ಬೆಂಗಳೂರು: ರಾಜರಾಜೇಶ್ವರಿ ನಗರದಲ್ಲಿ ಏಕ ಬಳಕೆ ಪ್ಲಾಸ್ಟಿಕ್ ಬಳಸುತ್ತಿದ್ದ 6 ಮಳಿಗೆಗಳಲ್ಲಿ ಪ್ಲಾಸ್ಟಿಕ್ ವಶಪಡಿಸಿಕೊಂಡು ಬೀಗ ಹಾಕಿ ಸೀಲ್ ಮಾಡಲಾಗಿದೆ.
ಆದರೂ ಬಳಕೆ ಮಾಡುತ್ತಿರುವ ಹಿನ್ನೆಲೆ ಜೆಪಿ ಪಾರ್ಕ್ ವಾರ್ಡ್ ನಲ್ಲಿ ಆರ್.ಎಸ್. ವೆಜಿಟೆಬಲ್ ಮಳಿಗೆ, ಗ್ರೀನ್ ವಾಲಿ ಫಾರಂ, ಜಾಫರ್ ಫೋಟ್ ಶಾಪ್ ಹಾಗೂ ಆರ್.ಆರ್. ನಗರ ವಾರ್ಡ್ ನಲ್ಲಿ ಮಾತಾಜಿ ಡಿಪಾರ್ಟ್ಮೆಂಟಲ್ ಸ್ಟೋರ್ಸ್, ಸತೀಶ್ ಸ್ಟೋರ್ಸ್, ಕನಕಶ್ರೀ ಕ್ರೀಯೇಷನ್ಸ್ ಸೇರಿದಂತೆ ಒಟ್ಟು ಆರು ಮಳಿಗೆಗಳಿಗೆ ಬೀಗ ಹಾಕಿ ಸೀಲ್ ಮಾಡಲಾಗಿದೆ.
ಇದೆ ಬೆಂಗಳೂರು ನಗರದಲ್ಲಿ ಸಾಕಷ್ಟು ಏಕ ಬಳಕೆ ನಿಷೇದಿತ ಪ್ಲಾಸ್ಟಿಕ್ ಬಳಸುತ್ತಿರುವುದು ತಿಳಿದು ಬಂದಿದೆ. ಪೊಲೀಸ್ ಹಾಗೂ ಬಿಬಿಎಂಪಿ ಇಲಾಖೆಯ ಅಧಿಕಾರಿಗಳು, ಕಟ್ಟುನಿಟ್ಟಿನ ಕ್ರಮ ತೆಗೆದುಕೊಂಡು ಅಂಗಡಿ ಸೀಲ್ ಮಾಡಲಾಗುವುದು ಎಂದು ಮಾಧ್ಯಮದವರಿಗೆ ತಿಳಿಸಿದ್ದಾರೆ.


