nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಧುಗಿರಿ: ಬಸ್ ನಿಲ್ದಾಣಗಳಲ್ಲಿ ತಂಗುದಾಣಗಳ ಕೊರತೆ; ಪ್ರಯಾಣಿಕರ ಪರದಾಟ

    February 21, 2026

    ಮಧುಗಿರಿ: ಪಡಿತರ ತರಲು ತೆರಳುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ಮಹಿಳೆ ಸಾವು

    February 21, 2026

    ಶೇ.99ರಷ್ಟು ಕಠಿಣ ಪರಿಶ್ರಮದಿಂದ ಸಾಧನೆ ಕಟ್ಟಿಟ್ಟ ಬುತ್ತಿ: ನ್ಯಾ.ರಾಜೇಶ್ ಎನ್.ಹೊಸಮನೆ ಅಭಿಮತ

    February 21, 2026
    Facebook Twitter Instagram
    ಟ್ರೆಂಡಿಂಗ್
    • ಮಧುಗಿರಿ: ಬಸ್ ನಿಲ್ದಾಣಗಳಲ್ಲಿ ತಂಗುದಾಣಗಳ ಕೊರತೆ; ಪ್ರಯಾಣಿಕರ ಪರದಾಟ
    • ಮಧುಗಿರಿ: ಪಡಿತರ ತರಲು ತೆರಳುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ಮಹಿಳೆ ಸಾವು
    • ಶೇ.99ರಷ್ಟು ಕಠಿಣ ಪರಿಶ್ರಮದಿಂದ ಸಾಧನೆ ಕಟ್ಟಿಟ್ಟ ಬುತ್ತಿ: ನ್ಯಾ.ರಾಜೇಶ್ ಎನ್.ಹೊಸಮನೆ ಅಭಿಮತ
    • ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ
    • ಪಂಚ ಗ್ಯಾರೆಂಟಿ, ‘ಲಂಚ ಗ್ಯಾರೆಂಟಿ’: ಸತೀಶ್ ಜಾರಕಿಹೊಳಿ ಹೇಳಿಕೆಯಲ್ಲೇ ಭ್ರಷ್ಟಾಚಾರಕ್ಕೆ ಸಾಕ್ಷಿ: ಬಿ.ವೈ.ವಿಜಯೇಂದ್ರ ವಾಗ್ದಾಳಿ
    • ವಿಕಲಚೇತನರಿಗೆ ರಾಜಕೀಯ ಮೀಸಲಾತಿಗೆ ಒತ್ತಾಯಿಸಿ ಪ್ರತಿಭಟನೆ: ಫೆ.22ರಂದು ತುಮಕೂರಿನಲ್ಲಿ ರ‍್ಯಾಲಿ
    • ಹತ್ತೇನಹಳ್ಳಿ ಮಾರಮ್ಮನಿಗೆ ಹೊಸ ತಾಳಿ ಸಮರ್ಪಣೆ: ಭಕ್ತರಿಗೆ ಸಂಭ್ರಮ
    • ಸಾರ್ವಜನಿಕರ ರಸ್ತೆಗೆ ಕಾಂಪೌಂಡ್ ನಿರ್ಮಾಣ: ತೆರವಿಗೆ ಆಗ್ರಹಿಸಿ ತಹಶೀಲ್ದಾರ್‌ ಗೆ ಮನವಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಲೋಕಾಯುಕ್ತ: ಸಾರ್ವಜನಿಕ ದೂರು ಸ್ವೀಕಾರ ಕಾರ್ಯಕ್ರಮದಲ್ಲಿ ಬೆರಳೆಣಿಕೆಯ ಜನ ಭಾಗಿ!
    ಜಿಲ್ಲಾ ಸುದ್ದಿ October 16, 2024

    ಲೋಕಾಯುಕ್ತ: ಸಾರ್ವಜನಿಕ ದೂರು ಸ್ವೀಕಾರ ಕಾರ್ಯಕ್ರಮದಲ್ಲಿ ಬೆರಳೆಣಿಕೆಯ ಜನ ಭಾಗಿ!

