nammatumakuru

    Subscribe to Updates

    Get the latest creative news from FooBar about art, design and business.

    What's Hot

    ತಂದೆ–ತಾಯಿ ಜಗಳ ಬಿಡಿಸಲು ಹೋದ 16 ವರ್ಷದ ಮಗನನ್ನೇ ಬರ್ಬರವಾಗಿ ಕೊಂದ ಪಾಪಿ ತಂದೆ!

    November 16, 2026

    ವಾಹನ ಸವಾರರೇ ಎಚ್ಚರ! | ಹಾಫ್ ಹೆಲ್ಮೆಟ್ ನಿಷೇಧ,  ಫುಟ್‌ ಪಾತ್ ಮೇಲೆ ವಾಹನ ಓಡಿಸಿದ್ರೆ ಬೀಳಲಿದೆ ಭಾರಿ ದಂಡ!

    November 16, 2026

    ಮಹಿಳೆ ನದಿಗೆ ಹಾರಿ ಆತ್ಮಹತ್ಯೆ, ಶವ ತೆಗೆಯಲು ಹೋದ ವ್ಯಕ್ತಿಯೂ ನೀರುಪಾಲು

    November 16, 2026
    Facebook Twitter Instagram
    ಟ್ರೆಂಡಿಂಗ್
    • ತಂದೆ–ತಾಯಿ ಜಗಳ ಬಿಡಿಸಲು ಹೋದ 16 ವರ್ಷದ ಮಗನನ್ನೇ ಬರ್ಬರವಾಗಿ ಕೊಂದ ಪಾಪಿ ತಂದೆ!
    • ವಾಹನ ಸವಾರರೇ ಎಚ್ಚರ! | ಹಾಫ್ ಹೆಲ್ಮೆಟ್ ನಿಷೇಧ,  ಫುಟ್‌ ಪಾತ್ ಮೇಲೆ ವಾಹನ ಓಡಿಸಿದ್ರೆ ಬೀಳಲಿದೆ ಭಾರಿ ದಂಡ!
    • ಮಹಿಳೆ ನದಿಗೆ ಹಾರಿ ಆತ್ಮಹತ್ಯೆ, ಶವ ತೆಗೆಯಲು ಹೋದ ವ್ಯಕ್ತಿಯೂ ನೀರುಪಾಲು
    • ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಆಗ್ರಹ: ನಾಳೆ (ನ.17) ಔರಾದ್ ಪಟ್ಟಣ ಬಂದ್ ಗೆ ಕರೆ
    • ಐಐಟಿಎಫ್ 2026ರಲ್ಲಿ EPFO ಲಾಂಜ್ ಮತ್ತು ESIC ಪೆವಿಲಿಯನ್ ಉದ್ಘಾಟಿಸಿದ ಕೇಂದ್ರ ಸಚಿವ ಡಾ. ಮನ್ಸುಖ್ ಮಾಂಡವೀಯ
    • ರಾಷ್ಟ್ರಮಟ್ಟದ ರೈಫಲ್ ಶೂಟಿಂಗ್‌ ಗೆ ಆಯ್ಕೆಯಾದ ತುಮಕೂರಿನ ಯುವ ಕ್ರೀಡಾಪಟುಗಳಿಗೆ ಡಾ. ಜಿ. ಪರಮೇಶ್ವರ್ ಅಭಿನಂದನೆ
    • ಸಂಘಟನಾತ್ಮಕ ಚಟುವಟಿಕೆಗಳಿಗೆ ವೇಗ: ತುಮಕೂರು–ಚಿತ್ರದುರ್ಗ ಬಿಜೆಪಿ ಸಭೆ
    • ಕನಸುಗಳ ಹಿಂದಿನ ರಹಸ್ಯವೇನು? ಸ್ವಪ್ನ ಶಾಸ್ತ್ರದ ಪ್ರಕಾರ ಈ 7 ಕನಸುಗಳು ನೀಡುತ್ತವೆ ವಿಶೇಷ ಸೂಚನೆ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಲಯನ್ಸ್ ಶಾಲೆ  ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿದೆ: ಲಯನ್ಸ್  ಜಯಕುಮಾರ್
    ಜಿಲ್ಲಾ ಸುದ್ದಿ December 10, 2025

    ಲಯನ್ಸ್ ಶಾಲೆ  ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿದೆ: ಲಯನ್ಸ್  ಜಯಕುಮಾರ್

    By adminDecember 10, 2025No Comments2 Mins Read
    lions

    ಸರಗೂರು: ಶಾಲೆಯು ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿದೆ, ಇಲ್ಲಿನ ವಿದ್ಯಾರ್ಥಿಗಳು ದೇಶವಿದೇಶಗಳಲ್ಲಿ ಉನ್ನತ ಹುದ್ದೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ ಎಂದು ಜಿಲ್ಲಾ ಜಿಎಂಟಿ ಸಂಯೋಜಕ ಲಯನ್ಸ್ ಜಯಕುಮಾರ್ ತಿಳಿಸಿದರು.

    ಪಟ್ಟಣದ ಲಯನ್ಸ್ ಅಕಾಡೆಮಿ ಶಾಲೆಯಲ್ಲಿ ಇತ್ತೀಚೆಗೆ ನಡೆದ 36ನೇ ವಾರ್ಷಿಕೋತ್ಸವದ ಪ್ರಯುಕ್ತ ಸಾಂಸ್ಕೃತಿಕ ಸೌರಭ 36 ರ ಸಮಾರಂಭವನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.

    ಲಯನ್ಸ್ ಸಂಸ್ಥೆಯ ರೀತಿ ಹಲವು ಸಾಮಾಜಿಕ ಸೇವೆಯನ್ನು ಸಲ್ಲಿಸುತ್ತಿದ್ದಾರೆ. ಈ ಶಾಲೆಯು ಕೇವಲ ಶೈಕ್ಷಣಿಕ ಸೇವೆಯನ್ನು ಅಷ್ಟೇ ಅಲ್ಲದೆ, ಸಂಸ್ಕೃತಿ ಮತ್ತು ಸಂಸ್ಕಾರವನ್ನು ಉಳಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿರುವುದು ಶ್ಲಾಘನೀಯ ಎಂದು ಅಭಿಪ್ರಾಯ ಪಟ್ಟರಲ್ಲದೇ, ನಾನೂ ಸಹ ಶಾಲೆಯ ನೂತನ ಕಟ್ಟಡಕ್ಕೆ 50 ಸಾವಿರ ರೂಪಾಯಿಗಳನ್ನು ದೇಣಿಗೆಯಾಗಿ ನೀಡುತ್ತೇನೆ  ಎಂದು ಭರವಸೆ ನೀಡಿದರು.

    ಲಯನ್ಸ್ ಅಕಾಡೆಮಿ ಶಾಲೆಯ ಕಾರ್ಯದರ್ಶಿ ಲಯನ್ ಎಸ್.ಎಸ್.ಪ್ರಭುಸ್ವಾಮಿ ಪ್ರಾಸ್ತವಿಕ ನುಡಿ ನುಡಿದು, ನಮ್ಮ ಶಾಲೆಯು ತಾಲೂಕಿನಲ್ಲಿಯೇ ಉತ್ತಮ ಆಂಗ್ಲ ಮಾಧ್ಯಮದ ಪ್ರಥಮ ಶಾಲೆಯಾಗಿ ಜನ್ಮ ತಾಳಿತು. ಕಳೆದ 36 ವರ್ಷಗಳಿಂದ ನಮ್ಮ ಲಯನ್ಸ್ ಸಂಸ್ಥೆಯು ಸಮಾಜಕ್ಕೆ ತನ್ನದೇ ಆದ ರೀತಿಯಲ್ಲಿ ಶೈಕ್ಷಣಿಕ ಸೇವೆ ಅಲ್ಲದೆ ಆರೋಗ್ಯ ಸೇವೆಯನ್ನು ಕೂಡ ನೀಡುತ್ತಿದೆ ಎಂದರು.

    ನಮ್ಮ ಶಾಲೆಯು ಯಾವುದೇ ಪ್ರತಿಫಲಾಪೇಕ್ಷೆಯಿಲ್ಲದೆ ಕಡಿಮೆ ಶುಲ್ಕದ  ಶಿಕ್ಷಣ ನೀಡುತ್ತಿದ್ದೇವೆ. ಇದನ್ನು ಅರಿತು ನಮ್ಮ ತಾಲೂಕಿನ ಜನಪ್ರಿಯ ಶಾಸಕ ಅನಿಲ್ ಚಿಕ್ಕಮಾದುರವರು 10 ಲಕ್ಷ ರೂಪಾಯಿಗಳನ್ನು ಅನುದಾನವಾಗಿ ನೀಡಿ ಶಾಲೆಯ ಅಭಿವೃದ್ಧಿಗೆ ಕೈಜೋಡಿಸಿದ್ದಾರೆ, ಇವರಿಗೆ ನಮ್ಮ ಶಾಲೆಯ ವತಿಯಿಂದ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ ಎಂದು ಸ್ಮರಿಸಿದರು.

    ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಲಯನ್ಸ್ ಕ್ಲಬ್ ಅಫ್ ಸಂತೇ ಸರಗೂರು ಅಧ್ಯಕ್ಷ ಲಯನ್ ಎಸ್.ಬಿ.ನಾಗರಾಜು ವಹಿಸಿ ಮಾತನಾಡಿ, ನಮ್ಮ ಶಾಲೆಯು ಉತ್ತಮ ಮತ್ತು ಗುಣಮಟ್ಟದ ಶಿಕ್ಷಣವನ್ನು ನೀಡಿ ಸಮಾಜಕ್ಕೆ ಮಾದರಿಯಾಗಿದೆ ಇಂತಹ ಶಾಲೆಗೆ ತನು ಮನ ಧನ ವನ್ನು ಅರ್ಪಿಸಿ ದುಡಿಯುತ್ತಿರುವ ಬ್ರಹ್ಮದೇವಯ್ಯರವರಿಗೆ ಅಭಿನಂಧನೆಗಳನ್ನು ಸಲ್ಲಿಸುತ್ತೇನೆ ಎಂದು ಹೇಳಿದರು.

    ಇದೇ ಸಂದರ್ಭದಲ್ಲಿ ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯರಾದ ಕುಸುಮಾ ವಿಜಯಕುಮಾರ್, ಪಿಎಸ್ಟಿ ಪೋರಮ್ ಅಧ್ಯಕ್ಷ ಲಯನ್ ಸಿದ್ದೇಗೌಡ ಮಾತನಾಡಿ ನೂತನವಾಗಿ ಕಟ್ಟುವ ಶಾಲಾ ಕಟ್ಟಡಕ್ಕೆ 25 ಸಾವಿರ ರೂಪಾಯಿಗಳನ್ನು ನೀಡುತ್ತೇನೆ ಎಂದರು .

    ಡಿಸಿಎಸ್ ಲಯನ್ ಟಿ.ಹೆಚ್.ವೆಂಕಟೇಶ್ ಶಾಲಾ ಪೋಷಕ ಸಮಿತಿಯ ಅಧ್ಯಕ್ಷ ಶ್ರೀನಿವಾಸ್ ಉದ್ಯಮಿ ರವಿ ಸಹಾಯಧನವನ್ನು ನೀಡುತ್ತವೆ ಎಂದು ಭರವಸೆ ನೀಡಿ ಮಾತನಾಡಿದರು.

    ಇದೆ ವೇದಿಕೆಯಲ್ಲಿ ಸರಗೂರು ತಾಲ್ಲೂಕಿಗೆ 24–25 ನೇ ಸಾಲಿನಲ್ಲಿ ಅತಿ ಹೆಚ್ಚು ಅಂಕ ಪಡೆದ ನಮ್ಮದೇ ಶಾಲೆಯ ನಾಲ್ಕು ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಸಾಂಸ್ಕೃತಿಕ ಕಾರ್ಯಕ್ರಮ ವಿಜೃಂಭಣೆಯಿಂದ ನಡೆಯಿತು.

    ಈ ಕಾರ್ಯಕ್ರಮದಲ್ಲಿ  ಪಟ್ಟಣ ಪಂಚಾಯಿತಿ ಅಧ್ಯಕ್ಷ ಚೈತ್ರ ಸ್ವಾಮಿ, ಲಯನ್ ವಾಸುಕಿ, ಲಯನ್ ಶಶಿಕುಮಾರ್, ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ವೀರೇಶ್, ಮ್ಯಾನೇಜಿಂಗ್ ಟ್ರಸ್ಟಿ ಬ್ರಹ್ಮದೇವಯ್ಯ, ಪಟ್ಟಣ ಪಂಚಾಯಿತಿ ಸದಸ್ಯರಾದ ವಿನಾಯಕ ಪ್ರಸಾದ್,  ಲಯನ್ಸ್ ಅಕಾಡೆಮಿ ಶಾಲೆಯ ಖಜಾಂಚಿ ಲಯನ್ ಎಸ್‌ ವಿ ಯೋಗೀಶ್, ಮಾಜಿ ಅಧ್ಯಕ್ಷರುಗಳಾದ ಲಯನ್ ಎಸ್ ಎಸ್ ಸೋಮ ಪ್ರಭ, ಲಯನ್ ಎಸ್ ನಾರಾಯಣ, ಲಯನ್ ಎಸ್.ಎನ್.ಮೋಹನ್ ಕುಮಾರ್, ಲಯನ್ ಕೆ.ಸುರೇಶ್ ಜೈನ್, ಶಾಲೆಯ ಪ್ರಾಂಶುಪಾಲ ಬಿ.ಡಿ.ದಾಸಾಚಾರಿ, ಮುಖ್ಯ ಶಿಕ್ಷಕಿ ಪದ್ಮಶ್ರೀ ಶಾಲಾ ಮಂತ್ರಿಮಂಡಳದ ಮುಖ್ಯಮಂತ್ರಿ ಎನ್. ಚಿರಾಗ್, ಪೋಷಕ ಸಮಿತಿಯ ಸರ್ವ ಸದಸ್ಯರು, ಪೋಷಕರು ಹಾಗೂ ವಿದ್ಯಾರ್ಥಿಗಳು ಇನ್ನಿತರರು ಭಾಗವಹಿಸಿದ್ದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಮಹಿಳೆ ನದಿಗೆ ಹಾರಿ ಆತ್ಮಹತ್ಯೆ, ಶವ ತೆಗೆಯಲು ಹೋದ ವ್ಯಕ್ತಿಯೂ ನೀರುಪಾಲು

    November 16, 2026

    ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಆಗ್ರಹ: ನಾಳೆ (ನ.17) ಔರಾದ್ ಪಟ್ಟಣ ಬಂದ್ ಗೆ ಕರೆ

    November 16, 2026

    ಸಂಘಟನಾತ್ಮಕ ಚಟುವಟಿಕೆಗಳಿಗೆ ವೇಗ: ತುಮಕೂರು–ಚಿತ್ರದುರ್ಗ ಬಿಜೆಪಿ ಸಭೆ

    November 16, 2026

    Leave A Reply Cancel Reply

    Our Picks

    ಐಐಟಿಎಫ್ 2026ರಲ್ಲಿ EPFO ಲಾಂಜ್ ಮತ್ತು ESIC ಪೆವಿಲಿಯನ್ ಉದ್ಘಾಟಿಸಿದ ಕೇಂದ್ರ ಸಚಿವ ಡಾ. ಮನ್ಸುಖ್ ಮಾಂಡವೀಯ

    November 16, 2026

    ರಾಮಾಯಣದ ಪುಷ್ಪಕ ವಿಮಾನವನ್ನು ನಿರ್ಮಿಸಿದ್ದು ಯಾರು? ರಾವಣನ ಕೈಗೆ ಸಿಕ್ಕಿದ್ದು ಹೇಗೆ? ಪುರಾಣ ಮತ್ತು ವಿಜ್ಞಾನ ಹೇಳುವುದೇನು?

    November 15, 2026

    ಟ್ರಕ್ ಗೆ ಡಿಕ್ಕಿ ಹೊಡೆದ ಮಿನಿಬಸ್: 23 ಮಂದಿಯ ದಾರುಣ ಸಾವು, ಅತೀ ವೇಗವೇ ಅಪಘಾತಕ್ಕೆ ಕಾರಣವಾಯ್ತೇ?

    November 13, 2026

    ಯೋಗವು ರೋಗಮುಕ್ತಿ ಮಾತ್ರವಲ್ಲ, ಭೋಗಮುಕ್ತಿಯನ್ನೂ ನೀಡುತ್ತದೆ; ಪ್ರತಿಯೊಬ್ಬರಿಗೂ ಆಯುರ್ವೇದ ತಲುಪಿಸುವುದೇ ಸರ್ಕಾರದ ಗುರಿ: ಪ್ರಧಾನಿ ಮೋದಿ

    November 13, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತಂದೆ–ತಾಯಿ ಜಗಳ ಬಿಡಿಸಲು ಹೋದ 16 ವರ್ಷದ ಮಗನನ್ನೇ ಬರ್ಬರವಾಗಿ ಕೊಂದ ಪಾಪಿ ತಂದೆ!

    November 16, 2026

    ತುಮಕೂರು: ಪತಿ–ಪತ್ನಿಯ ನಡುವಿನ ಜಗಳ ಬಿಡಿಸಲು ಮಧ್ಯಪ್ರವೇಶಿಸಿದ 16 ವರ್ಷದ ಮಗನನ್ನೇ ತಂದೆಯೊಬ್ಬ ಹಾರೆಕೋಲಿನಿಂದ ಹೊಡೆದು ಬರ್ಬರವಾಗಿ ಕೊಲೆ ಮಾಡಿರುವ…

    ವಾಹನ ಸವಾರರೇ ಎಚ್ಚರ! | ಹಾಫ್ ಹೆಲ್ಮೆಟ್ ನಿಷೇಧ,  ಫುಟ್‌ ಪಾತ್ ಮೇಲೆ ವಾಹನ ಓಡಿಸಿದ್ರೆ ಬೀಳಲಿದೆ ಭಾರಿ ದಂಡ!

    November 16, 2026

    ಮಹಿಳೆ ನದಿಗೆ ಹಾರಿ ಆತ್ಮಹತ್ಯೆ, ಶವ ತೆಗೆಯಲು ಹೋದ ವ್ಯಕ್ತಿಯೂ ನೀರುಪಾಲು

    November 16, 2026

    ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಆಗ್ರಹ: ನಾಳೆ (ನ.17) ಔರಾದ್ ಪಟ್ಟಣ ಬಂದ್ ಗೆ ಕರೆ

    November 16, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.