ನವದೆಹಲಿ: ಮದ್ಯನೀತಿ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಬಿಆರ್ ಎಸ್ ನಾಯಕಿ ಕೆ ಕವಿತಾ ಸಾಕ್ಷಿಗಳ ಮೇಲೆ ಪ್ರಭಾವ ಬೀರಲು ಮತ್ತು ಸಾಕ್ಷ್ಯವನ್ನು ಹಾಳು ಮಾಡಲು ಪ್ರಯತ್ನಿಸಬಹುದು ಎನ್ನುವ ಕಾರಣಕ್ಕೆ ಅವರಿಗೆ ಮಧ್ಯಂತರ ಜಾಮೀನು ನೀಡಲು ಕೋರ್ಟ್ ನಿರಾಕರಿಸಿದೆ.
ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ಭಾರತ ರಾಷ್ಟ್ರೀಯ ಸಮಿತಿ ನಾಯಕಿ ಹಾಗೂ ಕೆಸಿಆರ್ ಪುತ್ರಿ ಕೆ ಕವಿತಾ ನ್ಯಾಯಾಂಗ ಬಂಧನವನ್ನು ಏ.23 ರವರೆಗೆ ವಿಸ್ತರಿಸಲಾಗಿದೆ.
ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯ ಬುಧವಾರ ಆದೇಶ ಹೊರಡಿಸಿದ್ದು, ಏ.23 ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ. ಮಾರ್ಚ್ 15, 2024 ರಂದು ಜಾರಿ ನಿರ್ದೇಶನಾಲಯವು ಅವರನ್ನು ಬಂಧಿಸಿತ್ತು.
ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ನ್ಯಾಯಾಂಗ ಬಂಧನ ಅವಧಿ ಮುಗಿದ ನಂತರ ಕವಿತಾ ಅವರನ್ನು ತಿಹಾರ್ ಜೈಲಿನಿಂದ ಕೋರ್ಟ್ ಗೆ ಕರೆತರಲಾಯಿತು. ಇಡಿ ನ್ಯಾಯಾಂಗ ಬಂಧನವನ್ನು 14 ದಿನಗಳ ಕಾಲ ವಿಸ್ತರಿಸುವಂತೆ ಕೋರಿ ಅರ್ಜಿ ಸಲ್ಲಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296