    By adminOctober 16, 2024No Comments2 Mins Read
    saragur

    ಸರಗೂರು:  ಕರ್ನಾಟಕ ಲೋಕಾಯುಕ್ತ ಇನ್ಸ್ಪೆಕ್ಟರ್ ಅಶೋಕ್‌ ಕುಮಾರ್ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಸಾರ್ವಜನಿಕ ದೂರು ಸ್ವೀಕಾರ ಕಾರ್ಯಕ್ರಮದಲ್ಲಿ ಪ್ರಚಾರದ ಕೊರತೆಯಿಂದಾಗಿ ಬೆರೆಣಿಕೆಯಷ್ಟು ಮಂದಿ ಸಾರ್ವಜನಿಕರು ಮಾತ್ರ ಭಾಗಿಯಾಗಿದ್ದರು.

    ಇದರಿಂದಾಗಿ ವಿವಿಧ ಇಲಾಖೆಗಳಿಗೆ ಕೇವಲ 29 ಅರ್ಜಿಗಳು ಮಾತ್ರ ಸಲ್ಲಿಕೆಯಾದವು. ಹೀಗಾಗಿ ಬೇಸರಗೊಂಡ ಸಾರ್ವಜನಿಕರು ತಾಲೂಕು ಆಡಳಿತದ ವಿರುದ್ಧ ರೊಚ್ಚಿಗೆದ್ದು, ತಮ್ಮ ಆಕ್ರೋಶ ವ್ಯಕ್ತಪಡಿಸಿದರು.


    Provided by
    Provided by

    ಪಟ್ಟಣದ ಅಂಬೇಡ್ಕರ್ ಸಮುದಾಯ ಭವನದಲ್ಲಿ ತಾಲೂಕು ಆಡಳಿತ ಸಾರ್ವಜನಿಕರ ಸಮಸ್ಯೆಗಳ ಪರಿಹಾರಕ್ಕಾಗಿ ಆಯೋಜಿಸಿದ್ದ ದೂರು ಸ್ವೀಕಾರ ಕಾರ್ಯಕ್ರಮದ ಶುರುವಿನಲ್ಲಿ ಕೇವಲ 8–10 ಮಂದಿ ಸಾರ್ವಜನಿಕರು ಮಾತ್ರ ಬಂದಿದ್ದರು. ಇನ್ನುಳಿದಂತೆ ಅಧಿಕಾರಿಗಳೇ ಹೆಚ್ಚು ಮಂದಿ ಭಾಗಿಯಾಗಿದ್ದರು. ಕಾರ್ಯಕ್ರಮದಲ್ಲಿ ಹಾಕಲಾದ ಕುರ್ಚಿಗಳು ಖಾಲಿಯಾಗಿದ್ದವು.

    ಬೆಳಗ್ಗೆ 11ಕ್ಕೆ ಆರಂಭವಾದ ಕಾರ್ಯಕ್ರಮ ಮಧ್ಯಾಹ್ನ 2 ಗಂಟೆಗೆ ಗಲಾಟೆ, ಗದ್ದಲದ ನಡುವೆಯೇ ಮುಕ್ತಾಯವಾಯಿತು. ಕಂದಾಯ ಇಲಾಖೆ ಆಡಳಿತಾಧಿಕಾರಿಗಳು ಕಾಡಂಚಿನ ಗ್ರಾಮಗಳ ಜನರಿಗೆ ಸರಿಯಾದ ಮಾಹಿತಿಯನ್ನು ನೀಡಿಲ್ಲ. ಸಾರ್ವಜನಿಕರು ಕುಂದು ಕೊರತೆಗಳ ಸಭೆ ಮಾಡಬೇಕಾದ ತಾಲೂಕು ಆಡಳಿತ  ಅಧಿಕಾರಿಗಳ ಸಭೆ ನಡೆಸುತ್ತಿದೆ ಎಂದು ಆರೋಪಿಸಿದ ಸಂಘ ಸಂಸ್ಥೆಗಳ ಮುಖಂಡರು ತಹಶೀಲ್ದಾರ್ ಅವರನ್ನು ಪ್ರಶ್ನಿಸಿದರು. ಇದಕ್ಕೆ ತಹಶೀಲ್ದಾರ್ ರುಕಿಯಾ ಬೇಗಂ ಅವರು ಕಾರ್ಯಕ್ರಮದ ಕುರಿತು ಪ್ರಚಾರ ಮಾಡುವಂತೆ ತಾಲೂಕು ಪಂಚಾಯಿತಿ ಅಧಿಕಾರಿಗಳಿಗೆ ಸೂಚಿಸಲಾಗಿತ್ತು ಎಂದು ಸಮಜಾಯಿಸಿ ನೀಡಿದರು.

    ಲೋಕಾಯುಕ್ತ ಇನ್ಸ್ಪೆಕ್ಟರ್ ಅಶೋಕ್ ಕುಮಾರ್ ಮಾತನಾಡಿ, ಅಧಿಕಾರಿಗಳು ಸಾರ್ವಜನಿಕರ ಕೆಲಸಗಳಿಗೆ ಸಾರ್ವಜನಿಕರಿಂದ ಯಾವುದೇ ರೀತಿಯ ಬೇಡಿಕೆಗಳನ್ನು ಇಡಬಾರದು. ಸಾರ್ವಜನಿಕರ ಕೆಲಸಗಳನ್ನು ವಿಳಂಬ ಮಾಡುವುದು. ಲಂಚಕ್ಕೆ ಬೇಡಿಕೆ ಇಡುವುದು ಅಪರಾಧ. ಸರಕಾರಿ ಇಲಾಖೆಗಳಲ್ಲಿಯೂ ಪಾರದರ್ಶಕತೆ ಕಾಪಾಡಿಕೊಳ್ಳುವುದು ಅವಶ್ಯಕತೆಯಾಗಿದೆ ಎಂದು ತಿಳಿಸಿದರು.

    ಮನುಗನಹಳ್ಳಿ ಗ್ರಾಪಂ ಉಪಾಧ್ಯಕ್ಷ ಲಂಕೆ ರಮೇಶ್ ಮಾತನಾಡಿ, ಜಮೀನಿನ ಮಾಲೀಕ ಸ್ವಾಧೀನದಲ್ಲಿ ಇದ್ದರು. ಕಂದಾಯ ಇಲಾಖೆ ಅಧಿಕಾರಿಗಳು ಬದುಕಿರುವ ವ್ಯಕ್ತಿಗೆ ಮರಣ ಹೊಂದಿದ್ದಾನೆ ಎಂದು ಪತ್ರ ನೀಡಿ ಬೇರೆಯವರಿಗೆ ನಾಲ್ಕು ಎಕರೆ ಜಮೀನನ್ನು ಖಾತೆ ಮಾಡಿದ್ದಾರೆ ಎಂದು ದೂರಿದರು.

    ಇದಕ್ಕೆ ಪ್ರತಿಕ್ರಿಯಿಸಿದ ಇನ್ಸ್ಪೆಕ್ಟರ್ ಅಶೋಕ್‌ ಕುಮಾರ್, ತಾಲೂಕಿನ ಕಂದಾಯ ಇಲಾಖೆ ತಹಶೀಲ್ದಾರ್ ಮತ್ತು ಆರ್‌ ಐ ಹಾಗೂ ವಿಎ ಅಧಿಕಾರಿಗಳು ಸೂಕ್ತ ಕ್ರಮಕ್ಕಾಗಿ ಮೇಲಾಧಿಕಾರಿಗಳ ಗಮನಕ್ಕೆ ತರಲಾಗುವುದು ಎಂದರು.

    ಸರಗೂರು ಪಟ್ಟಣದ  ಸಣ್ಣ ಸ್ವಾಮಿ, ಕೂಡಗಿ ಗೋವಿಂದರಾಜು, ಯಶವಂತಪುರ ಶಿವಲಿಂಗಯ್ಯ, ಹೂವಿನಕೊಳ ಮಹೇಶ್, ಇಟ್ನ ರಾಜಣ್ಣ ಆದಿಕರ್ನಾಟಕ ಮಹಾಸಭಾ ಅಧ್ಯಕ್ಷ ಸರಗೂರು ಶಿವಣ್ಣ ಸೇರಿದಂತೆ ಇನ್ನಿತರರು ಅರ್ಜಿಗಳನ್ನು ಸಲ್ಲಿಸಿ ಮಾತನಾಡಿದರು.

