ತುಮಕೂರು: ಕೈಮಗ್ಗ ಮತ್ತು ಜವಳಿ ಇಲಾಖೆಯು ಪ್ರಧಾನ ಮಂತ್ರಿ ಮುದ್ರಾ ಯೋಜನೆಯಡಿ ಸಾಲ ಸೌಲಭ್ಯ ನೀಡಲು ಅರ್ಹ ಕೈಮಗ್ಗ ನೇಕಾರರಿಂದ ಅರ್ಜಿ ಆಹ್ವಾನಿಸಿದೆ.
ಈ ಯೋಜನೆಯಡಿ ಕೈಮಗ್ಗ ನೇಕಾರರಿಗೆ ಕೈಮಗ್ಗ ನೇಯುವ ಚಟುವಟಿಕೆಗಳಿಗಾಗಿ ರಾಷ್ಟಿçÃಕೃತ ಬ್ಯಾಂಕುಗಳಿಂದ 50,000 ರೂ.ಗಳಿಂದ 2ಲಕ್ಷ ರೂ.ಗಳವರೆಗೆ ಆರ್ಥಿಕ ಸಾಲ ಸೌಲಭ್ಯ ನೀಡಲಾಗುವುದು.
ಆಸಕ್ತ ಕೈಮಗ್ಗ ನೇಕಾರರು ನಿಗಧಿತ ಅರ್ಜಿ ನಮೂನೆ ಹಾಗೂ ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, 5ನೇ ಮುಖ್ಯರಸ್ತೆ, ಸಿದ್ದಗಂಗಾ ಬಡಾವಣೆ, ತುಮಕೂರು ಇವರ ಕಚೇರಿ ಅಥವಾ ದೂರವಾಣಿ ಸಂಖ್ಯೆ: 0816-2275370 ಅಥವಾ 9980208292ನ್ನು ಸಂಪರ್ಕಿಸಬಹುದೆಂದು ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW