nammatumakuru

    Subscribe to Updates

    Get the latest creative news from FooBar about art, design and business.

    What's Hot

    36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!

    August 8, 2026

    ಸರಗೂರು: ಮಾದರ ಮಹಾಸಭೆಯ ಉದ್ಘಾಟನೆ –ಪ್ರತಿಭಾ ಪುರಸ್ಕಾರ:  ಒಳಮೀಸಲಾತಿ ಜಾರಿಗೆ ಕೆ.ಎಚ್. ಮುನಿಯಪ್ಪ ಪ್ರತಿಪಾದನೆ

    August 8, 2026

    ಹಳ್ಳಿಯ ವಿದ್ಯಾರ್ಥಿಗಳು ಉನ್ನತ ಹುದ್ದೆಗೇರುವುದೇ ಎಂ.ಎಸ್.ಎ. ಟ್ರಸ್ಟ್‌ನ ಮುಖ್ಯ ಉದ್ದೇಶ: ಶಿವರಾಮ ಶೆಟ್ಟಿ

    August 8, 2026
    Facebook Twitter Instagram
    ಟ್ರೆಂಡಿಂಗ್
    • 36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!
    • ಸರಗೂರು: ಮಾದರ ಮಹಾಸಭೆಯ ಉದ್ಘಾಟನೆ –ಪ್ರತಿಭಾ ಪುರಸ್ಕಾರ:  ಒಳಮೀಸಲಾತಿ ಜಾರಿಗೆ ಕೆ.ಎಚ್. ಮುನಿಯಪ್ಪ ಪ್ರತಿಪಾದನೆ
    • ಹಳ್ಳಿಯ ವಿದ್ಯಾರ್ಥಿಗಳು ಉನ್ನತ ಹುದ್ದೆಗೇರುವುದೇ ಎಂ.ಎಸ್.ಎ. ಟ್ರಸ್ಟ್‌ನ ಮುಖ್ಯ ಉದ್ದೇಶ: ಶಿವರಾಮ ಶೆಟ್ಟಿ
    • ರಾಹುಲ್ ಗಾಂಧಿ ಪ್ರಧಾನಿಯಾಗಲಿ:  ಕಾಟೂರಿ ವೆಂಕಟೇಶ್ವರಲು ಪಾದಯಾತ್ರೆ
    • ಆಗಸ್ಟ್ 9ರಂದು ತಿಪಟೂರಿನಲ್ಲಿ ಪ್ರಥಮ ಬಾರಿಗೆ ರಾಜ್ಯಮಟ್ಟದ ಯೋಗ ಚಾಂಪಿಯನ್ಷಿಪ್ ಸ್ಪರ್ಧೆ
    • ಆ.10ರಂದು ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮ
    • ಶಿಕ್ಷಣ ನಿಮ್ಮ ಬದುಕಿಗೆ ಭದ್ರ ಬುನಾದಿ: ಶ್ರೀ ಸಿದ್ಧಲಿಂಗ ಮಹಾಸ್ವಾಮಿ
    • ಹೂ ಲೋಕ,  ಭೂರಮೆಯ  ರಥ :  ಪ್ರಕೃತಿ ಮಡಿಲಲ್ಲಿ ಚೆಲುವಿನ ರಥಯಾತ್ರೆ  ವಾಹ್..!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ದೇವಾಲಯದಲ್ಲಿ ಅಕ್ಷರಾಭ್ಯಾಸ ಮಕ್ಕಳ ಜೀವನದ ಶ್ರೇಷ್ಠ ಆರಂಭ: ಡಾ.ಹನುಮಂತನಾಥ ಸ್ವಾಮೀಜಿ
    ಕೊರಟಗೆರೆ July 15, 2026

    ದೇವಾಲಯದಲ್ಲಿ ಅಕ್ಷರಾಭ್ಯಾಸ ಮಕ್ಕಳ ಜೀವನದ ಶ್ರೇಷ್ಠ ಆರಂಭ: ಡಾ.ಹನುಮಂತನಾಥ ಸ್ವಾಮೀಜಿ

    By adminJuly 15, 2026No Comments2 Mins Read
    hanumanta natha swamiji

    ಕೊರಟಗೆರೆ: “ಭಾರತೀಯ ಸಂಸ್ಕೃತಿಯಲ್ಲಿ ಪುಟ್ಟ ಮಕ್ಕಳಿಗೆ ಅಕ್ಷರಾಭ್ಯಾಸ ಮಾಡಿಸುವುದು ಕೇವಲ ಶಿಕ್ಷಣದ ಆರಂಭವಲ್ಲ, ಅದು ಜ್ಞಾನ, ಸಂಸ್ಕಾರ ಮತ್ತು ಸತ್ಪ್ರವೃತ್ತಿಯ ಬದುಕಿನತ್ತ ಇಡುವ ಮೊದಲ ಹೆಜ್ಜೆಯಾಗಿದೆ. ಅದರಲ್ಲೂ ದೇವಾಲಯದ ಪವಿತ್ರ ವಾತಾವರಣದಲ್ಲಿ ಗುರುಗಳ ಸಮ್ಮುಖದಲ್ಲಿ ಅಕ್ಷರಾಭ್ಯಾಸ ಮಾಡಿಸುವುದು ಮಕ್ಕಳ ಭವಿಷ್ಯಕ್ಕೆ ಅತ್ಯಂತ ಶುಭಾರಂಭವನ್ನು ನೀಡುತ್ತದೆ,” ಎಂದು ಎಲೆರಾಂಪುರ ಕುಂಚಿಟಿಗ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಡಾ.ಹನುಮಂತನಾಥ ಸ್ವಾಮೀಜಿ ಹೇಳಿದರು.

    ತಾಲೂಕಿನ ಎಲೆರಾಂಪುರ ಕುಂಚಿಟಿಗ ಮಹಾಸಂಸ್ಥಾನ ಮಠದ ಆವರಣದಲ್ಲಿರುವ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನದಲ್ಲಿ ಬುಧವಾರದಂದು ಕೊರಟಗೆರೆ ಪಟ್ಟಣದ ಕನ್ನಿಕಾ ವಿದ್ಯಾಪೀಠ ಶಾಲೆಯ ಪೂರ್ವಪ್ರಾಥಮಿಕ ವಿಭಾಗದ ಪುಟಾಣಿ ಮಕ್ಕಳಿಗಾಗಿ ಆಯೋಜಿಸಿದ್ದ ವಿಶೇಷ ಅಕ್ಷರಾಭ್ಯಾಸ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು.

    “ಮಕ್ಕಳ ಶಿಕ್ಷಣವು ಉತ್ತಮ ಸಂಸ್ಕಾರ, ನೈತಿಕ ಮೌಲ್ಯಗಳು ಹಾಗೂ ಭಾರತೀಯ ಪರಂಪರೆಯೊಂದಿಗೆ ಆರಂಭವಾದಾಗ ಮಾತ್ರ ಅವರ ವ್ಯಕ್ತಿತ್ವವು ಸದೃಢವಾಗಿ ರೂಪುಗೊಳ್ಳಲು ಸಾಧ್ಯ. ಅಕ್ಷರಾಭ್ಯಾಸವು ಮಗುವಿನ ಜೀವನದ ಮಹತ್ವದ ಸಂಸ್ಕಾರಗಳಲ್ಲಿ ಒಂದಾಗಿದ್ದು, ದೇವರ ಸನ್ನಿಧಿಯಲ್ಲಿ ‘ಓಂ’, ‘ಶ್ರೀ’ ಮತ್ತು ಮೊದಲ ಅಕ್ಷರಗಳನ್ನು ಬರೆಯುವ ಮೂಲಕ ಜ್ಞಾನಾರ್ಜನೆಯ ಪವಿತ್ರ ಪಯಣ ಆರಂಭವಾಗುತ್ತದೆ,” ಎಂದು ಶ್ರೀಗಳು ತಿಳಿಸಿದರು.

    ಇದೇ ವೇಳೆ ಪೋಷಕರಿಗೆ ಕಿವಿಮಾತು ಹೇಳಿದ ಅವರು, “ಇಂದಿನ ಆಧುನಿಕ ಶಿಕ್ಷಣದ ಜೊತೆಗೆ ಭಾರತೀಯ ಸಂಸ್ಕೃತಿ, ಧಾರ್ಮಿಕ ಮೌಲ್ಯಗಳು ಮತ್ತು ಗುರು-ಶಿಷ್ಯ ಪರಂಪರೆಯನ್ನು ಮಕ್ಕಳಲ್ಲಿ ಬೆಳೆಸುವುದು ಅತ್ಯಗತ್ಯವಾಗಿದೆ. ಪೋಷಕರು ಮಕ್ಕಳಿಗೆ ಕೇವಲ ಪದವಿ ಆಧಾರಿತ ಶಿಕ್ಷಣವನ್ನಷ್ಟೇ ನೀಡದೆ, ಉತ್ತಮ ಸಂಸ್ಕಾರವನ್ನೂ ನೀಡಿದರೆ ಅವರು ಮುಂದೆ ಸಮಾಜಕ್ಕೆ ಆದರ್ಶ ನಾಗರಿಕರಾಗಿ ಬೆಳೆಯುತ್ತಾರೆ,” ಎಂದು ಕರೆ ನೀಡಿದರು.