    ಮನೆ ಮಂಜೂರು, ನಿವೇಶನ ಹಂಚಿಕೆ ವಿವಾದ, ಸಾಗುವಳಿ ಪತ್ರ ವಿತರಣೆ, ಜಮೀನು ಅಳತೆ ಸೇರಿದಂತೆ ವಿವಿಧ ಇಲಾಖೆಗಳಿಗೆ ಸಾರ್ವಜನಿಕರಿಂದ 29 ಅರ್ಜಿಗಳು ಸಲ್ಲಿಕೆಯಾದವು, ಕಂದಾಯ ಇಲಾಖೆ 16, ಸರ್ವೆ ಇಲಾಖೆ 5, ಪಟ್ಟಣ ಪಂಚಾಯಿತಿಗೆ 2, ಅರಣ್ಯ ಇಲಾಖೆ 1,  ತಾಲೂಕು ಪಂಚಾಯಿತಿ ೪,  ಪಿಡಿಒ ೧ ಅರ್ಜಿ ಸಲ್ಲಿಕೆಯಾದವು. ತಹಸೀಲ್ದಾರ್ ರುಕೀಯಾ ಬೇಗಂ, ಲೋಕಾಯುಕ್ತ ಇನ್ಸ್ ಪೆಕ್ಟರ್ ರೂಪಶ್ರೀ, ಸಿಬ್ಬಂದಿಗಳಾದ ವೀಣಾ, ಗೋಪಿ, ಮೋಹನ್ ಗೌಡ, ತ್ರಿವೇಣಿ, ಲೋಕೇಶ್ ರಾಜ್ ಅರಸ್, ನೇತ್ರಾವತಿ, ಪರಶುರಾಮ್ ಸೇರಿದಂತೆ ಇಲಾಖಾಧಿಕಾರಿಗಳು ಹಾಜರಿದ್ದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಶೇ.99ರಷ್ಟು ಕಠಿಣ ಪರಿಶ್ರಮದಿಂದ ಸಾಧನೆ ಕಟ್ಟಿಟ್ಟ ಬುತ್ತಿ: ನ್ಯಾ.ರಾಜೇಶ್ ಎನ್.ಹೊಸಮನೆ ಅಭಿಮತ

    February 21, 2026

    ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ

    February 21, 2026

    ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ

    February 20, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ಮಧುಗಿರಿ: ಬಸ್ ನಿಲ್ದಾಣಗಳಲ್ಲಿ ತಂಗುದಾಣಗಳ ಕೊರತೆ; ಪ್ರಯಾಣಿಕರ ಪರದಾಟ

    February 21, 2026

    ಮಧುಗಿರಿ: ತುಮಕೂರು ಜಿಲ್ಲೆಯ ಮಧುಗಿರಿ ಪಟ್ಟಣದ ಪ್ರಮುಖ ವೃತ್ತಗಳಲ್ಲಿ ಬಸ್‌ ಗಳಿಗಾಗಿ ಕಾಯುವ ಪ್ರಯಾಣಿಕರಿಗೆ ಸೂಕ್ತ ತಂಗುದಾಣಗಳಿಲ್ಲದೆ ತೀವ್ರ ತೊಂದರೆಯಾಗುತ್ತಿದೆ.…

    ಮಧುಗಿರಿ: ಪಡಿತರ ತರಲು ತೆರಳುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ಮಹಿಳೆ ಸಾವು

    February 21, 2026

    ಶೇ.99ರಷ್ಟು ಕಠಿಣ ಪರಿಶ್ರಮದಿಂದ ಸಾಧನೆ ಕಟ್ಟಿಟ್ಟ ಬುತ್ತಿ: ನ್ಯಾ.ರಾಜೇಶ್ ಎನ್.ಹೊಸಮನೆ ಅಭಿಮತ

    February 21, 2026

    ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ

    February 21, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.