ತುಮಕೂರು: ಜಿಲ್ಲೆಯಲ್ಲಿ 2025-26ನೇ ಸಾಲಿನ ಪೂರ್ವ–ಮುಂಗಾರು ಹಂಗಾಮಿನಲ್ಲಿ ಪ್ರಕೃತಿ ವಿಕೋಪಗಳಾದ ಪ್ರವಾಹ, ಅತಿವೃಷ್ಟಿಯಿಂದ ಉಂಟಾದ ಬೆಳೆ ಹಾನಿ ಪರಿಹಾರ ಪಾವತಿಗೆ ಸಂಬಂಧಿಸಿದಂತೆ ಬೆಳೆ ಹಾನಿಯಾದ ರೈತರ ಪಟ್ಟಿಯನ್ನು ಜಿಲ್ಲಾಧಿಕಾರಿ/ ಉಪವಿಭಾಗಾಧಿಕಾರಿ/ ತಹಶೀಲ್ದಾರ್/ಗ್ರಾಮ ಪಂಚಾಯತಿ/ ರೈತ ಸಂಪರ್ಕ ಕೇಂದ್ರಗಳಲ್ಲಿ ಏಪ್ರಿಲ್ 24ರಂದು ಪ್ರಕಟಿಸಲಾಗಿದೆ.
ಈ ಪಟ್ಟಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳಿದ್ದಲ್ಲಿ ಆಯಾ ತಾಲ್ಲೂಕು ತಹಶೀಲ್ದಾರ್/ ಕೃಷಿ/ತೋಟಗಾರಿಕೆ ಇಲಾಖೆಗಳ ತಾಲ್ಲೂಕು ಕಚೇರಿಗಳಿಗೆ 7 ದಿನಗಳೊಳಗಾಗಿ ಸಲ್ಲಿಸಬೇಕೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ ಶುಭ ಕಲ್ಯಾಣ್ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW