ಕಲಬುರಗಿ: ಮಹಿಳೆಯೊಬ್ಬರ ಜೊತೆ ತಮ್ಮ ಮಗ ಲಿವಿಂಗ್ ಟುಗೆದರ್ ನಲ್ಲಿರುವ ವಿಚಾರದ ತಿಳಿದ ಪೋಷಕರು ತಮ್ಮ ಮಗನಿಗೆ ಬುದ್ಧಿವಾದ ಹೇಳಿದ್ದಾರೆ. ಇದರಿಂದ ಮನನೊಂದ ಯುವಕ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಲಬುರಗಿ ಜಿಲ್ಲೆಯ ನಾಗನಹಳ್ಳಿ ಬಳಿ ನಡೆದಿದೆ.
ಮೃತ ಯುವಕನನ್ನು ಶಿವಕುಮಾರ್ ಎಂದು ಗುರುತಿಸಲಾಗಿದೆ. ಇನ್ನು ಆತ್ಮಹತ್ಯೆಗೂ ಮುನ್ನ ಶಿವಕುಮಾರ್ ಲಿವಿಂಗ್ ನಲ್ಲಿದ್ದ ಮಹಿಳೆಗೆ ಕರೆ ಮಾಡಿ ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ತಿಳಿಸಿದ್ದಾನೆ. ಇದರಿಂದ ಆತಂಕಗೊಂಡ ಮಹಿಳೆ ಕೂಡಲೇ ಸ್ಥಳಕ್ಕೆ ದೌಡಾಯಿಸಿದ್ದು ಯುವಕನ ಮನವೊಲಿಸಲು ಯತ್ನಿಸಿದ್ದಾಳೆ. ಆದರೆ ಇದಕ್ಕೆ ಕಿವಿಗೊಡದ ಶಿವಕುಮಾರ್ ರೈಲಿಗೆ ರೈಲಿನ ಮುಂದೆ ಬಿದ್ದಿದ್ದಾನೆ. ಈ ವೇಳೆ ಮಹಿಳೆ ಆತನ ರಕ್ಷಣೆಗೆ ಮುಂದಾಗಿದ್ದು ರಕ್ಷಿಸಲು ಸಾಧ್ಯವಾಗಿಲ್ಲ.
ರಕ್ಷಿಸಲು ಹೋಗಿದ್ದ ಮಹಿಳೆಗೂ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW