ತುಮಕೂರು: ತುಮಕೂರಿನಲ್ಲಿ ಬೆಳಂಬೆಳಗ್ಗೆ ಲೋಕಾಯುಕ್ತ ಪೊಲೀಸರು ಸರ್ಕಾರಿ ಅಧಿಕಾರಿ ಮನೆ ಮೇಲೆ ದಾಳಿ ನಡೆಸಿ ಅಪಾರ ಪ್ರಮಾಣದ ದಾಖಲೆ ಪತ್ರಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
ತುಮಕೂರು ನಗರ ಅಭಿವೃದ್ಧಿ ಇಲಾಖೆ ಜಂಟಿ ನಿರ್ದೇಶಕ ನಾಗರಾಜ ಮನೆ ಮೇಲೆ ದಾಳಿ ಸುಮಾರು 10ಕ್ಕೂ ಹೆಚ್ಚು ಮಂದಿಗೆ ಲೋಕಾಯುಕ್ತ ಪೊಲೀಸರು ದಿಡೀರ್ ದಾಳಿ ನಡೆಸಿದ್ದಾರೆ.
ತುಮಕೂರು ನಗರದ ಸಪ್ತಗಿರಿ ಬಡಾವಣೆಯಲ್ಲಿರುವ ನಾಗರಾಜ್ ಅವರಿಗೆ ಸೇರಿದ ಮನೆ ಮೇಲೆ ಬೆಳಗ್ಗೆ ಸುಮಾರು ಐದು ಗಂಟೆ ಸಂದರ್ಭದಲ್ಲಿ ಅಧಿಕಾರಿಗಳು ದಾಳಿ ನಡೆಸಿ ಕಾಗದಪತ್ರಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.
ಇದೆ ಸಂದರ್ಭದಲ್ಲಿ ಅವರನ್ನು ವಿಚಾರಣೆಗೂ ಕೂಡ ಒಳಪಡಿಸಿದ್ದಾರೆ. ಹಲವು ದಿನಗಳಿಂದ ಇವರ ಮೇಲೆ ಸಾಕಷ್ಟು ದೂರುಗಳು ಲೋಕಾಯುಕ್ತ ಪೊಲೀಸರಿಗೆ ಬಂದಿದ್ದವು. ಇದರ ಆಧಾರದ ಮೇಲೆ ಲೋಕಾಯುಕ್ತ ಪೊಲೀಸರು ಇಂದು ದಾಳಿ ನಡೆಸಿ ಪರಿಶೀಲನೆ ಕೈಗೊಂಡಿದ್ದಾರೆ.
ತುಮಕೂರು ಸಪ್ತಗಿರಿ ಬಡಾವಣೆಯಲ್ಲಿರುವ ನಿವಾಸ ಹಾಗೂ ಪಾವಗಡ ತಾಲೂಕು ಅರಸೀಕೆರೆಯ ನಿವಾಸ ಹಾಗೂ ಟೂಡಾ ಕಚೇರಿಯಲ್ಲಿ ಮೂರು ಪ್ರತ್ಯೇಕ ತಂಡಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಲಾಗಿದ್ದು ಮಹತ್ವದ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಳೆದ 18 ತಿಂಗಳಿನಿಂದ ಟೂಡಾ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.