ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ 7 ಜಿಲ್ಲೆಗಳಲ್ಲಿ ಗುರುವಾರ ಬೆಳಗ್ಗೆ ಲೋಕಾಯುಕ್ತ ಪೊಲೀಸರು ಭ್ರಷ್ಟ ಅಧಿಕಾರಿಗಳ ನಿವಾಸ, ಕಚೇರಿಗಳ ಮೇಲೆ ದಾಳಿ ನಡೆಸಿದ್ದಾರೆ.
ಬೆಂಗಳೂರು, ಕೋಲಾರ, ಕಲಬುರಗಿ, ದಾವಣಗೆರೆ, ತುಮಕೂರು, ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ ನಡೆದಿದೆ.
8 ಮಂದಿ ಭ್ರಷ್ಟ ಅಧಿಕಾರಿಗಳ ನಿವಾಸ, ಕಚೇರಿಗಳಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ. ಬೆಂಗಳೂರಿನ ಡಿಪಿಎಆರ್ ಚೀಫ್ ಇಂಜಿನಿಯರ್ ಟಿ.ಡಿ.ನಂಜುಡಪ್ಪ, ಬಿಬಿಎಂಪಿಯ ಎಕ್ಸಿಕ್ಯೂಟಿವ್ ಇಂಜಿನಿಯರ್ ಹೆಚ್.ಬಿ.ಕಲ್ಲೇಶಪ್ಪ ಮನೆಗಳ ಮೇಲೆ ದಾಳಿ ನಡೆಸಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4