ಚಿತ್ರದುರ್ಗ: ಲಿಂಗಾಯತ ಧರ್ಮ ಸ್ವತಂತ್ರ ಧರ್ಮ, ಅದು ಹಿಂದೂ ಧರ್ಮದ ಭಾಗವಲ್ಲ ಎಂದು ಸಾಣೇಹಳ್ಳಿ ತರಳಬಾಳು ಶಾಖಾಮಠದ ಡಾ.ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹೇಳಿಕೆ ನೀಡಿದ್ದಾರೆ.
ಹೊಳಲ್ಕೆರೆಯಲ್ಲಿ ನಡೆದ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ 30ನೇ ಸ್ಮರಣಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹಿಂದೂ ಧರ್ಮದ ಭಾಗ ಲಿಂಗಾಯತ ಧರ್ಮ ಎನ್ನುವುದು ಸರಿಯಲ್ಲ ಎಂದರು
ಹಿಂದೂ ಧರ್ಮದಲ್ಲಿರುವ ವೇದ, ಪುರಾಣಗಳು, ಶಾಸ್ತ್ರಗಳು, ಲಿಂಗಾಯತ ಧರ್ಮದ ಮೂಲಗಳಲ್ಲ ಎಂದಿರುವ ಅವರು, ಹಿಂದೂ ಎನ್ನುವುದು ಅನೈತಿಕ, ಅನಾಚಾರಗಳಿಂದ ಒಳಗೊಂಡಿದೆ. ಇಂಥ ಧರ್ಮವನ್ನು ಶರಣರು ನಿರಾಕರಿಸಿ ಜಾತ್ಯತೀತ ತತ್ವಗಳನ್ನು ಒಳಗೊಂಡ ಲಿಂಗಾಯತ ಧರ್ಮವನ್ನು ಒಪ್ಪಿಕೊಂಡಿದ್ದಾರೆ. ವಚನಗಳಲ್ಲಿ ಲಿಂಗಾಯತ ಧರ್ಮದ ಸಾರವನ್ನು ನಾಡಿಗೆ ಬಿತ್ತರಿಸಿ ಸಾಕ್ಷಾತ್ಕರಿಸಿದ್ದಾರೆ. ಹಾಗಾಗಿ ಯಾವತ್ತೂ ಲಿಂಗಾಯತ ಧರ್ಮ ಸ್ವತಂತ್ರ ಧರ್ಮವೇ ಹೊರತು ಹಿಂದೂ ಧರ್ಮಕ್ಕೆ ಸಂಬಂಧಿಸಿಲ್ಲ ಎಂದು ಅವರು ಹೇಳಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


