ತುಮಕೂರು: ಬೆಳ್ಳಂ ಬೆಳಗ್ಗೆ ತುಮಕೂರು ಜಿಲ್ಲೆಯಲ್ಲಿ ಸರ್ಕಾರಿ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಅಪಾರ ಪ್ರಮಾಣದ ದಾಖಲೆಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
ಅಕ್ರಮ ಆಸ್ತಿ ಸಂಪಾದನೆ ಮಾಹಿತಿ ಹಿನ್ನೆಲೆ ತುಮಕೂರು ಜಿಲ್ಲೆಯ ಕೆ ಆರ್ ಐ ಡಿ ಎಲ್ ನಲ್ಲಿ ಎಕ್ಸಿಕ್ಯೂಟಿವ್ ಇಂಜಿನಿಯರಾಗಿ ಕೆಲಸ ಮಾಡುತ್ತಿರುವ ಹನುಮಂತ ರಾಯಪ್ಪ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಹನುಮಂತ ರಾಯಪ್ಪ ಅವರಿಗೆ ಸೇರಿದ ತುಮಕೂರು ನಗರದ ಶಿರಾ ಗೇಟ್ ಬಡಾವಣೆಯಲ್ಲಿರುವ ಅವರಿಗೆ ಸೇರಿದ ಮನೆ, ಮಿಡಿಗೇಶಿ ಬಳಿಯ ಫಾರಂ ಹೌಸ್ ಸೇರಿದಂತೆ ಕರ್ತವ್ಯ ನಿರ್ವಹಿಸುತ್ತಿರುವ ಕೊರಟಗೆರೆ ಕಚೇರಿ ಮೇಲೆಯೂ ತುಮಕೂರು ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ತಪಾಸಣಾ ಕಾರ್ಯ ಮುಂದುವರೆಸಿದ್ದಾರೆ.


