ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ಲೇಬಲ್ ಅಂಟಿಸಿರುವ ಮದ್ಯದ ಪೌಚುಗಳು ಪತ್ತೆಯಾಗಿದೆ. ಕರ್ನಾಟಕದ 14 ಲೋಕಸಭೆ ಕ್ಷೇತ್ರಗಳಿಗೆ ಮೊದಲ ಹಂತದ ಮತದಾನ ಇಂದು ನಡೆಯಲಿದೆ.
ಚಾಮರಾಜನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ಲೇಬಲ್ ಅಂಟಿಸಿರುವ ಮದ್ಯದ ಪೌಚುಗಳ ಹಂಚಿಕೆ ಮಾಡಲಾಗಿದ್ದು, ಇದೀಗ ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿವೆ.
ಸುನೀಲ್ ಬೋಸ್, ಕ್ರಮ ಸಂಖ್ಯೆ 3 ಎಂಬ ಲೇಬಲ್ ಇರುವ ಮದ್ಯದ ಪೌಚುಗಳನ್ನು ಹಂಚಿಕೆ ಮಾಡುತ್ತಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ. ಆದರೆ ಈ ಘಟನೆ ನಡೆದ ಸ್ಥಳದ ಬಗ್ಗೆ ನಿಖರತೆ ಇಲ್ಲ ಮತ್ತು ಹಂಚಿರುವ ವ್ಯಕ್ತಿಗಳ ಬಗ್ಗೆ ಮಾಹಿತಿ ತಿಳಿದುಬಂದಿಲ್ಲ. ಮತದಾನದ ಹಿನ್ನೆಲೆಯಲ್ಲಿ ಏ.24 ರಿಂದ ಏ.26 ರ ಮಧ್ಯರಾತ್ರಿವರೆಗೆ ಕಮಿಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಕಮಿಷನರ್ ಆದೇಶ ಹೊರಡಿಸಿದ್ದಾರೆ.
ಹೀಗಾಗಿ, ಯಾವುದೇ ಸಭೆ, ಸಮಾರಂಭ ನಡೆಸುವಂತಿಲ್ಲ. ರಾಜಕೀಯ ಗುಂಪುಗಳು ಸೇರುವಂತಿಲ್ಲ. ಅಲ್ಲದೆ, ಶುಕ್ರವಾರ(ಎ.25 ದಿಂದ ಮತದಾನ ಮುಕ್ತಾಯವಾಗುವ ತನಕ ಮದ್ಯ ಮಾರಾಟ ನಿರ್ಬಂಧಿಸಲಾಗಿದೆ. ಬಾರ್ ಆ್ಯಂಡ್ ರೆಸ್ಟೋರೆಂಟ್, ಚಿಲ್ಲರೆ ಅಂಗಡಿಗಳಲ್ಲಿ ಮದ್ಯ ಮಾರುವಂತಿಲ್ಲ. ಪೊಲೀಸರ ಕಣ್ತಪ್ಪಿಸಿ ಮದ್ಯ ಮಾರಾಟ ಮಾಡುವವರ ವಿರುದ್ಧ ಹೆಚ್ಚಿನ ನಿಗಾ ಇಡಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA