nammatumakuru

    Subscribe to Updates

    Get the latest creative news from FooBar about art, design and business.

    What's Hot

    SBI ಗ್ರಾಹಕರಿಗೆ ಹೊಸ ರೂಲ್ಸ್; ATMನಲ್ಲಿ ಹಣ ತೆಗೆಯುವ ಮುನ್ನ ಈ ನಿಯಮ ತಿಳಿಯಿರಿ!

    October 5, 2026

    ಗೋವಾ ಹೋಗುವವರಿಗೆ ಸಿಹಿಸುದ್ದಿ; ಬೆಂಗಳೂರಿನಿಂದ ನೇರ ವಂದೇ ಭಾರತ್, ಮಾರ್ಗದಲ್ಲಿ ಈ 14 ನಿಲ್ದಾಣ!

    October 5, 2026

    ನೋಟಿನಲ್ಲಿರುವ ಗಾಂಧೀಜಿ ಚಿತ್ರ ನಿಜವಾದ ಫೋಟೋವೇ? ಈ ಹಳೆಯ ಚಿತ್ರದ ಹಿಂದಿದೆ ಕುತೂಹಲಕಾರಿ ಕಥೆ!

    October 5, 2026
    Facebook Twitter Instagram
    ಟ್ರೆಂಡಿಂಗ್
    • SBI ಗ್ರಾಹಕರಿಗೆ ಹೊಸ ರೂಲ್ಸ್; ATMನಲ್ಲಿ ಹಣ ತೆಗೆಯುವ ಮುನ್ನ ಈ ನಿಯಮ ತಿಳಿಯಿರಿ!
    • ಗೋವಾ ಹೋಗುವವರಿಗೆ ಸಿಹಿಸುದ್ದಿ; ಬೆಂಗಳೂರಿನಿಂದ ನೇರ ವಂದೇ ಭಾರತ್, ಮಾರ್ಗದಲ್ಲಿ ಈ 14 ನಿಲ್ದಾಣ!
    • ನೋಟಿನಲ್ಲಿರುವ ಗಾಂಧೀಜಿ ಚಿತ್ರ ನಿಜವಾದ ಫೋಟೋವೇ? ಈ ಹಳೆಯ ಚಿತ್ರದ ಹಿಂದಿದೆ ಕುತೂಹಲಕಾರಿ ಕಥೆ!
    • ದಿಗ್ಗಜ ನಿರ್ದೇಶಕ ಸಿಂಗೀತಂ ಶ್ರೀನಿವಾಸ ರಾವ್ ನಿಧನ; ರಾಜ್‌ ಕುಮಾರ್ ಕುಟುಂಬದೊಂದಿಗೆ ಅವಿನಾಭಾವ ನಂಟು
    • ನೀಲಿ ಶಿವಲಿಂಗದ ಹಿಂದಿದೆ ಅಚ್ಚರಿಯ ಕಥೆ; ಅಫ್ಘಾನಿಸ್ತಾನದಿಂದ ಭಾರತಕ್ಕೆ ಬರುತ್ತಿದೆ ಅಪರೂಪದ ಶಿಲೆ
    • AIಗೆ ಫೋಟೋ ಅಪ್‌ ಲೋಡ್ ಮಾಡುವ ಮುನ್ನ ಎಚ್ಚರ! ನಿಮ್ಮ ಚಿತ್ರಕ್ಕೆ ಏನಾಗಬಹುದು?
    • ಜನಸಾಮಾನ್ಯರೇ ಗಮನಿಸಿ: ಅ.15ರಿಂದ UPIನಲ್ಲಿ ಹೊಸ ನಿಯಮ, ನಿಮ್ಮ ಹಣಕ್ಕೆ ಏನಾಗಲಿದೆ?
    • ಹಿಂದಿ ನಂತರ ಭಾರತದಲ್ಲಿ ಹೆಚ್ಚು ಮಾತನಾಡುವ ಭಾಷೆ ಯಾವುದು? ಕನ್ನಡಕ್ಕೆ ಎಷ್ಟನೇ ಸ್ಥಾನ?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಭ್ರಷ್ಟಾಚಾರವನ್ನು ಬುಡಸಮೇತ ಕಿತ್ತೊಗೆಯಲು ಲೋಕಾಯುಕ್ತ ಬದ್ದ: ಬಿ.ವೀರಪ್ಪ
    ತುಮಕೂರು October 21, 2024

    ಭ್ರಷ್ಟಾಚಾರವನ್ನು ಬುಡಸಮೇತ ಕಿತ್ತೊಗೆಯಲು ಲೋಕಾಯುಕ್ತ ಬದ್ದ: ಬಿ.ವೀರಪ್ಪ

    By adminOctober 21, 2024No Comments2 Mins Read
    b veerappa

    ತುಮಕೂರು: ಪ್ರಜಾ ಪ್ರಭುತ್ವದ ಬಹುದೊಡ್ಡ ಪಿಡುಗಾಗಿರುವ ಭ್ರಷ್ಟಾಚಾರವನ್ನು ಬುಡ ಸಮೇತ ಕಿತ್ತೊಗೆಯಲು ಲೋಕಾಯುಕ್ತ ಸಂಸ್ಥೆ ಸದಾ ಬದ್ಧವಾಗಿದೆ ಎಂದು ಉಪ ಲೋಕಾಯುಕ್ತ ಬಿ.ವೀರಪ್ಪ ಹೇಳಿದರು.

    ನಗರದ ಪರಿವೀಕ್ಷಣಾ ಮಂದಿರದಲ್ಲಿ ಭಾನುವಾರ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಜಿಲ್ಲೆಯ ಸಾರ್ವಜನಿಕರ ಸಮಸ್ಯೆಗಳನ್ನು ಪರಿಹರಿಸುವ ಸಲುವಾಗಿ 3 ದಿನಗಳ ಕಾಲ ಲೋಕಾಯುಕ್ತ ಕುಂದು–ಕೊರತೆ ಸಭೆ, ಬಾಕಿ ದೂರು ಅರ್ಜಿಗಳ ವಿಲೇವಾರಿ, ಕಾನೂನು ಅರಿವು ಸೇರಿದಂತೆ ಜಿಲ್ಲೆಯ ವಿವಿಧ ಭಾಗಗಳಿಗೆ ಭೇಟಿ ನೀಡಿದ್ದು, ರಾಜ್ಯದಲ್ಲೇ ಅತೀ ಹೆಚ್ಚು ದೂರುಗಳು ಜಿಲ್ಲೆಯಲ್ಲಿ ದಾಖಲಾಗಿವೆ ಎಂದು ತಿಳಿಸಿದರು.

    ತುಮಕೂರು ನಗರದ ಗುಬ್ಬಿ ವೀರಣ್ಣ ಕಲಾ ಕ್ಷೇತ್ರದಲ್ಲಿ ಅಕ್ಟೋಬರ್ 18ರಂದು ನಡೆದ ಸಾರ್ವಜನಿಕರ ಅಹವಾಲು ಸಭೆಯಲ್ಲಿ ಸಲ್ಲಿಕೆಯಾಗಿದ್ದ 299 ಹೊಸ ದೂರುಗಳಿಗೆ ಸಂಬಂಧಿಸಿದಂತೆ ಸೂಕ್ತ ವಿಚಾರಣೆ ನಡೆಸಿ 80 ಪ್ರಕರಣಗಳನ್ನು ಸ್ಥಳದಲ್ಲಿಯೇ ಪರಿಹರಿಸಲಾಗಿದೆ. ಲೋಕಾಯುಕ್ತ ಸಂಸ್ಥೆಯಲ್ಲಿ ಜಿಲ್ಲೆಗೆ ಸಂಬಂಧಪಟ್ಟ ಬಾಕಿ ಇದ್ದ 183 ಹಳೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಅಕ್ಟೋಬರ್ 19ರಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ದೂರುದಾರರು ಮತ್ತು ಪ್ರತಿ ದೂರುದಾರರ ಸಮ್ಮುಖದಲ್ಲಿ ವಿಚಾರಣೆ ನಡೆಸಿ 71 ಪ್ರಕರಣಗಳನ್ನು ಇತ್ಯರ್ಥಪಡಿಸಲಾಯಿತು ಎಂದು ತಿಳಿಸಿದರು.

    ಗುಬ್ಬಿ ಪಟ್ಟಣದ ಮಳೆ ನೀರಿನಿಂದ ನಿರಾಶ್ರಿತರಾಗಿದ್ದ ಹಂದಿಜೋಗರ ಕಾಲೋನಿಗೆ ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿ ತಾಲೂಕು ಆಡಳಿತದಿಂದ ಗುರುತಿಸಿರುವ ಸಾತೇನಹಳ್ಳಿ ಪ್ರದೇಶಕ್ಕೆ ತೆರಳುವಂತೆ ನಿವಾಸಿಗಳ ಮನವೊಲಿಸಲಾಗಿದೆ. ನಂತರ ನಿರಾಶ್ರಿತರಿಗಾಗಿ ತಾಲ್ಲೂಕು ಆಡಳಿತದಿಂದ ನಿರ್ಮಿಸಿರುವ ತಾತ್ಕಾಲಿಕ ಗಂಜಿ ಕೇಂದ್ರಕ್ಕೆ ಭೇಟಿ ನೀಡಿ ವ್ಯವಸ್ಥೆಗಳ ಬಗ್ಗೆ ಪರಿಶೀಲಿಸಲಾಗಿದೆ ಎಂದರು.

    ಸರ್ಕಾರಿ ಇಲಾಖಾಧಿಕಾರಿ–ಸಿಬ್ಬಂದಿಗಳು ಸಾರ್ವಜನಿಕರಿಗೆ ಸಕಾಲದಲ್ಲಿ ಸರ್ಕಾರಿ ಸೌಲಭ್ಯಗಳನ್ನು ಒದಗಿಸಬೇಕು. ಸಾರ್ವಜನಿಕರು ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಬೇಕು. ಭ್ರಷ್ಟಾಚಾರವನ್ನು ಸಂಪೂರ್ಣವಾಗಿ ನಿಯಂತ್ರಿಸಲು ಸಾರ್ವಜನಿಕರು ಕೂಡ ಬದಲಾಗಬೇಕಾದ ಅನಿವಾರ್ಯತೆ ಇದೆ ಎಂದು ತಿಳಿಸಿದರು.

    ಈ ಸಂದರ್ಭದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ನೂರುನ್ನಿಸಾ, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ತುಮಕೂರು ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎ.ವಿ. ಲಕ್ಷ್ಮೀನಾರಾಯಣ, ಪಾಲಿಕೆ ಆಯುಕ್ತ ಬಿ.ವಿ. ಅಶ್ವಿಜ, ಅಪರ ಜಿಲ್ಲಾಧಿಕಾರಿ ಡಾ.ಎನ್. ತಿಪ್ಪೇಸ್ವಾಮಿ ಸೇರಿದಂತೆ ಲೋಕಾಯುಕ್ತ ಸಂಸ್ಥೆಯ ಅಧಿಕಾರಿಗಳು ಹಾಜರಿದ್ದರು.

