರ ವ್ಯಾಪ್ತಿಯಲ್ಲಿರುವ ಬಿ.ಜೆ.ಪಿ ಪಕ್ಷದ ಕಾರ್ಯಕರ್ತರುಗಳು ತೆರಳಲು ಸೂಕ್ತ ವಾಹನದ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಕಾರ್ಯಕರ್ತರನ್ನು ಕರೆತರಲು ಗ್ರಾಮ ಪಂಚಾಯಿತಿ ಮಟ್ಟದ ಬಿಜೆಪಿ ಪಕ್ಷದ ಮುಖಂಡರುಗಳಿಗೆ ಹಾಗೂ ಪದಾಧಿಕಾರಿಗಳಿಗೆ ಜವಾಬ್ದಾರಿ ವಹಿಸಲಾಗಿದೆ ಎಂದರು. ಅಲ್ಲದೆ ಅಂದು ಬೆಳಗ್ಗೆ 8 ಗಂಟೆಗೆ ಆಯಾ ಗ್ರಾಮ ಪಂಚಾಯಿತಿ ಪ್ರದೇಶಗಳಿಂದ ವಾಹನಗಳು ತುಮಕೂರಿನ ಶ್ರಮಕ್ಕೆ ತೆರಳಲಿವೆ. ಕ್ಷೇತ್ರದ ಸರ್ವರು ಸಹಾ ಕಾರ್ಯಕ್ರಮದ ಯಶಸ್ಸಿಗಾಗಿ ಸಹಕರಿಸಬೇಕೆಂದು ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ತಾಲೂಕು ಬಿಜೆಪಿ ಅಧ್ಯಕ್ಷ ಹೆಗಡಿಹಳ್ಳಿ ವಿಶ್ವನಾಥ್, ಮಾಜಿ ಅಧ್ಯಕ್ಷರಾದ ದುಂಡಾ ರೇಣುಕಯ್ಯ, ತಾಲೂಕು ಮಹಿಳಾ ಘಟಕದ ಅಧ್ಯಕ್ಷೆ ಚೂಡಾರತ್ನ, ಮುಖಂಡರಾದ ವೀರೇಂದ್ರ ಪಾಟೀಲ್, ವಿ.ಬಿ. ಸುರೇಶ್, ಶಂಕರಣ್ಣ, ಗಣೇಶ್, ನಾಗೇಶ್ ಹಾಗೂ ಪ.ಪಂ. ಉಪಾಧ್ಯಕ್ಷೆ ಶೀಲಾ ಶಿವಪ್ಪನಾಯಕ, ಸದಸ್ಯೆ ಆಶಾ ರಾಜಶೇಖರ್ ಸೇರಿದಂತೆ ತಾಲೂಕಿನ ವಿವಿಧ ಹೋಬಳಿಯ ಬಿಜೆಪಿ ಪಕ್ಷದ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.
ವರದಿ: ಸಚಿನ್ ಮಾಯಸಂದ್ರ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5