ಲೋಕಸಭೆ ಚುನಾವಣೆಯಲ್ಲಿ ಮಂಡ್ಯದಿಂದ ಸ್ಪರ್ಧಿಸುವುದು ಖಚಿತ ಎಂದು ಸಂಸದೆ ಸುಮಲತಾ ಹೇಳಿದ್ದಾರೆ. ಮದ್ದೂರಿನಲ್ಲಿ ಮಾತನಾಡಿದ ಅವರು, ಬಿಜೆಪಿ-ಜೆಡಿಎಸ್ ಮೈತ್ರಿ ಕುರಿತು ಬಗ್ಗೆ ಪ್ರತಿಕ್ರಿಯಿಸಿಲ್ಲ. ಹಿಂದಿನ ಲೋಕಸಭೆ ಚುನಾವಣೆಯಲ್ಲಿ ಸುಮಲತಾ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು.
ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಬೆಂಬಲ ಸೂಚಿಸಿದ್ದ ಅವರು ಬಿಜೆಪಿಗೆ ಸೇರಿ ಚುನಾವಣೆಗೆ ಸ್ಪರ್ಧಿಸುತ್ತಾರೆ ಎಂದು ಊಹಿಸಲಾಗಿತ್ತು. ಆದರೆ ಎಂಪಿ ಎಲೆಕ್ಷನ್ ಗೆ ಬಿಜೆಪಿ-ಜೆಡಿಎಸ್ ಮೈತ್ರಿಯಾಗಿರುವುದರಿಂದ ಮಂಡ್ಯದಿಂದ ಸ್ಪರ್ಧಿಸುವ ಸಾಧ್ಯತೆಯಿದೆ.


