ಬೆಂಗಳೂರು: ಈ ಶೈಕ್ಷಣಿಕ ವರ್ಷದಲ್ಲಿ ಪ್ರಾಥಮಿಕ ಶಾಲೆಗಳಲ್ಲಿ ಎಲ್ ಕೆಜಿ ಮತ್ತು ಯುಕೆಜಿ ಆರಂಭಿಸಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ.
4–5 ನೇ ವರ್ಷದ ಮಕ್ಕಳಿಗಾಗಿ ಎಲ್ ಕೆಜಿ ಮತ್ತು ಯುಕೆಜಿ ಆರಂಭಿಸುವಂತೆ ಪೋಷಕರಿಂದ ಬೇಡಿಕೆ ಬಂದಿರುವ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಈ ಮಹತ್ವದ ನಿರ್ಧಾರ ಕೈಗೊಂಡಿದೆ.
ಸರ್ಕಾರವು ಈ ವರ್ಷ ಅಕ್ಷರ ಆವಿಷ್ಕಾರದ ಯೋಜನೆಯಡಿಯಲ್ಲಿ ಸರ್ಕಾರಿ ಶಾಲೆಗಳಲ್ಲಿ ಇಸಿಸಿಇ, ಎಲ್ ಕೆಜಿ, ಯುಕೆಜಿಯ ಹಾಗೂ ದ್ವಿಭಾಷಾ (ಕನ್ನಡ ಮತ್ತು ಆಂಗ್ಲ ಮಾಧ್ಯಮ) ತರಗತಿಗಳನ್ನು ನಡೆಸಲು ಮುಂದಾಗಿದೆ ಎನ್ನಲಾಗಿದೆ.
ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಶಾಲೆಗಳಲ್ಲಿ ಇಸಿಸಿಇ, ಎಲ್ ಕೆಜಿ ಹಾಗೂ ಯುಕೆಜಿಯ ತರಗತಿಗಳು ಹಾಗೂ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ತರಗತಿಗಳು ಪ್ರಕಾರ ಆರಂಭಗೊಳ್ಳುತ್ತಿದ್ದು, ಪಾಲಕರು ಇದರ ಸದುಪಯೋಗ ಶಿಕ್ಷಣ ಇಲಾಖೆ ತಿಳಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


