ಬೆಳಗಾವಿ: ಭಾರತ ಚುನಾವಣಾ ಆಯೋಗದಿಂದ ಸಾರ್ವತ್ರಿಕ ಲೋಕಸಭಾ ಚುನಾವಣೆಯ ದಿನಾಂಕ ನಿಗದಿಪಡಿಸಿ ಅಧಿಸೂಚನೆಯನ್ನು ಹೊರಡಿಸಲಾಗಿರುತ್ತದೆ. ಸದರಿ ಅಧಿಸೂಚನೆಯನ್ವಯ ಚುನಾವಣೆಯ ಮಾದರಿ ನೀತಿ ಸಂಹಿತೆಯು ಮಾರ್ಚ್ 16, 2024 ರಿಂದ ರಾಜ್ಯಾದ್ಯಂತ ಜಾರಿಯಲ್ಲಿರುತ್ತದೆ.
ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ದೂರು ನಿರ್ವಹಣಾ ಕೇಂದ್ರ, ಮಾದರಿ ನೀತಿ ಸಂಹಿತೆ ನಿಯಂತ್ರಣ ಕೊಠಡಿ ಹಾಗೂ C–Vigil ಕೊಠಡಿಯನ್ನು ಸ್ಥಾಪಿಸಲಾಗಿತ್ತು. ಪ್ರಸ್ತುತ ಸದರಿ ನಿಯಂತ್ರಣ ಕೊಠಡಿಗಳನ್ನು ಬೆಳಗಾವಿ ವಿಶ್ವೇಶ್ವರಯ್ಯಾ ನಗರದ ಸ್ಮಾರ್ಟ ಸಿಟಿ ಕಮಾಂಡ್ ಆ್ಯಂಡ್ ಕಂಟ್ರೋಲ್ ಸೆಂಟರ್ ಸಭಾಂಗಣಕ್ಕೆ ಸ್ಥಳಾಂತರಿಸಲಾಗಿದೆ.
ದೂರು ನಿರ್ವಹಣಾ ಕೇಂದ್ರ ದೂರವಾಣಿ ಸಂಖ್ಯೆ 0831-2007015, ಮಾದರಿ ನೀತಿ ಸಂಹಿತೆ ಕೊಠಡಿ ಸಂಖ್ಯೆ 0831-2007018, ಸಿವಿಜಿಲ್(C–Vigil) ದೂರವಾಣಿ ಸಂಖ್ಯೆ 0831-2007017 ಗೆ ಸಾರ್ವಜನಿಕರು ಕರೆ ಮಾಡಬಹುದು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ನಿತೇಶ್ ಪಾಟೀಲ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296