ತುಮಕೂರು : ಕರ್ನಾಟಕ ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕಾಗಿ ಕಾಡುಗೊಲ್ಲ ಜಾತಿಗೆ ಸೇರಿದವರಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಫಲಾಪೇಕ್ಷಿಗಳು ಸಾಲ ಸೌಲಭ್ಯಕ್ಕಾಗಿ ಸ್ವಯಂ ಉದ್ಯೋಗ ವೈಯಕ್ತಿಕ ಸಾಲ, ಅರಿವು-ಶೈಕ್ಷಣಿಕ ನೇರ ಸಾಲ(ಹೊಸತು ಹಾಗೂ ನವೀಕರಣ), ಗಂಗಾ ಕಲ್ಯಾಣ, ಅವಲಂಬಿ ಸಾರಥಿ ಹಾಗೂ ಹೊಲಿಗೆ ಯಂತ್ರ (ZIG-ZAG) ಯೋಜನೆಗಳಡಿ ಅರ್ಜಿ ಸಲ್ಲಿಸಬಹುದಾಗಿದೆ.
ಆಸಕ್ತರು https://sevasindhu.karnataka.gov.in ಪೋರ್ಟಲ್ ಮೂಲಕ ಗ್ರಾಮ ಒನ್ / ಕರ್ನಾಟಕ ಒನ್ / ತುಮಕೂರು ಒನ್ / ಬೆಂಗಳೂರು ಒನ್ ಸೇವಾ ಕೇಂದ್ರದಲ್ಲಿ ಸೆಪ್ಟೆಂಬರ್ 30ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವಾಗ ಅರ್ಜಿದಾರರು ಆಧಾರ್ ಕಾರ್ಡ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು. ಆಧಾರ್ ಕಾರ್ಡ್‌ನಲ್ಲಿರುವಂತೆ ಅರ್ಜಿದಾರರ ಹೆಸರು/ವಿಳಾಸ/ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಮತ್ತು ಬ್ಯಾಂಕ್ ಪಾಸ್ ಪುಸ್ತಕಗಳಲ್ಲಿ ಹೊಂದಾಣಿಕೆಯಾಗಬೇಕು.
2024–25 ಮತ್ತು 2025–26ನೇ ಸಾಲುಗಳಲ್ಲಿ ಅರ್ಜಿ ಸಲ್ಲಿಸಿರುವವರು ಮತ್ತೊಮ್ಮೆ ಬೇರೆ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಇರುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ನಿಗಮದ ಜಿಲ್ಲಾ ಕಚೇರಿ ದೂರವಾಣಿ ಸಂಖ್ಯೆ 0816–2005008ನ್ನು ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
