ಬೆಂಗಳೂರು: ಬುದ್ಧ ಪೂರ್ಣಿಮೆ ದಿನದ ಹಿನ್ನೆಲೆ ಎರಡು ನಗರಗಳ ಪಾಲಿಕೆ ವ್ಯಾಪ್ತಿಯಲ್ಲಿರುವ ಎಲ್ಲ ಮಾಂಸದಂಗಡಿಗಳನ್ನು ಮೇ 23ರಂದು ಮುಚ್ಚುವಂತೆ ಆದೇಶಿಸಲಾಗಿದೆ. ಕುರಿ, ಮೇಕೆ, ಕೋಳಿ, ಹಂದಿ ಮಾಂಸ ಮತ್ತು ಮೀನು ವ್ಯಾಪಾರವನ್ನು ಮೈಸೂರು ನಗರದಲ್ಲಿ ಕಡ್ಡಾಯವಾಗಿ ನಿಷೇಧಿಸಲಾಗಿರುತ್ತದೆ ಎಂದು ಮೈಸೂರು ಮಹಾನಗರ ಪಾಲಿಕೆಯ ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ.
ಇನ್ನು ಬಿಬಿಎಂಪಿ ವ್ಯಾಪ್ತಿಯಲ್ಲಿ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣ ನಿಷೇಧಿಸಲಾಗಿದೆ. ಜೊತೆಗೆ ಕಸಾಯಿಖಾನೆಯಲ್ಲಿ ಪ್ರಾಣಿವಧೆಗೂ ನಿಷೇಧ ವಿಧಿಸಿ ಬಿಬಿಎಂಪಿಯ ಪಶುಪಾಲನೆ ಇಲಾಖೆಯ ಜಂಟಿ ನಿರ್ದೇಶಕರು ಆದೇಶಿಸಿದ್ದಾರೆ. ಮೇ 23ರಂದು ಬುದ್ಧ ಪೂರ್ಣಿಮೆ ದಿನ ಬೆಂಗಳೂರು ಹಾಗೂ ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮಾಂಸ ಮಾರಾಟ ಹಾಗೂ ಪ್ರಾಣಿ ವಧೆಯನ್ನು ನಿಷೇಧಿಸಿ ಆದೇಶವಿತ್ತಿದೆ. ಈ ದಿನ ಯಾವುದೇ ಕಾರಣಕ್ಕೂ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ಮಾಡದಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಹಾಗೂ ಮೈಸೂರು ವ್ಯಾಪ್ತಿಯಲ್ಲಿ ಮಹಾನಗರ ಪಾಲಿಕೆಯು ಆದೇಶವಿತ್ತಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


