ತುಮಕೂರು: ಅಕ್ರಮ ಆಸ್ತಿಗಳಿಕೆ ಆರೋಪದ ಹಿನ್ನೆಲೆಯಲ್ಲಿ ಸರ್ಕಾರಿ ಆಸ್ಪತ್ರೆ ವೈದ್ಯರೊಬ್ಬರ ಮನೆ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.
ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ತಾವರೆಕೆರೆಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರಾಗಿ ಕೆಲಸ ಮಾಡುತ್ತಿರುವ ಡಾ ಜಗದೀಶ್ ಮನೆ ಲೋಕಾಯುಕ್ತರು ದಾಳಿ ಮಾಡಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.
ತುಮಕೂರು ನಗರದ ಬಟವಾಡಿ ಬಳಿಯಿರುವ ಮನೆ, ಮಂಜುನಾಥ್ ನಗರದಲ್ಲಿರುವ ಕಾಂಪ್ಲೆಕ್ಸ್, ಶಿರಾ ತಾಲೂಕಿನ ಯಲ್ಪೆನಹಳ್ಳಿರುವ ಮನೆ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ.
ಸಹೋದರ ಕಾಂತರಾಜ್ ಹಾಗೂ ಡಾ.ಜಗದೀಶ್ ಪತ್ನಿ ರೂಪ ಹೆಸರಿನಲ್ಲಿರುವ ಮನೆ ಜಮೀನಿನ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ. ಜೊತೆಗೆ ಶಿರಾ ತಾಲೂಕಿನ ಬರಗೂರಿನಲ್ಲಿ ವೈದ್ಯರ ತಾಯಿ ಹೆಸರಿನಲ್ಲಿ ಆಸ್ತಿ ದಾಖಲೆ ಹಾಗೂ ಬರಗೂರಿನಲ್ಲಿ ಮೂರು ಕಡೆ ತುಮಕೂರು ಸೇರಿದಂತೆ ಒಟ್ಟು ಆರು ಕಡೆ ಲೋಕಾಯುಕ್ತ ದಾಳಿ ಮಾಡಿದ್ದಾರೆ. ಲೋಕಾಯುಕ್ತ ಪೊಲೀಸರಿಂದ ಮುಂದುವರೆದ ಪರಿಶೀಲನೆ ನಡೆಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4