    ಕಾರ್ಯಕ್ರಮದಲ್ಲಿ ಆಗಮಿಕರಾದ ಸುದರ್ಶನ್ ಅವರ ನೇತೃತ್ವದಲ್ಲಿ ವಿಶೇಷ ಪೂಜೆ ಹಾಗೂ ಧಾರ್ಮಿಕ ವಿಧಿವಿಧಾನಗಳು ಅತ್ಯಂತ ಶ್ರದ್ಧಾಭಕ್ತಿಯಿಂದ ನೆರವೇರಿದವು. ತದನಂತರ ಪೂರ್ವಪ್ರಾಥಮಿಕ ಮಕ್ಕಳಿಗೆ ಅತ್ಯಂತ ಸಂಪ್ರದಾಯಬದ್ಧವಾಗಿ ಅಕ್ಷರಾಭ್ಯಾಸ ಮಾಡಿಸಲಾಯಿತು. ಪುಟಾಣಿ ಮಕ್ಕಳು ತಟ್ಟೆಯಲ್ಲಿ ಹರಡಿದ್ದ ಅಕ್ಕಿಯ ಮೇಲೆ ಬೆರಳಿನಿಂದ ತಮ್ಮ ಮೊದಲ ಅಕ್ಷರಗಳನ್ನು ಬರೆಯುವ ಮೂಲಕ ವಿದ್ಯಾಭ್ಯಾಸಕ್ಕೆ ಭಕ್ತಿಪೂರ್ವಕವಾಗಿ ಚಾಲನೆ ನೀಡಿದರು.

    ಕಾರ್ಯಕ್ರಮದಲ್ಲಿ ಕನ್ನಿಕಾ ವಿದ್ಯಾಪೀಠದ ಶಿಕ್ಷಕರು, ಶಾಲಾ ಸಿಬ್ಬಂದಿ ವರ್ಗ, ನೂರಾರು ಪೋಷಕರು ಹಾಗೂ ಅಪಾರ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ಮಠದ ವತಿಯಿಂದ ಆಗಮಿಸಿದ್ದ ಮಕ್ಕಳಿಗೆ ವಿಶೇಷ ಆಶೀರ್ವಾದದೊಂದಿಗೆ ಪ್ರಸಾದ ವಿತರಣೆ ಮಾಡಲಾಯಿತು.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ರಸ್ತೆ ಗುಂಡಿ ತಪ್ಪಿಸಲು ಹೋಗಿ ಲಾರಿ ಡಿಕ್ಕಿ: ನವವಿವಾಹಿತೆ ದಾರುಣ ಸಾವು, ಸಾರ್ವಜನಿಕರ ತೀವ್ರ ಆಕ್ರೋಶ

    August 7, 2026

    ಭೀಕರ ಬೈಕ್ ಅಪಘಾತ: ಮರದ ತುಂಡಿಗೆ ಡಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿ ದುರಂತ ಸಾವು, ಇಬ್ಬರ ಸ್ಥಿತಿ ಗಂಭೀರ

    August 6, 2026

    ಡ್ರಗ್ಸ್ ಮುಕ್ತ ಕರ್ನಾಟಕಕ್ಕೆ ಸಂಕಲ್ಪ: ಕೊರಟಗೆರೆಯಲ್ಲಿ ಪೊಲೀಸ್ ಇಲಾಖೆಯಿಂದ ಬೃಹತ್ ಜಾಗೃತಿ ಅಭಿಯಾನ

    July 29, 2026

    Leave A Reply Cancel Reply

    Our Picks

    36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!

    August 8, 2026

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!

    August 8, 2026

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶ ಪ್ರವಾಸದ ವೆಚ್ಚ 2021 ರಿಂದ ಐದು ಪಟ್ಟು ಹೆಚ್ಚಾಗಿದೆ. ರಾಜ್ಯಸಭೆಗೆ ವಿದೇಶಾಂಗ…

    ಸರಗೂರು: ಮಾದರ ಮಹಾಸಭೆಯ ಉದ್ಘಾಟನೆ –ಪ್ರತಿಭಾ ಪುರಸ್ಕಾರ:  ಒಳಮೀಸಲಾತಿ ಜಾರಿಗೆ ಕೆ.ಎಚ್. ಮುನಿಯಪ್ಪ ಪ್ರತಿಪಾದನೆ

    August 8, 2026

    ಹಳ್ಳಿಯ ವಿದ್ಯಾರ್ಥಿಗಳು ಉನ್ನತ ಹುದ್ದೆಗೇರುವುದೇ ಎಂ.ಎಸ್.ಎ. ಟ್ರಸ್ಟ್‌ನ ಮುಖ್ಯ ಉದ್ದೇಶ: ಶಿವರಾಮ ಶೆಟ್ಟಿ

    August 8, 2026

    ರಾಹುಲ್ ಗಾಂಧಿ ಪ್ರಧಾನಿಯಾಗಲಿ:  ಕಾಟೂರಿ ವೆಂಕಟೇಶ್ವರಲು ಪಾದಯಾತ್ರೆ

    August 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.