ಒಡಿಶಾ ಮೂಲದ ಮಹಿಳೆಯನ್ನು ಲಾಡ್ಜ್ ಗೆ ಕರೆದುಕೊಂಡು ಬಂದು ಉಸಿರುಗಟ್ಟಿಸಿ ಕೊಲೆ ಮಾಡಿರುವ ಘಟನೆ ಯಶವಂತಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ದೀಪ ಪದನ್(37) ಕೊಲೆಯಾಗಿರುವ ಒಡಿಶಾ ಮೂಲದ ಮಹಿಳೆ. ಕೊಲೆ ಮಾಡಿ ಪರಾರಿಯಾಗಿರುವ ಆಕೆಯ ಸ್ನೇಹಿತನಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.
ದೀಪ ಪದನ್ಳನ್ನು ಸ್ನೇಹಿತ ರೈಲ್ವೆ ನಿಲ್ದಾಣ ಸಮೀಪದ ಲಾಡ್ಜ್ ಗೆ ಕರೆದು ಕೊಂಡು ಬಂದಿದ್ದಾನೆ. ಜೂ.9ರಂದು ರಾತ್ರಿ ದಿಂಬಿನಿಂದ ಉಸಿರುಗಟ್ಟಿಸಿ ದೀಪ ಅವರನ್ನು ಕೊಲೆ ಮಾಡಿ ಆರೋಪಿ ಪರಾರಿಯಾಗಿದ್ದಾನೆ.
ಜೂ.10ರಂದು ಈ ಪ್ರಕರಣ ಬೆಳಕಿಗೆ ಬಂದಿದೆ. ಸುದ್ದಿ ತಿಳಿದ ಯಶವಂತಪುರ ಠಾಣೆ ಪೊಲೀಸರು ಲಾಡ್ಜ್ ಗೆ ತೆರಳಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಈ ಮಹಿಳೆಯನ್ನು ಕೊಲೆ ಮಾಡಿ ಪರಾರಿಯಾಗಿರುವ ವ್ಯಕ್ತಿಗಾಗಿ ಪೊಲೀಸರು ಶೋಧ ಕೈಗೊಂಡಿದ್ದಾರೆ. ಲಾಡ್ಜ್ ಹಾಗೂ ಸುತ್ತಮುತ್ತಲಿನ ಸಿಸಿಟಿವಿಗಳನ್ನು ಪೊಲೀಸರು ಪರಿಶೀಲನೆ ನಡೆಸಿ ಆರೋಪಿಗಾಗಿ ಬಲೆ ಬೀಸಿದ್ದಾರೆ.
ವರದಿ ಆಂಟೋನಿ ಬೇಗೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB