ತುಮಕೂರು: ಬೆಂಗಳೂರಿನ ಖನಿಜ ಭವನದಲ್ಲಿರುವ ಕೆಐಎಡಿಬಿ ಹೆಚ್ಚುವರಿ ನಿರ್ದೇಶಕ ಸಿ.ಟಿ ಮುದ್ದುಕುಮಾರ್ ಅವರ ತುಮಕೂರು ಮನೆ ಹಾಗೂ ಅವರಿಗೆ ಸೇರಿದ ಕಾರ್ಖಾನೆ ಮೇಲೆ ಲೋಕಾಯುಕ್ತರು ಇಂದು ಬೆಳ್ಳಂ ಬೆಳಗ್ಗೆ ದಾಳಿ ನಡೆಸಿ ಅಪಾರ ಪ್ರಮಾಣದ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.
ರಾಜ್ಯಾದ್ಯಂತ ಒಟ್ಟ ಏಕಕಾಲದಲ್ಲಿ ಒಟ್ಟು 7 ಕಡೆಗಳಲ್ಲಿ ದಾಳಿ ಮಾಡಿದ ಲೋಕಾಯುಕ್ತರು ಪರಿಶೀಲನೆ ನಡೆಸುತ್ತಿದ್ದಾರೆ.
ಇಂದು ಬೆಳಂಬೆಳಗ್ಗೆ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು, ಬೆಂಗಳೂರಿನ ನಾಗರಭಾವಿಯ 2 ನೇ ಹಂತದಲ್ಲಿರುವ ವಾಸದ ಮನೆ, ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯ ಖನಿಜ ಭವನದಲ್ಲಿರುವ ಕಚೇರಿ, ತುಮಕೂರು ನಗರದ ಬನಶಂಕರಿಯಲ್ಲಿರುವ ಮನೆ, ಚಿಕ್ಕನಾಯಕನಹಳ್ಳಿ ಪಟ್ಟಣದಲ್ಲಿರುವ ಮನೆ, ಚಿಕ್ಕನಾಯಕನಹಳ್ಳಿ ತಾಲೂಕಿನ ಶೆಟ್ಟಿಕೆರೆ ಹೋಬಳಿ ರಂಗನಾಥಪುರದಲ್ಲಿರುವ ಫಾರಂಹೌಸ್ ಹಾಗೂ ತುಮಕೂರಿನ ಅಂತರಸನಹಳ್ಳಿಯ ಇಂಡಸ್ಟ್ರಿಯಲ್ ಏರಿಯಾದಲ್ಲಿರುವ ಫ್ಯಾಕ್ಟರಿ, (ಪ್ಲಾಸ್ಟಿಕ್ ಬಾಟಲ್ ತಯಾರಿಕಾ ಘಟಕ) ಸೇರಿದಂತೆ ಒಟ್ಟು 7 ಕಡೆಗಳಲ್ಲಿ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು ದಾಖಲೆಗಳನ್ನು ವಶಕ್ಕೆ ತೆಗೆದುಕೊಂಡು ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ.
ತುಮಕೂರು ಲೋಕಾಯುಕ್ತ ಎಸ್.ಪಿ.ಲಕ್ಷ್ಮೀ ಗಣೇಶ್ ಮಾರ್ಗದರ್ಶನದಲ್ಲಿ ದಾಳಿ ನಡೆಸಲಾಗಿದ್ದು ಲೋಕಾಯುಕ್ತ ಡಿವೈಎಸ್ಪಿ ಬಿ.ಉಮಾಶಂಕರ್, ರಾಮಕೃಷ್ಣಯ್ಯ ನೇತೃತ್ವದಲ್ಲಿ, ಇನ್ಸ್ಪೆಕ್ಟರ್ ಗಳಾದ ಶಿವರುದ್ರಪ್ಪ ಮೇಟಿ, ಮಹಮ್ಮದ್ ಸಲೀಂ, ಸೇರಿದಂತೆ ಇನ್ನಿತರ ಅಧಿಕಾರಿಗಳ ತಂಡಗಳಿಂದ ದಾಳಿ ನಡೆಸಿದೆ. ಒಟ್ಟು 30 ಕ್ಕೂ ಹೆಚ್ಚು ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಂದ ದಾಳಿ ನಡೆಸಿ ಪರಿಶೀಲನೆ ಕೈಗೊಂಡಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


