ತುಮಕೂರು: ಕರ್ನಾಟಕ ಒಕ್ಕಲಿಗ ಸಮುದಾಯಗಳ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕಾಗಿ ಒಕ್ಕಲಿಗ ಜನಾಂಗದವರಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಸ್ವಯಂ ಉದ್ಯೋಗ ನೇರಸಾಲ, ಗಂಗಾಕಲ್ಯಾಣ, ಸ್ವಾವಲಂಬಿ ಸಾರಥಿ, ಸ್ವಯಂ ಉದ್ಯೋಗ ಸಾಲ (ವಾಣಿಜ್ಯ ಬ್ಯಾಂಕ್ಗಳ ಸಹಯೋಗದೊಂದಿಗೆ), ಅರಿವು-ಶೈಕ್ಷಣಿಕ ನೇರಸಾಲ ಯೋಜನೆ(ಹೊಸದು-ನವೀಕರಣ), ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಸಾಲ(ಹೊಸದು) ಹಾಗೂ ಸ್ವಾತಂತ್ರ್ಯ ಮಹೋತ್ಸವದ ಅಮೃತ ಮುನ್ನಡೆ ಯೋಜನೆಯ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮ ಯೋಜನೆಗಳಡಿ ಸಾಲ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸಬಹುದಾಗಿದೆ. 2024-25 ಮತ್ತು 2025-26ನೇ ಸಾಲುಗಳಲ್ಲಿ ಅರ್ಜಿ ಸಲ್ಲಿಸಿ ಆಯ್ಕೆಯಾಗದವರು ಮತ್ತೊಮ್ಮೆ ಮರು ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.
ಆಸಕ್ತರು https://www.sevasindhu.karnataka.gov.in ಪೋರ್ಟಲ್ ಮೂಲಕ ಗ್ರಾಮ ಒನ್ / ಕರ್ನಾಟಕ ಒನ್ / ತುಮಕೂರು ಒನ್ ಸೇವಾ ಕೇಂದ್ರದಲ್ಲಿ ಸೆಪ್ಟೆಂಬರ್ 30ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ಸ್ವಾತಂತ್ರ್ಯ ಅಮೃತ ಮಹೋತ್ಸವ ಮುನ್ನಡೆ ಯೋಜನೆಯಡಿ ಸಾಲಸೌಲಭ್ಯಕ್ಕಾಗಿ https://www.koushalkar.com ಮೂಲಕ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್ಸೈಟ್ https://kvcdc.karnataka.gov.in ಅಥವಾ ಸಹಾಯವಾಣಿ ಸಂಖ್ಯೆ 080-29904350 / 29904268 ಅಥವಾ ಜಿಲ್ಲಾ ಕಚೇರಿ ದೂರವಾಣಿ ಸಂಖ್ಯೆ 0816-2005008ನ್ನು ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