    ಭ್ರಷ್ಟಾಚಾರ ನರ್ಮೂಲನೆಗೆ ಪ್ರಜಾಪ್ರಭುತ್ವದ ನಾಲ್ಕು ಅಂಗಗಳು ಬಲಗೊಳ್ಳಬೇಕು:
    ಇದಕ್ಕೂ ಮುನ್ನ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ಸಾರ್ವಜನಿಕ ಆಡಳಿತದಲ್ಲಿ ಕರ್ನಾಟಕ ಲೋಕಾಯುಕ್ತ ಸಂಸ್ಥೆ ಮತ್ತು ಕಾನೂನು ಸೇವೆಗಳ ಪ್ರಾಧಿಕಾರದ ಪಾತ್ರ ಕುರಿತು ಏರ್ಪಡಿಸಿದ್ದ ಅರಿವು ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಉಪ ಲೋಕಾಯುಕ್ತ ಬಿ. ವೀರಪ್ಪ ಅವರು ಭ್ರಷ್ಟಾಚಾರ ನಿರ್ಮೂಲನೆಯಲ್ಲಿ ಪ್ರಜಾ ಪ್ರಭುತ್ವದ ನಾಲ್ಕು ಅಂಗಗಳು ಬಲಗೊಳ್ಳಬೇಕು. ಪ್ರಜಾಪ್ರಭುತ್ವದ ನಾಲ್ಕು ಅಂಗಗಳಾದ ಶಾಸಕಾಂಗ, ನ್ಯಾಯಾಂಗ, ಕಾರ್ಯಾಂಗ ಮತ್ತು ಪತ್ರಿಕಾ ರಂಗ ಬಲಗೊಂಡಾಗ ಮಾತ್ರ ಸಮಾಜದಲ್ಲಿ ಸಂಪೂರ್ಣವಾಗಿ ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಭ್ರಷ್ಟಾಚಾರ ಎಲ್ಲಾ ಕ್ಷೇತ್ರಗಳನ್ನೂ ವ್ಯಾಪಿಸಿದ್ದು, ಭ್ರಷ್ಟಾಚಾರವನ್ನು ತಡೆಗಟ್ಟಲು ಮತ್ತಷ್ಟು ಕಠಿಣ ಕಾನೂನುಗಳನ್ನು ಜಾರಿಗೆ ತರಬೇಕು ಮತ್ತು ಜನರೂ ಸಹ ಬದಲಾಗಬೇಕು. ರಾಜ್ಯ ಸರ್ಕಾರದ ಯಾವುದೇ ಇಲಾಖಾಧಿಕಾರಿ–ಸಿಬ್ಬಂದಿಗಳು ಕರ್ತವ್ಯ ಲೋಪವೆಸಗಿದ ಬಗ್ಗೆ ನಿಖರ ಮಾಹಿತಿ, ನೈಜತೆಯಿಂದ ಕೂಡಿರುವ ದೂರುಗಳನ್ನು ಲೋಕಾಯುಕ್ತ ಅಧಿಕಾರಿಗಳಿಗೆ ಸಲ್ಲಿಸಬಹುದಾಗಿದೆ. ಸಾರ್ವಜನಿಕರ ಸೇವೆಗೆ ಲೋಕಾಯುಕ್ತ ಸದಾ ಸಿದ್ಧವಿರುತ್ತದೆ ಎಂದು ತಿಳಿಸಿದರು.

    ಹೊರಗಡೆ ಔಷಧಿ ತರಲು ಚೀಟಿ ನೀಡುವಂತಿಲ್ಲ:ವೀರಪ್ಪ ಸೂಚನೆ

    ನಂತರ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿದ ಅವರು ಆಸ್ಪತ್ರೆಗೆ ಬರುವ ರೋಗಿಗಳಿಗೆ ಹೊರಗಡೆ ಔಷಧಿಗಳನ್ನು ತರಲು ಚೀಟಿಗಳನ್ನು ನೀಡಬಾರದು. ಪ್ರಯೋಗಾಲಯದ ಪರೀಕ್ಷೆಗಳನ್ನು ಖಾಸಗಿ ಪ್ರಯೋಗಾಲಯದಲ್ಲಿ ಮಾಡಿಸಲು ಸೂಚಿಸಬಾರದು. ತಪ್ಪಿದಲ್ಲಿ ಸಂಬಂಧಪಟ್ಟ ವೈದ್ಯರುಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಸೂಚನೆ ನೀಡಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ತುಮಕೂರಿನ ಪ್ರಮುಖ ಕೈಗಾರಿಕಾ ಪ್ರದೇಶಗಳಲ್ಲಿ ಬೃಹತ್ ಉದ್ಯೋಗಾವಕಾಶ: ತಕ್ಷಣವೇ ನೇಮಕಾತಿ!

    October 5, 2026

    ತುಮಕೂರು ವಿವಿಯಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ: ಕಣ್ಣಿನ ಆರೋಗ್ಯ ಕಾಪಾಡಿಕೊಳ್ಳಲು ಕರೆ

    October 3, 2026

    ತುಮಕೂರಿನಲ್ಲಿ 5 ಸಾವಿರ ಕೋಟಿ ಹೂಡಿಕೆಗೆ ರೆನೈಸ್ಸಾನ್ಸ್ ಆಸಕ್ತಿ: ಎಂ.ಬಿ.ಪಾಟೀಲ

    October 3, 2026

    Comments are closed.

    Our Picks

    SBI ಗ್ರಾಹಕರಿಗೆ ಹೊಸ ರೂಲ್ಸ್; ATMನಲ್ಲಿ ಹಣ ತೆಗೆಯುವ ಮುನ್ನ ಈ ನಿಯಮ ತಿಳಿಯಿರಿ!

    October 5, 2026

    ಗೋವಾ ಹೋಗುವವರಿಗೆ ಸಿಹಿಸುದ್ದಿ; ಬೆಂಗಳೂರಿನಿಂದ ನೇರ ವಂದೇ ಭಾರತ್, ಮಾರ್ಗದಲ್ಲಿ ಈ 14 ನಿಲ್ದಾಣ!

    October 5, 2026

    ನೀಲಿ ಶಿವಲಿಂಗದ ಹಿಂದಿದೆ ಅಚ್ಚರಿಯ ಕಥೆ; ಅಫ್ಘಾನಿಸ್ತಾನದಿಂದ ಭಾರತಕ್ಕೆ ಬರುತ್ತಿದೆ ಅಪರೂಪದ ಶಿಲೆ

    October 5, 2026

    ಟೀಂ ಇಂಡಿಯಾ ಸ್ಪಿನ್ನರ್ ಯಜುವೇಂದ್ರ ಚಾಹಲ್‌ ಗೆ ಬಿಗ್ ಶಾಕ್: ಟೆಸ್ಟ್ ಕನಸು ಅಪೂರ್ಣ!

    October 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    SBI ಗ್ರಾಹಕರಿಗೆ ಹೊಸ ರೂಲ್ಸ್; ATMನಲ್ಲಿ ಹಣ ತೆಗೆಯುವ ಮುನ್ನ ಈ ನಿಯಮ ತಿಳಿಯಿರಿ!

    October 5, 2026

    ನವದೆಹಲಿ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಗ್ರಾಹಕರ ATM ಬಳಕೆಗೆ ಸಂಬಂಧಿಸಿದಂತೆ ಕೆಲವು ಪ್ರಮುಖ ಬದಲಾವಣೆಗಳು ಜಾರಿಗೆ ಬಂದಿವೆ.…

    ಗೋವಾ ಹೋಗುವವರಿಗೆ ಸಿಹಿಸುದ್ದಿ; ಬೆಂಗಳೂರಿನಿಂದ ನೇರ ವಂದೇ ಭಾರತ್, ಮಾರ್ಗದಲ್ಲಿ ಈ 14 ನಿಲ್ದಾಣ!

    October 5, 2026

    ನೋಟಿನಲ್ಲಿರುವ ಗಾಂಧೀಜಿ ಚಿತ್ರ ನಿಜವಾದ ಫೋಟೋವೇ? ಈ ಹಳೆಯ ಚಿತ್ರದ ಹಿಂದಿದೆ ಕುತೂಹಲಕಾರಿ ಕಥೆ!

    October 5, 2026

    ದಿಗ್ಗಜ ನಿರ್ದೇಶಕ ಸಿಂಗೀತಂ ಶ್ರೀನಿವಾಸ ರಾವ್ ನಿಧನ; ರಾಜ್‌ ಕುಮಾರ್ ಕುಟುಂಬದೊಂದಿಗೆ ಅವಿನಾಭಾವ ನಂಟು

    October 5, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.