ತುಮಕೂರು: ತುಮಕೂರಿನಲ್ಲೂ ಲೋಕಾಯುಕ್ತ ದಾಳಿ ನಡೆದಿದ್ದು,ಶಿರಾ ತಾಲೂಕಿನ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ ಸಹಾಯಕ ಅಭಿಯಂತರ ನಾಗೇಂದ್ರಪ್ಪ ಮನೆ ಮೇಲೆ ದಾಳಿ ಮಾಡಿರೋ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
ಬೆಳ್ಳಂಬೆಳಗ್ಗೆ ಸುಮಾರು 4 ವಾಹನಗಳಲ್ಲಿ ಬಂದಂತಹ ಅಧಿಕಾರಿಗಳ ತಂಡ ತುಮಕೂರಿನಲ್ಲಿರುವ ಮನೆ ಹಾಗೂ ಶಿರಾ ನಗರದಲ್ಲಿರೋ ಕಚೇರಿ ಮೇಲೆ ದಾಳಿ ಮಾಡಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ತುಮಕೂರಿನ ಮಿರ್ಜಿ ಪೆಟ್ರೋಲ್ ಬಂಕ್ ಹಿಂಭಾಗದಲ್ಲಿರುವ ಮನೆಯಲ್ಲಿ ನಾಗೇಂದ್ರಪ್ಪ ಅವರಿಂದ ಹೆಚ್ಚಿನ ಮಾಹಿತಿ ಪಡೆಯುತ್ತಿದ್ದಾರೆ.
ಲೋಕಾಯುಕ್ತ ಡಿವೈಎಸ್ ಪಿ ಮಂಜುನಾಥ್ ಹಾಗೂ ಹರೀಶ್ ನೇತೃತ್ವದಲ್ಲಿ ದಾಳಿ ಮಾಡಲಾಗಿದ್ದು ಕಚೇರಿ, ಮನೆ ಹಾಗೂ ಪಾರ್ಮಹೌಸ್ ಮೇಲೂ ದಾಳಿ ಮಾಡಿ ಅಪಾರ ಪ್ರಮಾಣದ ದಾಖಲೆ ವಶಕ್ಕೆ ತೆಗೆದುಕೊಂಡಿದ್ದಾರೆ. ಅನೇಕ ದಿನಗಳಿಂದ ಇವರ ವಿರುದ್ಧ ಸಾಕಷ್ಟು ದೂರುಗಳು ಬಂದ ಹಿನ್ನೆಲೆಯಲ್ಲಿ ದಾಳಿ ಮಾಡಲಾಗಿದೆ.


